Narendra Modi Birthday: ಪ್ರಧಾನಿ ಮೋದಿ ಜನ್ಮದಿನವನ್ನು ಸೇವಾ ಪಾಕ್ಷಿಕ ಎಂದು ಆಚರಿಸಲಾಗುವುದು: ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್

ಪ್ರಧಾನಿ ಮೋದಿ ಅವರ 72ನೇ ವರ್ಷದ ಜನ್ಮದಿನವನ್ನು ಸೇವಾ ಪಾಕ್ಷಿಕ ಎಂದು ಆಚರಿಸಲು ಮಹರಾಷ್ಟ್ರ ಸರ್ಕಾರ ನಿರ್ಧರಿಸಿದೆ

Narendra Modi Birthday: ಪ್ರಧಾನಿ ಮೋದಿ ಜನ್ಮದಿನವನ್ನು ಸೇವಾ ಪಾಕ್ಷಿಕ ಎಂದು ಆಚರಿಸಲಾಗುವುದು: ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್
ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 16, 2022 | 8:01 PM

ಪ್ರತಿ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಕ್ಕೆ ಬಿಜೆಪಿ ದೇಶಾದ್ಯಂತ ವಿಶೇಷವಾಗಿ ಆಚರಸುತ್ತಿದ್ದು, ವಿಶೇಷವಾಗಿ ಬಿಜೆಪಿ ಸರ್ಕಾರ ಇರುವ ರಾಜ್ಯಗಳಲ್ಲಿ ಬಿಜೆಪಿ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತದೆ. ನಾಳೆ ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ. ಹೀಗಾಗಿ ಮಹರಾಷ್ಟ್ರದ ಏಕನಾಥ್ ಶಿಂಧೆ ನೇತೃತ್ವದ ಸಮಿಶ್ರ ಸರ್ಕಾರ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ಮಹಾತ್ಮ ಗಾಂಧಿಯವರ ಜನ್ಮದಿನದವರೆಗೆ “ಸೇವಾ ಪಾಕ್ಷಿಕ” ಎಂದು ಆಚರಿಸಲು ರಾಜ್ಯ ಸರ್ಕಾರದ ನಿರ್ಧರಿಸಿದೆ ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17 ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ. ಅವರು ಯಾವಾಗಲೂ ಜನರ ಸೇವೆ ಮಾಡಿ ಎಂದು ಹೇಳುತ್ತಾರೆ. ಹೀಗಾಗಿ ಈ ಅವಧಿಯಲ್ಲಿ ಸಾರ್ವಜನಿಕರು ಸರ್ಕಾರಕ್ಕೆ ಸಲ್ಲಿಸಿರುವ ಎಲ್ಲ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಎಂದು ರಾಜ್ಯ ಸಚಿವ ಸಂಪುಟ ಸಭೆಯ ನಂತರ ಫಡ್ನವೀಸ್ ತಿಳಿಸಿದರು.

ರಾಜ್ಯ ಸರ್ಕಾರದ ಮೂಲಗಳ ಪ್ರಕಾರ, ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಅರ್ಜಿಗಳ ಬಗ್ಗೆ ಮಾಹಿತಿ ಪಡೆದು, ವರದಿಯನ್ನು ಅಕ್ಟೋಬರ್ 5 ರಂದು ಆಯಾ ಆಡಳಿತ ಮುಖ್ಯಸ್ಥರಿಗೆ ವಿವರಣೆಯೊಂದಿಗೆ ಸಲ್ಲಿಸಬೇಕು. ಅಕ್ಟೋಬರ್ 10 ರೊಳಗೆ ಸರ್ಕಾರಕ್ಕೆ ವಿವರವಾದ ವರದಿಯನ್ನು ಸಲ್ಲಿಸಬೇಕು ಎಂದು ಇಲಾಖೆಗಳಿಗೆ ಸೂಚನೆ ನೀಡಲಾಗಿದೆ.

ಈ ಅಭಿಯಾನದ ಅಡಿಯಲ್ಲಿ, ಆಪ್ಲೆ ಸರ್ಕಾರ್, ಮಹಾರಾಷ್ಟ್ರ ರಾಜ್ಯ ವಿದ್ಯುತ್ ವಿತರಣಾ ಕಂಪನಿ ಲಿಮಿಟೆಡ್ (ಮಹಾಡಿಸ್ಕಾಂ), ಮಹಾ ಡಿಬಿಟಿ ಪೋರ್ಟಲ್ ಮತ್ತು ನಗ್ರಿ ಸೇವಾ ಕೇಂದ್ರದಂತಹ ರಾಜ್ಯ ಸರ್ಕಾರದ ಪೋರ್ಟಲ್‌ಗಳಲ್ಲಿ ಸೆಪ್ಟೆಂಬರ್ 10 ರವರೆಗೆ ಬಾಕಿ ಉಳಿದಿರುವ ಎಲ್ಲಾ ಅರ್ಜಿಗಳನ್ನು, ಅಕ್ಟೋಬರ್ 2 ರೊಳಗೆ ವಿಲೇವಾರಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಸೇವಾ ಪಾಕ್ಷಿಕದ ಒಳಗೆ ಒಳಪಡುವ ಇಲಾಖೆಗಳು:

ಮಳೆಯಿಂದ ಹಾನಿಗೊಳಗಾದ ರೈತರಿಗೆ ಪರಿಹಾರ (ಪರಿಹಾರ ಮತ್ತು ಪುನರ್ವಸತಿ ಇಲಾಖೆ), ತಾಂತ್ರಿಕ ಸಮಸ್ಯೆಗಳಿಂದಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ ಸಹಾಯ ಪಡೆಯದ ಫಲಾನುಭವಿಗಳು (ಕೃಷಿ ಮತ್ತು ಕಂದಾಯ ಇಲಾಖೆಗಳು), ಬಾಕಿ ಉಳಿದಿರುವ ಭೂ ದಾಖಲೆಗಳು ಮತ್ತು ಕೆನೆಪದರದ ಪ್ರಮಾಣೀಕರಣ (ಕಂದಾಯ ಇಲಾಖೆ), ಮತ್ತು ಪಡಿತರ ಚೀಟಿ ವಿತರಣೆ (ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ). ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ ಮತ್ತು ಆರೋಗ್ಯ ಇಲಾಖೆಗಳು, ಗ್ರಾಮೀಣಾಭಿವೃದ್ಧಿ ಮತ್ತು ನಗರಾಭಿವೃದ್ಧಿ ಇಲಾಖೆ, ನೀರು ಸರಬರಾಜು ಮತ್ತು ನಗರಾಭಿವೃದ್ಧಿ ಇಲಾಖೆ.

ರಾಷ್ಟ್ರದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:00 pm, Fri, 16 September 22