ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯ ಲೋನಾವಾಲಾ ಬಳಿಯ ಮೇಲ್ಸೇತುವೆಯಲ್ಲಿ ತೈಲ ಟ್ಯಾಂಕರ್ ಪಲ್ಟಿಯಾಗಿದ್ದು, ಕ್ಷಣಮಾತ್ರದಲ್ಲೇ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಸಜೀವ ದಹನವಾಗಿದ್ದಾರೆ. ಇದರಿಂದಾಗಿ ಸೇತುವೆಯ ಕೆಳಗೂ ಅಪಘಾತಗಳು ಸಂಭವಿಸಿವೆ ಎಂಬ ಮಾಹಿತಿ ಕೇಳಿಬರುತ್ತಿದೆ. ಈ ಅಗ್ನಿ ಅವಘಡದಿಂದಾಗಿ ರಕ್ಷಣಾ ಕಾರ್ಯಾಚರಣೆಯು ಯುದ್ಧೋಪಾದಿಯಲ್ಲಿ ನಡೆಯುತ್ತಿದ್ದು, ಸದ್ಯ ಲೋನಾವಾಲಾ ನಗರದಿಂದ ವಾಹನ ಸಂಚಾರವನ್ನು ಬದಲಿಸಲಾಗಿದೆ. ಎಕ್ಸ್‌ಪ್ರೆಸ್‌ವೇಯಲ್ಲಿ ಭಾರಿ ಟ್ರಾಫಿಕ್ ಜಾಮ್ ಆಗಬಹುದು, ಆದ್ದರಿಂದ ರಕ್ಷಣಾ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಲು ಪ್ರಯತ್ನಿಸಲಾಗುತ್ತಿದೆ.
ಸಿಕ್ಕಿರುವ ಮಾಹಿತಿಯ ಪ್ರಕಾರ ಪುಣೆ-ಮುಂಬೈ ಹೆದ್ದಾರಿಯ ಖಂಡಾಲಾ ಘಾಟ್‌ನಲ್ಲಿರುವ ಕುನೆ ಸೇತುವೆಯ ಮೇಲೆ ಭೀಕರ ಅಪಘಾತ ಸಂಭವಿಸಿದೆ.
ಕೆಮಿಕಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಟ್ಯಾಂಕರ್ ಗೆ ಬೆಂಕಿ ತಗುಲಿ ಭಾರಿ ಅವಘಡ ಸಂಭವಿಸಿದೆ. ಈ ಅವಘಡದಿಂದ ಟ್ಯಾಂಕರ್‌ನಲ್ಲಿದ್ದ ಕೆಮಿಕಲ್ ರಸ್ತೆಗೆ ಹರಿದು ಟ್ರಾಫಿಕ್ ಜಾಮ್ ಉಂಟಾಗಿತ್ತು.
ಮತ್ತಷ್ಟು ಓದಿ: ಧಾರವಾಡ: ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಟ್ಯಾಂಕರ್‌ನಲ್ಲಿದ್ದ ಓರ್ವ ಸಾವು
ರಾಸಾಯನಿಕ ಸೋರಿಕೆಯಿಂದ ಬೈಕ್ ಸವಾರ ರಸ್ತೆಗೆ ಬಿದ್ದಿರುವುದು ಅತ್ಯಂತ ಆಘಾತಕಾರಿ ಸಂಗತಿ. ಈ ವೇಳೆ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ 12 ವರ್ಷದ ಬಾಲಕನೋರ್ವ ಬಿದ್ದು ಸಾವನ್ನಪ್ಪಿದ್ದು, ಪೋಷಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಟ್ಯಾಂಕರ್ ಚಾಲಕ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಮತ್ತು ತುರ್ತು ಸೇವೆಗಳು ಸ್ಥಳಕ್ಕೆ ಧಾವಿಸಿವೆ ಎಂದು ವರದಿಯಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಅಪಘಾತದಲ್ಲಿ ಇದುವರೆಗೆ ಒಟ್ಟು 4 ಜನ ಸಾವನ್ನಪ್ಪಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ