ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ, ದೇವೇಂದ್ರ ಫಡ್ನವಿಸ್ ಹೇಳಿದ್ದೇನು?

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮಹಾಯುತಿ ಮುನ್ನಡೆ ಸಾಧಿಸುತ್ತಿದ್ದು, ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎನ್ನುವ ಕುರಿತು ಉಪಮುಖ್ಯಮಮತ್ರಿ ದೇವೇಂದ್ರ ಫಡ್ನವಿಸ್ ಮಾತನಾಡಿದ್ದಾರೆ. ಎಪಿಬಿ ಲೈವ್ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಅವರು, ನಾವ್ಯಾರೂ ಈ ಫಲಿತಾಂಶ ನಿರೀಕ್ಷಿಸಿರಲಿಲ್ಲ. ಇದು ನಮ್ಮ ನಿರೀಕ್ಷೆಗಳನ್ನು ಮೀರಿದೆ. ಒಂದೂವರೆ ಗಂಟೆಯ ನಂತರ ಮೂರೂ ಪಕ್ಷಗಳು ಕುಳಿತು ಭವಿಷ್ಯದ ಕಾರ್ಯತಂತ್ರವನ್ನು ನಿರ್ಧರಿಸಲಿವೆ.

ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ, ದೇವೇಂದ್ರ ಫಡ್ನವಿಸ್ ಹೇಳಿದ್ದೇನು?
ದೇವೇಂದ್ರ ಫಡ್ನವಿಸ್
Follow us
ನಯನಾ ರಾಜೀವ್
|

Updated on:Nov 23, 2024 | 1:01 PM

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮಹಾಯುತಿ ಮುನ್ನಡೆ ಸಾಧಿಸುತ್ತಿದ್ದು, ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎನ್ನುವ ಕುರಿತು ಉಪಮುಖ್ಯಮಮತ್ರಿ ದೇವೇಂದ್ರ ಫಡ್ನವಿಸ್ ಮಾತನಾಡಿದ್ದಾರೆ. ಎಪಿಬಿ ಲೈವ್ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಅವರು, ನಾವ್ಯಾರೂ ಈ ಫಲಿತಾಂಶ ನಿರೀಕ್ಷಿಸಿರಲಿಲ್ಲ. ಇದು ನಮ್ಮ ನಿರೀಕ್ಷೆಗಳನ್ನು ಮೀರಿದೆ. ಒಂದೂವರೆ ಗಂಟೆಯ ನಂತರ ಮೂರೂ ಪಕ್ಷಗಳು ಕುಳಿತು ಭವಿಷ್ಯದ ಕಾರ್ಯತಂತ್ರವನ್ನು ನಿರ್ಧರಿಸಲಿವೆ.

ಸುದ್ದಿಗೋಷ್ಠಿ ನಡೆಸುತ್ತೇವೆ, ಪಕ್ಷದ ಕಚೇರಿಗೆ ಹೋಗುತ್ತೇನೆ ಬಳಿಕ ನಾಗ್ಪುರಕ್ಕೆ ಹೋಗುತ್ತೇನೆ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎನ್ನುವ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ. ನಾಳೆ ಮಹಾಯುತಿಯ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ನವೆಂಬರ್ 25 ರಂದು ಅವರು ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಲಿದ್ದಾರೆ ಮತ್ತು ನವೆಂಬರ್ 26 ರಂದು ಸರ್ಕಾರ ರಚನೆಯಾಗಲಿದೆ. ಬಿಜೆಪಿ ವೀಕ್ಷಕರು ನಾಳೆ ಮುಂಬೈಗೆ ಬರಲಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆಯ ಆರಂಭಿಕ ಟ್ರೆಂಡ್‌ಗಳಲ್ಲಿ ಬಿಜೆಪಿ ನೇತೃತ್ವದ ಮಹಾಮೈತ್ರಿಕೂಟ ಬಹುಮತದ ಗಡಿ ದಾಟಿದೆ. ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ, ಸುದ್ದಿ ಬರೆಯುವವರೆಗೆ, ಬಿಜೆಪಿ ನೇತೃತ್ವದ ಮಹಾಯುತಿ 217 ಸ್ಥಾನಗಳಲ್ಲಿ ಮುಂದಿತ್ತು, ಕಾಂಗ್ರೆಸ್ ನೇತೃತ್ವದ ಎಂವಿಎ 58 ಸ್ಥಾನಗಳಲ್ಲಿ ಮತ್ತು ಇತರರು 13 ಸ್ಥಾನಗಳಲ್ಲಿ ಮುಂದಿದ್ದರು.

ಮತ್ತಷ್ಟು ಓದಿ: ಮಹಾರಾಷ್ಟ್ರ: ಮಹಾಯುತಿಗೆ ಮುನ್ನಡೆ, ಇದು ಜನರ ನಿರ್ಧಾರವಲ್ಲ ಏನೋ ತಪ್ಪಾಗಿದೆ ಎಂದ ಸಂಜಯ್ ರಾವತ್

ಮುಂಬೈನ 36 ಸ್ಥಾನಗಳಲ್ಲಿ 22 ರಲ್ಲಿ ಮಹಾಯುತಿ, 10 ರಲ್ಲಿ ಎಂವಿಎ ಮತ್ತು ಇತರರು 1 ರಲ್ಲಿ ಮುಂದಿದ್ದಾರೆ. ಪಶ್ಚಿಮ ಮಹಾರಾಷ್ಟ್ರದ 58 ಸ್ಥಾನಗಳ ಪೈಕಿ 42 ಸ್ಥಾನಗಳಿಗೆ ಟ್ರೆಂಡ್‌ಗಳು ಬಂದಿವೆ. ಅದರಲ್ಲಿ ಮಹಾಯುತಿ 34, MVA 4 ಮತ್ತು ಇತರರು 4 ರಲ್ಲಿ ಮುಂದಿದ್ದಾರೆ. ಇದಲ್ಲದೆ, ಉತ್ತರ ಮಹಾರಾಷ್ಟ್ರದಲ್ಲಿ, ಮಹಾಯುತಿ 47 ಸ್ಥಾನಗಳಲ್ಲಿ 36, MVA 6 ಮತ್ತು ಇತರರು 5 ರಲ್ಲಿ ಮುಂದಿದ್ದಾರೆ.

ಥಾಣೆ ಕೊಂಕಣ ಪ್ರದೇಶದ 39 ಸ್ಥಾನಗಳ ಪೈಕಿ ಮಹಾಯುತಿ 33, ಎಂವಿಎ 4, ಇತರರು 2, ಮರಾಠವಾಡದಲ್ಲಿ 46 ರಲ್ಲಿ 34 ರಲ್ಲಿ ಮಹಾಯುತಿ, 11 ರಲ್ಲಿ ಎಂವಿಎ ಮತ್ತು ಇತರರು 1 ರಲ್ಲಿ ಮುಂದಿದ್ದಾರೆ. ಮತ್ತೊಂದೆಡೆ, 62 ವಿದರ್ಭದಲ್ಲಿ, ಮಹಾಯುತಿ 47, MVA 14 ಮತ್ತು ಇತರರು 1 ರಲ್ಲಿ ಮುಂದಿದ್ದಾರೆ.

ಇದನ್ನೂ ಓದಿ: ಚುನಾವಣೆ ಫಲಿತಾಂಶದ ಲೈವ್ ಅಪ್​ಡೇಟ್ ಇಲ್ಲಿದೆ

ಚುನಾವಣೆ ಫಲಿತಾಂಶ ಸಂಬಂಧಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:31 pm, Sat, 23 November 24

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!