ಮಹಾರಾಷ್ಟ್ರ: ನಾಸಿಕ್​ನ ಹೆದ್ದಾರಿಯಲ್ಲಿ ಕಾರು ಕಂಟೇನರ್​ಗೆ ಡಿಕ್ಕಿ, 5 ಮಂದಿ ಸಾವು

ನಾಸಿಕ್‌ನ ಮನ್ಮಾಡ್-ಯೇವಾಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ ಭೀಕರ ಅಪಘಾತ(Accident) ಸಂಭವಿಸಿದೆ. ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಕಾರು ಮತ್ತು ಕಂಟೈನರ್ ಮುಖಾಮುಖಿ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಂಕೈ ರೈಲ್ವೆ ಮೇಲ್ಸೇತುವೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರನ್ನು ರೋಹಿತ್ ಧನವತೆ, ಶ್ರೇಯಸ್ ಧನವತೆ, ಲಲಿತ್ ಸೋನಾವಾನೆ, ಗಣೇಶ್ ಸೋನಾವಾನೆ ಮತ್ತು ಪ್ರತೀಕ್ ನಾಯಕ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ನಾಸಿಕ್ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾರಾಷ್ಟ್ರ: ನಾಸಿಕ್​ನ ಹೆದ್ದಾರಿಯಲ್ಲಿ ಕಾರು ಕಂಟೇನರ್​ಗೆ ಡಿಕ್ಕಿ, 5 ಮಂದಿ ಸಾವು
ಅಪಘಾತImage Credit source: ABP Live
Follow us
ನಯನಾ ರಾಜೀವ್
|

Updated on: Nov 27, 2023 | 9:11 AM

ನಾಸಿಕ್‌ನ ಮನ್ಮಾಡ್-ಯೇವಾಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ ಭೀಕರ ಅಪಘಾತ(Accident) ಸಂಭವಿಸಿದೆ. ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಕಾರು ಮತ್ತು ಕಂಟೈನರ್ ಮುಖಾಮುಖಿ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಂಕೈ ರೈಲ್ವೆ ಮೇಲ್ಸೇತುವೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರನ್ನು ರೋಹಿತ್ ಧನವತೆ, ಶ್ರೇಯಸ್ ಧನವತೆ, ಲಲಿತ್ ಸೋನಾವಾನೆ, ಗಣೇಶ್ ಸೋನಾವಾನೆ ಮತ್ತು ಪ್ರತೀಕ್ ನಾಯಕ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ನಾಸಿಕ್ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಐವರು ಯುವಕರು ಮನ್ಮಾಡ್ ಸಮೀಪದ ಕುಂದಲ್‌ಗಾಂವ್‌ನ ಮಹಸೋಬಾ ದೇವಸ್ತಾನದಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಊರಿಗೆ ಮರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರು ತೀವ್ರವಾಗಿ ಜಖಂಗೊಂಡಿದೆ. ಮೃತದೇಹಗಳನ್ನು ಮನ್ಮಾಡ್‌ನ ಉಪಜಿಲಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಕಾರು ಮಹಾರಾಷ್ಟ್ರದ ನೋಂದಣಿ ಫಲಕವನ್ನು ಹೊಂದಿತ್ತು.

ಸಂಜೆ 4 ರಿಂದ 5 ರ ನಡುವೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತಕ್ಕೆ ಏನು ಕಾರಣ ಎನ್ನುವ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ರಸ್ತೆ ಮಧ್ಯದಲ್ಲಿಯೇ ಅಪಘಾತ ಸಂಭವಿಸಿದ್ದು, ಸಂಚಾರಕ್ಕೆ ಅಡ್ಡಿ ಉಂಟಾಯಿತು. ಧಾರಾಕಾರ ಮಳೆ ಹಾಗೂ ಕತ್ತಲೆಯಿಂದಾಗಿ ಪರಿಹಾರ ಕಾರ್ಯ ಕೈಗೊಳ್ಳಲು ಹಾಗೂ ವಾಹನ ತೆಗೆಯಲು ತೊಂದರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕೇರಳ: ಎರಡು ಕೆಎಸ್​ಆರ್​ಟಿಸಿ ಬಸ್​ಗಳ​ ನಡುವೆ ಅಪಘಾತ, 30ಮಂದಿಗೆ ಗಾಯ

ಈ ಸಂಬಂಧ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತ ನಡೆದ ಸ್ಥಳದಲ್ಲಿ ಅಪಾರ ಜನ ಜಮಾಯಿಸಿದ್ದರು. ಜುಲೈನಲ್ಲಿ ಮಹಾರಾಷ್ಟ್ರದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ 25 ಜನರು ಸಾವನ್ನಪ್ಪಿದರು ಮತ್ತು 8 ಮಂದಿ ಗಾಯಗೊಂಡಿದ್ದರು. ಬುಲ್ಧಾನಾದಲ್ಲಿ ಬಸ್‌ನ ಟೈರ್ ಒಡೆದು ಪಲ್ಟಿಯಾಗಿ ಈ ಅವಘಡ ಸಂಭವಿಸಿದೆ.

ಬಸ್ ಯವತ್ಮಾಲ್ ನಿಂದ ಪುಣೆಗೆ ಹೋಗುತ್ತಿತ್ತು. ರಾತ್ರಿ 2 ಗಂಟೆಗೆ ಅಪಘಾತ ಸಂಭವಿಸಿತ್ತು. ರಾಜ್ಯದ ಮಡ್ಕಿ ಗ್ರಾಮದಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಕಾರು 200 ಅಡಿ ಆಳದ ಕಂದಕಕ್ಕೆ ಬಿದ್ದು ತೆಲಂಗಾಣದ 4 ಜನರು ಸಾವನ್ನಪ್ಪಿದ್ದರು.

ಅಧ್ಯಯನದ ಪ್ರಕಾರ ಮಹಾರಾಷ್ಟ್ರದಲ್ಲಿ ಕಳೆದ 3 ವರ್ಷಗಳಲ್ಲಿ ರಸ್ತೆ ಅಪಘಾತಗಳಿಂದ ಸಾವನ್ನಪ್ಪಿದವರ ಸಂಖ್ಯೆ 2,000 ಕ್ಕಿಂತ ಹೆಚ್ಚಾಗಿದೆ. 2022 ರಲ್ಲಿ ರಾಜ್ಯದಲ್ಲಿ ಒಟ್ಟು 14,883 ಜನರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದ್ದಾರೆ. ಇದು 2019 ರಲ್ಲಿ 12,788 ಸಾವುಗಳಿಗೆ ಹೋಲಿಸಿದರೆ 2,095 ಏರಿಕೆಯಾಗಿದೆ. 2022 ರಲ್ಲಿ 33,069 ರಸ್ತೆ ಅಪಘಾತಗಳು 2019 ರಲ್ಲಿ 32,925 ಕ್ಕೆ ಹೋಲಿಸಿದರೆ ರಾಜ್ಯದಲ್ಲಿ ಸಂಭವಿಸಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್