ಸಾವರ್ಕರ್ ಬಗ್ಗೆ ರಾಹುಲ್ ಗಾಂಧಿ ಹೇಳಿಕೆಯನ್ನು ಖಂಡಿಸಿ ಮಹಾರಾಷ್ಟ್ರ ಬಿಜೆಪಿ ಸಂಸದರು ಛತ್ರಿಪತಿ ಶಿವಾಜಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು. ನನ್ನ ಮೇಲೆ ಹಿಂಸಾಚಾರ ನಡೆಸಿ ಜೈಲು ಸೇರಿದರೂ ಹೆದರುವುದಿಲ್ಲ. ಕ್ಷಮೆ ಕೇಳಲು ನಾನು ಸಾವರ್ಕರ್ ಅಲ್ಲ ಎಂದೂ ಕ್ಷಮೆ ಕೇಳುವುದಿಲ್ಲ ಎಂದು ಹೇಳಿದ್ದರು. ಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಯುತ್ತಿದೆ ಎಂದು ಸಂಸತ್ತಿನಲ್ಲಿ ಹೇಳಿದ್ದರು. ಕೇಂದ್ರ ಸಚಿವರು ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಸಂಸತ್ತಿನಲ್ಲಿ ಅದಾನಿ ವಿಚಾರದ ಬಗ್ಗೆ ಪ್ರಧಾನಿಯವರನ್ನು ಪ್ರಶ್ನಿಸಿದಾಗ ಸಮಸ್ಯೆ ಶುರುವಾಯಿತು ಎಂದಿದ್ದರು.
2019 ರಲ್ಲಿ ಮೋದಿಯವರ ಹೆಸರಿನ ಮೇಲಿನ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್‌ನ ಗುಜರಾತ್ ನ್ಯಾಯಾಲಯವು ದೋಷಿ ಎಂದು ಘೋಷಿಸಿದ ನಂತರ ರಾಹುಲ್ ಗಾಂಧಿ ಅವರನ್ನು ಮಾರ್ಚ್ 24ರಂದು ಲೋಕಸಭೆಯಿಂದ ಅನರ್ಹಗೊಳಿಸಲಾಯಿತು.
ಮತ್ತಷ್ಟು ಓದಿ: Priyanka Gandhi Vadra: ಹುತಾತ್ಮನ ಮಗನನ್ನು ಮೀರ್ ಜಾಫರ್ ಎಂದು ಕರೆದರು, ಆಗ ಯಾಕೆ ಪ್ರಕರಣ ದಾಖಲಾಗಲಿಲ್ಲ: ಪ್ರಿಯಾಂಕಾ ವಾಗ್ದಾಳಿ
ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಸುದ್ದಿಗೋಷ್ಠಿ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಸೇನೆ ಮತ್ತು ವಾಯುಸೇನೆಗೆ ಸಂಬಂಧಿಸಿದ ಆರೋಪಗಳನ್ನು ಸಾಕ್ಷ್ಯಾಧಾರಗಳೊಂದಿಗೆ ಇಡುತ್ತಿದ್ದೇನೆ. ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ಬಿಜೆಪಿಯವರು ಲೋಕಸಭೆಯಲ್ಲಿ ನನಗೆ ಮಾತನಾಡಲು ಬಿಡುತ್ತಿಲ್ಲ. ನನ್ನ ಮೇಲಿನ ಆರೋಪ ಸುಳ್ಳು. ರಾಷ್ಟ್ರ ವಿರೋಧಿ ಶಕ್ತಿಗಳನ್ನು ಸೋಲಿಸುತ್ತೇನೆ. ನಾನು ಯಾವುದೇ ಬೆದರಿಕೆಗೆ ಹೆದರುವುದಿಲ್ಲ ಎಂದಿದ್ದರು.
ನಾನು ಮೋದಿ – ಅದಾನಿ ಸಂಬಂಧವನ್ನು ಪ್ರಶ್ನಿಸುವುದನ್ನು ಎಂದಿಗೂ ನಿಲ್ಲಿಸುವುದಿಲ್ಲ ಎಂದಿದ್ದರು. ರಾಜಕೀಯ ನ್ಯಾಯ ನನ್ನ ರಕ್ತದಲ್ಲಿದೆ. ನನ್ನ ಮಾತು ಮೋದಿಗೆ ಭಯ ತಂದಿದೆ. ನನಗೆ ಬೆಂಬಲ ನೀಡಿದ ವಿರೋಧ ಪಕ್ಷಗಳಿಗೆ ಧನ್ಯವಾದಗಳು. ನಾನು ಅವರೊಂದಿಗೆ ಕೆಲಸ ಮಾಡುತ್ತೇನೆ. ನಾನು ದೇಶದ ಜನರ ಪ್ರಜಾಪ್ರಭುತ್ವಕ್ಕಾಗಿ ಹೋರಾಡುತ್ತಿದ್ದೇನೆ. ನಾನು ಸಂಸತ್ತಿನ ಒಳಗಿರಲಿ ಅಥವಾ ಹೊರಗಿರಲಿ, ನನ್ನ ಕೆಲಸವನ್ನು ನಾನು ಮಾಡುತ್ತೇನೆ ಎಂದು ಹೇಳಿದ್ದರು.
ರಾಷ್ಟ್ರದ ವಿರುದ್ಧದ ಶಕ್ತಿಗಳ ವಿರುದ್ಧ ಹೋರಾಡಿ ಸೋಲಿಸುತ್ತೇನೆ. ಬಿಜೆಪಿ ಸಚಿವರು ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅವರು ಸಂಸತ್ತಿನಲ್ಲಿ ನನ್ನ ಭಾಷಣವನ್ನು ನೋಟಿಫಿಕೇಷನ್‌ನಿಂದ ಅಳಿಸಿದ್ದಾರೆ. ನನ್ನ ವಿರುದ್ಧ ಕೈಗೊಂಡ ಕ್ರಮದ ಬಗ್ಗೆ ಜನರ ಬಳಿ ನ್ಯಾಯ ಕೇಳುತ್ತೇನೆ. ಅದಾನಿ ಗ್ರೂಪ್ ಹಲವಾರು ನಕಲಿ ಕಂಪನಿಗಳ ಮೂಲಕ ಹೂಡಿಕೆ ಮಾಡಿದೆ ಎಂದು ಹೇಳಿದರು.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರು ಶನಿವಾರ ವಿಧಾನಸಭೆಯಲ್ಲಿ ಮಾತನಾಡುತ್ತಿದ್ದಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಾವರ್ಕರ್ ಅವರ ವಿರುದ್ಧದ ಹೇಳಿಕೆಗಾಗಿ ಅವರನ್ನು ಶಿಕ್ಷಿಸಬೇಕು ಎಂದು ಹೇಳಿದ್ದಾರೆ.
ಸಾವರ್ಕರ್ ಮಹಾರಾಷ್ಟ್ರದ ಆರಾಧ್ಯದೈವ ಮಾತ್ರವಲ್ಲ ಇಡೀ ದೇಶಕ್ಕೆ ಆರಾಧ್ಯ ದೈವ ಮತ್ತು ರಾಹುಲ್ ಗಾಂಧಿ ಅವರನ್ನು ದೂಷಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ