Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Accident: ಮಹಾರಾಷ್ಟ್ರದಲ್ಲಿ ರಸ್ತೆ ಅಪಘಾತ, ಒಂದೇ ಕುಟುಂಬದ ನಾಲ್ವರ ದುರ್ಮರಣ, ಇಬ್ಬರಿಗೆ ಗಂಭೀರ ಗಾಯ

ಮಹಾರಾಷ್ಟ್ರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

Maharashtra Accident: ಮಹಾರಾಷ್ಟ್ರದಲ್ಲಿ ರಸ್ತೆ ಅಪಘಾತ, ಒಂದೇ ಕುಟುಂಬದ ನಾಲ್ವರ ದುರ್ಮರಣ, ಇಬ್ಬರಿಗೆ ಗಂಭೀರ ಗಾಯ
ಅಪಘಾತ
Follow us
ನಯನಾ ರಾಜೀವ್
|

Updated on: Mar 05, 2023 | 12:15 PM

ಮಹಾರಾಷ್ಟ್ರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹಾರಾಷ್ಟ್ರದ ಲಾತೂರ್​ನಲ್ಲಿ ಘಟನೆ ನಡೆದಿದೆ, ಟೆಂಪೋ ಒಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಆರು ಮಂದಿಯು ಒಂದೇ ಮೋಟಾರ್​ ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದರು, ಅದರಲ್ಲು ತಪ್ಪು ದಿಕ್ಕಿನಲ್ಲಿ ಚಲಿಡುತ್ತಿದ್ದಾಗ, ಎದುರಿನಿಂದ ಟೆಂಪೋ ಬಂದು ಡಿಕ್ಕಿ ಹೊಡೆದಿದೆ.

ಮತ್ತಷ್ಟು ಓದಿ: ಮಂಡ್ಯ: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು

ಮೃತರು ಕಲಾಂಬ್ ಕಡೆಗೆ ಹೋಗುತ್ತಿದ್ದರು, ಗೇಟಗಾಂವ್ ಪೊಲೀಸ್ ಠಾಣೆಯ ತಂಡವು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಲಾತೂರ್ ಸರ್ಕಾರಿ ಆಸ್ಪತ್ರೆಗೆ ಕೊಂಡಯ್ದರು ಎಂದು ಸಬ್ ಇನ್ಸ್‌ಪೆಕ್ಟರ್ ನಂದಕಿಶೋರ ಕಾಂಬಳೆ ತಿಳಿಸಿದ್ದಾರೆ.

ಈ ಘಟನೆಯ ಕೆಲವೇ ಗಂಟೆಗಳ ಮೊದಲು, ಅಹಮದ್‌ಪುರ ತೆಹಸಿಲ್‌ನ ಶಿರೂರ್ ತಾಜ್‌ಬಂದ್-ಮುಖೇಡ್‌ನ ಓಮರ್ಗಾ ಪತಿ ಬಳಿ ಇದೇ ರೀತಿಯ ಅಪಘಾತದಲ್ಲಿ ಇಬ್ಬರು ಮೋಟಾರ್‌ಬೈಕ್ ಸವಾರರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಮಧ್ಯಾಹ್ನ 3 ಗಂಟೆ ಸುಮಾರಿಗೆ ಕುರಿಗಳನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ಟೆಂಪೋಗೆ ಮೋಟಾರ್ ಬೈಕ್ ಡಿಕ್ಕಿ ಹೊಡೆದಿತ್ತು. ಆ ದುರ್ಘಟನೆಯಲ್ಲಿ ಮೃತರನ್ನು ಹಮೀದ್ ಚಂದುಲಾಲ್ ಸಯ್ಯದ್ (45, ಡೊಂಗರಗಾಂವ್ ಬವಲ್ಗಾಂವ್ ನಿವಾಸಿ, ಮುಖೇದ್, ನಾಂದೇಡ್ ಜಿಲ್ಲೆಯ ನಿವಾಸಿ) ಮತ್ತು ಆನಂದ್ ಗೋವಿಂದರಾವ್ ಕದಮ್ (ಬಬಲ್ಗಾಂವ್, ಅಹಮದ್ಪುರ್ ತಹಸಿಲ್, ಲಾತೂರ್ ನಿವಾಸಿ) ಎಂದು ಗುರುತಿಸಲಾಗಿದೆ. ಟೆಂಪೋ ಪಲ್ಟಿಯಾಗಿ ಒಂಬತ್ತು ಕುರಿಗಳು ಸಾವನ್ನಪ್ಪಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ