Maharashtra Accident: ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ, ತಕ್ಷಣವೇ ಹೊತ್ತಿಕೊಂಡ ಬೆಂಕಿ, ನಾಲ್ವರು ಸಜೀವ ದಹನ

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯ ಲೋನಾವಾಲಾ ಬಳಿಯ ಮೇಲ್ಸೇತುವೆಯಲ್ಲಿ ತೈಲ ಟ್ಯಾಂಕರ್ ಪಲ್ಟಿಯಾಗಿದ್ದು, ಕ್ಷಣಮಾತ್ರದಲ್ಲೇ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಸಜೀವ ದಹನವಾಗಿದ್ದಾರೆ.

Maharashtra Accident: ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ, ತಕ್ಷಣವೇ ಹೊತ್ತಿಕೊಂಡ ಬೆಂಕಿ, ನಾಲ್ವರು ಸಜೀವ ದಹನ
ಟ್ಯಾಂಕರ್Image Credit source: Lokmat Times
Follow us
|

Updated on: Jun 13, 2023 | 2:29 PM

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯ ಲೋನಾವಾಲಾ ಬಳಿಯ ಮೇಲ್ಸೇತುವೆಯಲ್ಲಿ ತೈಲ ಟ್ಯಾಂಕರ್ ಪಲ್ಟಿಯಾಗಿದ್ದು, ಕ್ಷಣಮಾತ್ರದಲ್ಲೇ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಸಜೀವ ದಹನವಾಗಿದ್ದಾರೆ. ಇದರಿಂದಾಗಿ ಸೇತುವೆಯ ಕೆಳಗೂ ಅಪಘಾತಗಳು ಸಂಭವಿಸಿವೆ ಎಂಬ ಮಾಹಿತಿ ಕೇಳಿಬರುತ್ತಿದೆ. ಈ ಅಗ್ನಿ ಅವಘಡದಿಂದಾಗಿ ರಕ್ಷಣಾ ಕಾರ್ಯಾಚರಣೆಯು ಯುದ್ಧೋಪಾದಿಯಲ್ಲಿ ನಡೆಯುತ್ತಿದ್ದು, ಸದ್ಯ ಲೋನಾವಾಲಾ ನಗರದಿಂದ ವಾಹನ ಸಂಚಾರವನ್ನು ಬದಲಿಸಲಾಗಿದೆ. ಎಕ್ಸ್‌ಪ್ರೆಸ್‌ವೇಯಲ್ಲಿ ಭಾರಿ ಟ್ರಾಫಿಕ್ ಜಾಮ್ ಆಗಬಹುದು, ಆದ್ದರಿಂದ ರಕ್ಷಣಾ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಲು ಪ್ರಯತ್ನಿಸಲಾಗುತ್ತಿದೆ.

ಸಿಕ್ಕಿರುವ ಮಾಹಿತಿಯ ಪ್ರಕಾರ ಪುಣೆ-ಮುಂಬೈ ಹೆದ್ದಾರಿಯ ಖಂಡಾಲಾ ಘಾಟ್‌ನಲ್ಲಿರುವ ಕುನೆ ಸೇತುವೆಯ ಮೇಲೆ ಭೀಕರ ಅಪಘಾತ ಸಂಭವಿಸಿದೆ. ಕೆಮಿಕಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಟ್ಯಾಂಕರ್ ಗೆ ಬೆಂಕಿ ತಗುಲಿ ಭಾರಿ ಅವಘಡ ಸಂಭವಿಸಿದೆ. ಈ ಅವಘಡದಿಂದ ಟ್ಯಾಂಕರ್‌ನಲ್ಲಿದ್ದ ಕೆಮಿಕಲ್‌ ರಸ್ತೆಗೆ ಹರಿದು ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

ಮತ್ತಷ್ಟು ಓದಿ: ಧಾರವಾಡ: ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಟ್ಯಾಂಕರ್‌ನಲ್ಲಿದ್ದ ಓರ್ವ ಸಾವು

ರಾಸಾಯನಿಕ ಸೋರಿಕೆಯಿಂದ ಬೈಕ್ ಸವಾರ ರಸ್ತೆಗೆ ಬಿದ್ದಿರುವುದು ಅತ್ಯಂತ ಆಘಾತಕಾರಿ ಸಂಗತಿ. ಈ ವೇಳೆ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ 12 ವರ್ಷದ ಬಾಲಕನೋರ್ವ ಬಿದ್ದು ಸಾವನ್ನಪ್ಪಿದ್ದು, ಪೋಷಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಟ್ಯಾಂಕರ್ ಚಾಲಕ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಮತ್ತು ತುರ್ತು ಸೇವೆಗಳು ಸ್ಥಳಕ್ಕೆ ಧಾವಿಸಿವೆ ಎಂದು ವರದಿಯಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಅಪಘಾತದಲ್ಲಿ ಇದುವರೆಗೆ ಒಟ್ಟು 4 ಜನ ಸಾವನ್ನಪ್ಪಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ