AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಮತದಾನ ಪ್ರಮಾಣ ಹೆಚ್ಚಾದಾಗಲೆಲ್ಲಾ ಗೆಲುವು ನಮ್ಮದೇ ಆಗಿದೆ ಎಂದು ದೇವೇಂದ್ರ ಫಡ್ನವಿಸ್

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಅಂತೂ ಮುಗಿದಿದೆ. ಇದೀಗ ಯಾವ ಪಕ್ಷ ಗೆಲುವು ಸಾಧಿಸಬಹುದು ಎನ್ನುವ ಕುತೂಹಲ ಶುರುವಾಗಿದೆ. ನವೆಂಬರ್ 23ರಂದು ಚುನಾವಣಾ ಫಲಿತಾಂಶ ಹೋರಬೀಳಲಿದ್ದು, ಈಗಾಗಲೇ ಎಲ್ಲಾ ಪಕ್ಷಗಳು ತಾವೇ ಗೆಲ್ಲುವುದು ಎನ್ನುವ ಭರವಸೆಯ ಮಾತುಗಳನ್ನಾಡುತ್ತಿದ್ದಾರೆ ಅದಕ್ಕೆ ಹತ್ತು ಹಲವು ಅವರದ್ದೇ ಆದ ಕಾರಣಗಳನ್ನು ಕೂಡ ನೀಡುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ಮತದಾನ ಪ್ರಮಾಣ ಹೆಚ್ಚಾದಾಗಲೆಲ್ಲಾ ಗೆಲುವು ನಮ್ಮದೇ ಆಗಿದೆ ಎಂದು ದೇವೇಂದ್ರ ಫಡ್ನವಿಸ್
ದೇವೇಂದ್ರ ಫಡ್ನವಿಸ್Image Credit source: NLC Bharat
ನಯನಾ ರಾಜೀವ್
|

Updated on: Nov 21, 2024 | 11:56 AM

Share

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಅಂತೂ ಮುಗಿದಿದೆ. ಇದೀಗ ಯಾವ ಪಕ್ಷ ಗೆಲುವು ಸಾಧಿಸಬಹುದು ಎನ್ನುವ ಕುತೂಹಲ ಶುರುವಾಗಿದೆ. ನವೆಂಬರ್ 23ರಂದು ಚುನಾವಣಾ ಫಲಿತಾಂಶ ಹೋರಬೀಳಲಿದ್ದು, ಈಗಾಗಲೇ ಎಲ್ಲಾ ಪಕ್ಷಗಳು ತಾವೇ ಗೆಲ್ಲುವುದು ಎನ್ನುವ ಭರವಸೆಯ ಮಾತುಗಳನ್ನಾಡುತ್ತಿದ್ದಾರೆ ಅದಕ್ಕೆ ಹತ್ತು ಹಲವು ಅವರದ್ದೇ ಆದ ಕಾರಣಗಳನ್ನು ಕೂಡ ನೀಡುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ಮತದಾನ ಪ್ರಮಾಣ ಹೆಚ್ಚಾದಾಗಲೆಲ್ಲಾ ಗೆಲುವು ನಮ್ಮದೇ ಆಗಿದೆ ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ. ಹೆಚ್ಚಿನ ಶೇಕಡಾವಾರು ಮತದಾನವು ಮಹಾಯುತಿಗೆ ಲಾಭವಾಗಲಿದೆ. ಮಹಾರಾಷ್ಟ್ರದಲ್ಲಿ ಶೇ.58.22ರಷ್ಟು ಮತದಾನವಾಗಿದೆ. ಭಾರತದ ಚುನಾವಣಾ ಆಯೋಗದ ಇತ್ತೀಚಿನ ಮತ್ತು ನವೀಕರಿಸಿದ ದತ್ತಾಂಶವು 288 ವಿಧಾನಸಭಾ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮಹಾರಾಷ್ಟ್ರವು ಶೇ.65.11 ಮತದಾನವನ್ನು ದಾಖಲಿಸಿದೆ.

ಕೊಲ್ಹಾಪುರದಲ್ಲಿ ಶೇ. 76.25ರಷ್ಟು ಮತದಾನವಾಗಿ ಅಗ್ರ ಸ್ಥಾನದಲ್ಲಿದೆ. ಮುಂಬೈ ಶೇ.52.07ಮತದಾನದೊಂದಿಗೆ ಕೊನೆಯ ಸ್ಥಾನದಲ್ಲಿದೆ. ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಮುಗಿದ ನಂತರ ಫಡ್ನವೀಸ್ ಬುಧವಾರ ಸಂಜೆ ನಾಗ್ಪುರದ ಆರ್‌ಎಸ್‌ಎಸ್ ಪ್ರಧಾನ ಕಚೇರಿಗೆ ಭೇಟಿ ನೀಡಿದರು.

ಮತ್ತಷ್ಟು ಓದಿ: Maharashtra Exit Poll: ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರುತ್ತಾ ಬಿಜೆಪಿ ಮೈತ್ರಿಕೂಟ?; ಎಕ್ಸಿಟ್​ ಪೋಲ್​ನಲ್ಲಿ ಮಹಾಯುತಿಗೆ ಮುನ್ನಡೆ

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಮಾಜಿ ಪ್ರಧಾನ ಕಾರ್ಯದರ್ಶಿ ಭಯ್ಯಾಜಿ ಜೋಶಿ ಅವರು ಮಹಲ್ ಪ್ರದೇಶದಲ್ಲಿರುವ ಸಂಘದ ಪ್ರಧಾನ ಕಚೇರಿಯಲ್ಲಿ ಉಪಸ್ಥಿತರಿದ್ದರು. ಫಡ್ನವೀಸ್ ಸುಮಾರು 15 ರಿಂದ 20 ನಿಮಿಷಗಳ ಕಾಲ ಅಲ್ಲಿದ್ದರು.

ಎಕ್ಸಿಟ್ ಪೋಲ್ ಹೇಳುವುದೇನು? ಆಡಳಿತಾರೂಢ ಮಹಾಯುತಿಯು ವಿಧಾನಸಭೆ ಚುನಾವಣೆಯಲ್ಲಿ ಪ್ರಬಲ ಪ್ರದರ್ಶನ ನೀಡುವ ಮೂಲಕ ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ (ಎಂವಿಎ)ಯನ್ನು ಸೋಲಿಸಿ ಅಧಿಕಾರವನ್ನು ಉಳಿಸಿಕೊಳ್ಳುವ ನಿರೀಕ್ಷೆಯಿದೆ , ಮಹಾರಾಷ್ಟ್ರದ 288 ಸ್ಥಾನಗಳ ಮತದಾನದ ಮುಕ್ತಾಯದ ನಂತರ ಬುಧವಾರದಂದು ಎಕ್ಸಿಟ್ ಪೋಲ್ ಭವಿಷ್ಯ ನುಡಿದಿದೆ.

ಮಹಾಯುತಿಯಲ್ಲಿ ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ ಸೇರಿದ್ದರೆ ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿಯಲ್ಲಿ ಕಾಂಗ್ರೆಸ್, ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿ (ಎಸ್‌ಪಿ) ಸೇರಿವೆ. ಮಹಾಯುತಿ ಮೈತ್ರಿಕೂಟಕ್ಕೆ 150-170 ಸೀಟುಗಳು ಮತ್ತು ಮಹಾ ವಿಕಾಸ್ ಅಘಾಡಿಗೆ 110-130 ಸೀಟುಗಳನ್ನು ಮ್ಯಾಟ್ರಿಜ್ ಎಕ್ಸಿಟ್ ಪೋಲ್ ಅಂದಾಜು ಮಾಡಿದೆ. ಇತರರು 8-10 ಸ್ಥಾನಗಳನ್ನು ಪಡೆಯಬಹುದು ಎಂದು ಅದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ