Maharashtra Assembly Election: ಮಹಾರಾಷ್ಟ್ರ ಚುನಾವಣೆ: ಮಹಾ ವಿಕಾಸ್ ಅಘಾಡಿ ಜತೆ ಜಂಟಿ ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್

|

Updated on: Nov 10, 2024 | 2:07 PM

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು (ನವೆಂಬರ್ 10) ಮಹಾರಾಷ್ಟ್ರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಾಗಿ ಮಹಾ ವಿಕಾಸ್ ಅಘಾಡಿ (ಎಂವಿಎ) ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್, ಎನ್‌ಸಿಪಿ-ಎಸ್‌ಸಿಪಿ ಸಂಸದ ಸುಪ್ರಿಯಾ ಸುಳೆ, ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ, ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮತ್ತು ಎಂವಿಎ ಮೈತ್ರಿಕೂಟದ ಇತರ ಮುಖಂಡರು ಉಪಸ್ಥಿತರಿದ್ದರು.

Maharashtra Assembly Election: ಮಹಾರಾಷ್ಟ್ರ ಚುನಾವಣೆ: ಮಹಾ ವಿಕಾಸ್ ಅಘಾಡಿ ಜತೆ ಜಂಟಿ ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್
ಪ್ರಣಾಳಿಕೆ
Follow us on

ಮುಂಬರಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅತ್ತ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡುತ್ತಿದ್ದಂತೆ ಕಾಂಗ್ರೆಸ್​ ಕೂಡ ಮಹಾ ವಿಕಾಸ್ ಅಘಾಡಿ ಜತೆ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಮಹಾ ವಿಕಾಸ್ ಅಘಾಡಿ ಮೈತ್ರಿಕೂಟವು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಈ ವೇಳೆ ಮಾತನಾಡಿದ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇಂದು ನಾವು ಮಹಾರಾಷ್ಟ್ರ ಚುನಾವಣೆಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡುತ್ತಿದ್ದೇವೆ.

ಮಹಾರಾಷ್ಟ್ರ ಚುನಾವಣೆ ದೇಶದ ಪಾಲಿಗೆ ಅತ್ಯಂತ ಮಹತ್ವದ ಚುನಾವಣೆ. ಈ ಚುನಾವಣೆ ದೇಶದ ಭವಿಷ್ಯವನ್ನೇ ಬದಲಿಸುವ ಚುನಾವಣೆ. ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ತಂದರೆ ಮಾತ್ರ ಇಲ್ಲಿ ಸ್ಥಿರ, ಉತ್ತಮ ಆಡಳಿತ ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಮಹಾವಿಕಾಸ್ ಅಘಾಡಿ ಅದರ ಪ್ರಣಾಳಿಕೆಯನ್ನು ‘ಮಹಾರಾಷ್ಟ್ರ ನಾಮ’ ಎಂದು ಹೆಸರಿಸಿದ್ದಾರೆ. ಪ್ರಣಾಳಿಕೆ ಬಿಡುಗಡೆ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಶಿವಸೇನೆ ಯುಬಿಟಿ ನಾಯಕ ಸಂಜಯ್ ರಾವತ್, ಎನ್‌ಸಿಪಿ ಎಸ್‌ಪಿ ನಾಯಕಿ ಸುಪ್ರಿಯಾ ಸುಳೆ, ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಸೇರಿದಂತೆ ಹಲವು ಪ್ರಮುಖ ನಾಯಕರು ಉಪಸ್ಥಿತರಿದ್ದರು.

50ರಷ್ಟು ಮೀಸಲಾತಿ ಮಿತಿಯನ್ನು ತೆಗೆದುಹಾಕುವುದಾಗಿ ಭರವಸೆ ನೀಡಿದ ಖರ್ಗೆ
ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ, ಕೈಗಾರಿಕೆ ಮತ್ತು ಉದ್ಯೋಗ, ನಗರಾಭಿವೃದ್ಧಿ, ಪರಿಸರ ಮತ್ತು ಸಾರ್ವಜನಿಕ ಕಲ್ಯಾಣವನ್ನು ಆಧರಿಸಿದ ಮಹಾರಾಷ್ಟ್ರದ ಪ್ರಗತಿ ಮತ್ತು ಅಭಿವೃದ್ಧಿಗೆ ನಮ್ಮಲ್ಲಿ ಐದು ಆಧಾರ ಸ್ತಂಭಗಳಿವೆ’ ಎಂದು ಹೇಳಿದರು.
ಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ನಿರುದ್ಯೋಗಿ ಯುವಕರಿಗೆ ಮಾಸಿಕ 4000 ರೂ. ನಮ್ಮ 25 ಲಕ್ಷ ರೂಪಾಯಿಗಳ ಆರೋಗ್ಯ ವಿಮಾ ಯೋಜನೆಯನ್ನು ಅಶೋಕ್ ಗೆಹ್ಲೋಟ್ ಅವರು ರಾಜಸ್ಥಾನದಲ್ಲಿ ಪ್ರಾರಂಭಿಸಿದರು ಮತ್ತು ಮಹಾರಾಷ್ಟ್ರದಲ್ಲಿಯೂ ಜಾರಿಗೆ ತರಲಾಗುವುದು. ಉಚಿತವಾಗಿ ಔಷಧ ನೀಡುವ ಭರವಸೆಯನ್ನೂ ನೀಡುತ್ತೇವೆ. ನಾವು ಜಾತಿ ಗಣತಿ ನಡೆಸಲು ನಿರ್ಧರಿಸಿದ್ದೇವೆ ಮತ್ತು ತಮಿಳುನಾಡಿನಂತೆ ಮೀಸಲಾತಿ ಮೇಲಿನ 50% ಮಿತಿಯನ್ನು ತೆಗೆದುಹಾಕುತ್ತೇವೆ.

ಮತ್ತಷ್ಟು ಓದಿ: ಮಹಾರಾಷ್ಟ್ರ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ ಮಾಡಿದ ಅಮಿತ್ ಶಾ, ಭರವಸೆಗಳೇನು?

ಮಹಾ ವಿಕಾಸ್ ಅಘಾಡಿಯ ಐದು ಖಾತರಿಗಳು
ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಒಕ್ಕೂಟವು ಐದು ಖಾತರಿಗಳನ್ನು ನೀಡುವುದಾಗಿ ಭರವಸೆ ನೀಡಿರುವುದು ಗಮನಾರ್ಹವಾಗಿದೆ. ಇದರ ಪ್ರಕಾರ, ಮೊದಲ ಗ್ಯಾರಂಟಿ ಮಹಾಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಮಾಸಿಕ 3,000 ರೂ. ಮತ್ತು ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಸೇವೆಯ ಭರವಸೆಯನ್ನು ಒಳಗೊಂಡಿದೆ. ಎರಡನೆಯ ಖಾತರಿ ಸಮಾನತೆ.

ಇದರ ಅಡಿಯಲ್ಲಿ ಜಾತಿ ಗಣತಿ ನಡೆಸಲಾಗುವುದು ಮತ್ತು 50 ಪ್ರತಿಶತ ಮೀಸಲಾತಿಯ ಮಿತಿಯನ್ನು ತೆಗೆದುಹಾಕಲಾಗುತ್ತದೆ. ಮೂರನೇ ಗ್ಯಾರಂಟಿ ಕುಟುಂಬ ರಕ್ಷಾ ಯೋಜನೆಯಾಗಿದೆ, ಇದು 25 ಲಕ್ಷದವರೆಗೆ ಆರೋಗ್ಯ ವಿಮೆ ಮತ್ತು ಉಚಿತ ಔಷಧಿಗಳನ್ನು ನೀಡುತ್ತದೆ. ಕೃಷಿ ಸಮೃದ್ಧಿ ಯೋಜನೆಯಡಿ ರೈತರು ಸಕಾಲದಲ್ಲಿ ಸಾಲ ಮರುಪಾವತಿಸಿದರೆ 3 ಲಕ್ಷ ರೂ.ವರೆಗಿನ ಸಾಲ ಮನ್ನಾ ಹಾಗೂ 50 ಸಾವಿರ ಪ್ರೋತ್ಸಾಹ ಧನ ನೀಡುವುದಾಗಿ ಭರವಸೆ ನೀಡಿದ್ದಾರೆ. ಯುವಕರಿಗೆ ನೀಡಿದ ಭರವಸೆಯಲ್ಲಿ ನಿರುದ್ಯೋಗಿಗಳಿಗೆ ಮಾಸಿಕ 4000 ರೂ. ನೀಡಲಾಗುವುದು.

ಮಹಾರಾಷ್ಟ್ರದಲ್ಲಿ ನವೆಂಬರ್ 20 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ನವೆಂಬರ್ 23 ರಂದು ರಾಜ್ಯದ ಮತಗಳ ಎಣಿಕೆ ನಡೆಯಲಿದೆ. 2019ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 105, ಶಿವಸೇನೆ 56, ಕಾಂಗ್ರೆಸ್ 44. 2014ರಲ್ಲಿ ಬಿಜೆಪಿ 122, ಶಿವಸೇನೆ 63, ಕಾಂಗ್ರೆಸ್ 42 ಸ್ಥಾನ ಗಳಿಸಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ