ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಪ್ರದಾನ ಸಮಾರಂಭ ನೋಡಲು ಬಂದಿದ್ದ 11 ಮಂದಿ ಬಿಸಿಲಿನ ತಾಪಕ್ಕೆ ಬಲಿ

|

Updated on: Apr 17, 2023 | 7:46 AM

ಮಹಾರಾಷ್ಟ್ರ ಸರ್ಕಾರವು ಸ್ಥಾಪಿಸಿದ ಪ್ರಶಸ್ತಿಯನ್ನು ಸಾಮಾಜಿಕ ಕಾರ್ಯಕರ್ತ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಗೃಹ ಸಚಿವ ಅಮಿತ್ ಶಾ ಪ್ರದಾನ ಮಾಡಿದರು. ನವಿ ಮುಂಬೈನಲ್ಲಿ ಕಾರ್ಯಕ್ರಮ ನಡೆದಿದ್ದು, ದಿನದ ತಾಪಮಾನ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ

ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಪ್ರದಾನ ಸಮಾರಂಭ ನೋಡಲು ಬಂದಿದ್ದ 11 ಮಂದಿ ಬಿಸಿಲಿನ ತಾಪಕ್ಕೆ ಬಲಿ
ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಪ್ರದಾನ ಸಮಾರಂಭ
Follow us on

ನವಿ ಮುಂಬೈ: ಭಾನುವಾರ ನಡೆದ ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ (Maharashtra Bhushan Award) ಪ್ರದಾನ ಸಮಾರಂಭದಲ್ಲಿ ಬಯಲಿನಲ್ಲಿ ಕುಳಿತಿದ್ದ 11 ಮಂದಿ ಬಿಸಿಲಿನ ತಾಪದಿಂದ (Heat Stroke)  ಸಾವಿಗೀಡಾಗಿದ್ದಾರೆ ಎಂದು ಮಹಾರಾಷ್ಟ್ರದ (Maharashtra ) ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ. ಬಿಸಿಲಿನ ಝಳದಿಂದ ಹಲವರಿಗೆ ಆರೋಗ್ಯ ಸಮಸ್ಯೆ ಉಂಟಾಗಿದೆ. ಸುಮಾರು 50 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಮಹಾರಾಷ್ಟ್ರ ಸರ್ಕಾರವು ಸ್ಥಾಪಿಸಿದ ಪ್ರಶಸ್ತಿಯನ್ನು ಸಾಮಾಜಿಕ ಕಾರ್ಯಕರ್ತ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಗೃಹ ಸಚಿವ ಅಮಿತ್ ಶಾ ಪ್ರದಾನ ಮಾಡಿದರು. ನವಿ ಮುಂಬೈನಲ್ಲಿ ಕಾರ್ಯಕ್ರಮ ನಡೆದಿದ್ದು, ದಿನದ ತಾಪಮಾನ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಶಿಂಧೆ ಮತ್ತು ಫಡ್ನವಿಸ್ ಸಹ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದರು.

ನವಿ ಮುಂಬೈನ ಬೃಹತ್ ಮೈದಾನದಲ್ಲಿ ನಡೆದ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಸಾಮಾಜಿಕ ಕಾರ್ಯಕರ್ತರ ಅನುಯಾಯಿಗಳು ಆಗಮಿಸಿದ್ದರು. ಬೆಳಗ್ಗೆ 11.30ಕ್ಕೆ ಆರಂಭವಾದ ಪ್ರಶಸ್ತಿ ಪ್ರದಾನ ಸಮಾರಂಭ ಮಧ್ಯಾಹ್ನ 1ರವರೆಗೆ ನಡೆದಿತ್ತು

ಮೈದಾನವು ಜನರಿಂದ ತುಂಬಿ ತುಳುಕುತ್ತಿದ್ದು, ಕಾರ್ಯಕ್ರಮ ವೀಕ್ಷಿಸಲು ಆಡಿಯೊ ಮತ್ತು ವಿಡಿಯೊ ಸೌಲಭ್ಯಗಳನ್ನು ಕಲ್ಪಿಸಲಾಗಿತ್ತು. ಪ್ರೇಕ್ಷಕರಿಗೆ ಆಸನ ವ್ಯವಸ್ಥೆ ಇದ್ದರೂ ನೆರಳಿಗಾಗಿ ಶಾಮಿಯಾನ ಅಥವಾ ಶೀಟ್ ಹಾಕಿರಲಿಲ್ಲ.

ಈ ಘಟನೆಯನ್ನು ದುರದೃಷ್ಟಕರ ಎಂದ ಶಿಂಧೆ ಮೃತರ ಕುಟುಂಬಗಳಿಗೆ ₹ 5 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.

ವೈದ್ಯರಿಂದ ಪ್ರಕಾರ ಇಂದು 7-8 ಜನರು ಸಾವನ್ನಪ್ಪಿದ್ದಾರೆ, 24 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಬಿಸಿಲಿನ ಆಘಾತ ಪ್ರಕರಣ. ಸುಮಾರು 50 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಅದರಲ್ಲಿ 24 ಜನರು ಆಸ್ಪತ್ರೆಯಲ್ಲೇ ಇದ್ದು , ಇನ್ನುಳಿದವರನ್ನು ಪ್ರಾಥಮಿಕ ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದೆ ಎಂದು ಶಿಂಧೆ ಆಸ್ಪತ್ರೆಯಿಂದ ಹೊರಬರುವಾಗ ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ:Miss India 2023: ಚಿಕ್ಕ ವಯಸ್ಸಿನಲ್ಲೇ ಮಿಸ್ ಇಂಡಿಯಾ 2023 ಕಿರೀಟ ಮುಡಿಗೇರಿಸಿಕೊಂಡ ರಾಜಸ್ಥಾನದ ನಂದಿನಿ ಗುಪ್ತಾ

ಬಿಸಿಲು ಸಂಬಂಧಿತ ಅನಾರೋಗ್ಯದಿಂದ ಬಳಲುತ್ತಿರುವವರ ಚಿಕಿತ್ಸೆಗಾಗಿ ಸರ್ಕಾರವು ಹಣವನ್ನು ನೀಡುತ್ತದೆ ಎಂದು ಫಡ್ನವಿಸ್ ಟ್ವೀಟ್ ಮಾಡಿದ್ದಾರೆ.

ಇಂದು ಬೆಳಿಗ್ಗೆ ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದ ಕೆಲವು ಸದಸ್ಯರು ಬಿಸಿಲಿನಝಳಕ್ಕೆ ಮೃತಪಟ್ಟಿರುವುದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಸಂಗತಿಯಾಗಿದೆ. ಅವರ ಕುಟುಂಬಗಳ ದುಃಖವನ್ನು ನಾವು ಹಂಚಿಕೊಳ್ಳುತ್ತೇವೆ ಎಂದು ಫಡ್ನವಿಸ್ ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಮುಂದಿನ ಐದು ದಿನಗಳಲ್ಲಿ ದೇಶದ ಕೆಲವು ಭಾಗಗಳಲ್ಲಿ ತಾಪಮಾನದಲ್ಲಿ 3-5 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ತಿಳಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:30 am, Mon, 17 April 23