Maharashtra Bandh: ಲಖಿಂಪುರ ಖೇರಿಯ ರೈತರ ಹತ್ಯೆ ವಿರೋಧಿಸಿ ಇಂದು ಮಹಾರಾಷ್ಟ್ರ ಬಂದ್

| Updated By: ಸುಷ್ಮಾ ಚಕ್ರೆ

Updated on: Oct 11, 2021 | 10:07 AM

ಮಹಾರಾಷ್ಟ್ರದ ಶಿವಸೇನೆ, ಕಾಂಗ್ರೆಸ್, ಎನ್​ಸಿಪಿಯನ್ನೊಳಗೊಂಡ ಮಹಾ ವಿಕಾಸ್ ಅಘಾಡಿ ಸರ್ಕಾರ ಬಂದ್​ಗೆ ಕರೆ ನೀಡಿದ್ದು, ಅಗತ್ಯ ಸೇವೆಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ.

Maharashtra Bandh: ಲಖಿಂಪುರ ಖೇರಿಯ ರೈತರ ಹತ್ಯೆ ವಿರೋಧಿಸಿ ಇಂದು ಮಹಾರಾಷ್ಟ್ರ ಬಂದ್
ಮಹಾರಾಷ್ಟ್ರ ಬಂದ್
Follow us on

ಮುಂಬೈ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಕಳೆದ ವಾರ ನಾಲ್ವರು ರೈತರನ್ನು ಹತ್ಯೆ ಮಾಡಲಾಗಿತ್ತು. ಇದಾದ ಬಳಿಕ ನಡೆದ ಹಿಂಸಾಚಾರದಲ್ಲಿ ಇನ್ನೂ ನಾಲ್ವರು ಸಾವನ್ನಪ್ಪಿದ್ದರು. ರೈತರ ಮೇಲೆ ನಡೆದ ಈ ದಾಳಿಯನ್ನು ವಿರೋಧಿಸಿ ಇಂದು ಮಹಾರಾಷ್ಟ್ರ ಬಂದ್​ಗೆ ಕರೆ ನೀಡಲಾಗಿದೆ. ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರ ಇಂದು ಮಹಾರಾಷ್ಟ್ರದಲ್ಲಿ ಸಂಪೂರ್ಣ ಬಂದ್​ ಘೋಷಿಸಿದೆ. ಇಲ್ಲಿನ ಅಂಗಡಿಗಳು, ಶಾಲಾ ಕಾಲೇಜುಗಳು ಬಂದ್ ಆಗಿದ್ದು, ಹಲವು ಸಂಘಟನೆಗಳು ಕೂಡ ಬಂದ್​ಗೆ ಬೆಂಬಲ ನೀಡಿವೆ.

ಮಹಾರಾಷ್ಟ್ರದ ಶಿವಸೇನೆ, ಕಾಂಗ್ರೆಸ್, ಎನ್​ಸಿಪಿಯನ್ನೊಳಗೊಂಡ ಮಹಾ ವಿಕಾಸ್ ಅಘಾಡಿ ಸರ್ಕಾರ ಬಂದ್​ಗೆ ಕರೆ ನೀಡಿದ್ದು, ಅಗತ್ಯ ಸೇವೆಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ. ಮೆಡಿಕಲ್ ಶಾಪ್, ಹಾಲಿನ ಅಂಗಡಿ ಸೇರಿ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದ ಎಲ್ಲ ಅಂಗಡಿ, ಮಾರುಕಟ್ಟೆಯನ್ನು ಮುಚ್ಚಲಾಗಿದೆ. ಬಂದ್​ನಿಂದ ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಸರ್ಕಾರದಿಂದ 500 ಗೃಹ ರಕ್ಷಕ ದಳ, 3 ಎಸ್​ಆರ್​ಪಿಎಫ್ ತಂಡ ಮತ್ತು 700 ಇತರೆ ಪಡೆಗಳನ್ನು ನಿಯೋಜನೆ ಮಾಡಲಾಗಿದೆ.

ರೈತರ ಹೋರಾಟಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಮಹಾರಾಷ್ಟ್ರದಲ್ಲಿ ಬಂದ್ ಘೋಷಿಸಲಾಗಿದ್ದು, ಇಂದು ಸಂಜೆಯವರೆಗೂ ಮಹಾರಾಷ್ಟ್ರ ಬಹುತೇಕ ಸ್ತಬ್ಧವಾಗಲಿದೆ. ನಿನ್ನೆ ಮಧ್ಯರಾತ್ರಿಯಿಂದಲೇ ಬಂದ್​ ಜಾರಿಯಲ್ಲಿದ್ದು, ಪುಣೆ, ಘಟಕೋಪರ್, ಮಹೀಂ ಮುಂತಾದೆಡೆ ಅಂಗಡಿಗಳನ್ನು ಮುಚ್ಚಲಾಗಿದೆ. ಸ್ಥಳೀಯ ರೈಲು ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಕೆಲವೇ ಕೆಲವು ರೈಲುಗಳು ಮಾತ್ರ ಸಂಚರಿಸುತ್ತಿವೆ. ಮಹಾರಾಷ್ಟ್ರದ 2000ಕ್ಕೂ ಹೆಚ್ಚು ಹಣ್ಣು, ತರಕಾರಿ, ಹೂವು ಮಾರಾಟಗಾರರು ಬಂದ್​ಗೆ ಸಂಪೂರ್ಣ ಬೆಂಬಲ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಒತ್ತಾಯಪೂರ್ವಕವಾಗಿ ಅಂಗಡಿಗಳನ್ನು ಬಂದ್ ಮಾಡಿಸಬಾರದು ಎಂದು ಶಿವಸೇನೆ ಸರ್ಕಾರಕ್ಕೆ ಬಿಜೆಪಿ ಎಚ್ಚರಿಕೆ ನೀಡಿದೆ. ಒಂದುವೇಳೆ ಒತ್ತಾಯದಿಂದ ಅಂಗಡಿಗಳನ್ನು ಮುಚ್ಚಿಸಿದರೆ ಬಿಜೆಪಿ ಕಾರ್ಯಕರ್ತರು ಸುಮ್ಮನಿರುವುದಿಲ್ಲ ಎಂದು ಬಿಜೆಪಿ ಶಾಸಕ ನಿತೇಶ್ ರಾಣೆ ಟ್ವೀಟ್​ನಲ್ಲಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Lakhimpur Kheri ಲಖಿಂಪುರ್ ಘಟನೆಯನ್ನು ಹಿಂದೂ- ಸಿಖ್ ನಡುವಿನ ಕದನ ಮಾಡಲು ಪ್ರಯತ್ನ ನಡೆಯುತ್ತಿದೆ: ವರುಣ್ ಗಾಂಧಿ

ಲಖಿಂಪುರ ಖೇರಿ ಹಿಂಸಾಚಾರ ವಿರೋಧಿಸಿ ಸರಣಿ ಆಂದೋಲನಕ್ಕೆ ಮುಂದಾದ ರೈತರು; ಅ.18ರಂದು ರೈಲು ತಡೆ ಚಳವಳಿ

Published On - 9:57 am, Mon, 11 October 21