Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಉಜನಿ ಅಣೆಕಟ್ಟಿನ ನೀರಿನಲ್ಲಿ ದೋಣಿ ಮುಳುಗಿ 6 ಮಂದಿ ನಾಪತ್ತೆ

ಮಹಾರಾಷ್ಟ್ರದ ಉಜನಿ ಅಣೆಕಟ್ಟಿನಲ್ಲಿ ದೋಣಿ ಮುಳುಗಿ 6 ಮಂದಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಮಂಗಳವಾರ ಸಂಜೆ ದೋಣಿ ಮುಳುಗಿದ ನಂತರ ಮಹಾರಾಷ್ಟ್ರದಲ್ಲಿ ಆರು ಜನರು ನಾಪತ್ತೆಯಾಗಿದ್ದಾರೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಸ್ಥಳೀಯ ಆಡಳಿತ ಮತ್ತು ಪೊಲೀಸರನ್ನು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ ಎಂದು ಪುಣೆ ಗ್ರಾಮಾಂತರ ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮಹಾರಾಷ್ಟ್ರ: ಉಜನಿ ಅಣೆಕಟ್ಟಿನ ನೀರಿನಲ್ಲಿ ದೋಣಿ ಮುಳುಗಿ 6 ಮಂದಿ ನಾಪತ್ತೆ
ಸಾಂದರ್ಭಿಕ ಚಿತ್ರ
Follow us
ನಯನಾ ರಾಜೀವ್
|

Updated on: May 22, 2024 | 8:28 AM

ಉಜನಿ ಅಣೆಕಟ್ಟಿನ ನೀರಿನಲ್ಲಿ ದೋಣಿ ಮುಳುಗಿ(Boat Capsize) ಆರು ಮಂದಿ ನಾಮಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಪುಣೆಯ ಇಂದಾಪುರ ಹಸೀಲ್ ಸಮೀಪದ ಕಲಾಶಿ ಗ್ರಾಮದ ಬಳಿ ನಡೆದಿದೆ. ಮಂಗಳವಾರ ಸಂಜೆ ದೋಣಿ ಮುಳುಗಿದ ನಂತರ ಮಹಾರಾಷ್ಟ್ರದಲ್ಲಿ ಆರು ಜನರು ನಾಪತ್ತೆಯಾಗಿದ್ದಾರೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಸ್ಥಳೀಯ ಆಡಳಿತ ಮತ್ತು ಪೊಲೀಸರನ್ನು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ ಎಂದು ಪುಣೆ ಗ್ರಾಮಾಂತರ ಪೊಲೀಸರು ಬುಧವಾರ ತಿಳಿಸಿದ್ದಾರೆ. ಪ್ರಸ್ತುತ ಉಜನಿ ಅಣೆಕಟ್ಟಿನ ನೀರಿನ ಹರಿವು ಕಡಿಮೆ ಇದೆ. ಉಜನಿಯ ಹೊಟ್ಟೆಯಲ್ಲಿ ಜಲಸಮಾಧಿಯಾಗಿರುವ ಹಲವು ಪುರಾತನ ರಚನೆಗಳು ಮತ್ತು ಪುರಾತನ ದೇವಾಲಯಗಳು ಗೋಚರಿಸಲಾರಂಭಿಸಿವೆ.

ಈ ಪುರಾತನ ಸ್ಮಾರಕವನ್ನು ನೋಡಲು ಪ್ರವಾಸಿಗರು ಈಗ ಉಜನಿ ಅಣೆಕಟ್ಟಿಗೆ ಬರುತ್ತಿದ್ದಾರೆ. 1975 ರಲ್ಲಿ ಉಜನಿ ಅಣೆಕಟ್ಟಿನ ನಿರ್ಮಾಣದ ನಂತರ, ಈ ಪ್ರದೇಶದಲ್ಲಿನ ಅನೇಕ ದೇವಾಲಯಗಳು ಮತ್ತು ರಚನೆಗಳು ಉಜನಿ ಅಣೆಕಟ್ಟಿನ ಒಡಲೊಳಗಿದ್ದವು. ಪುಣೆ – ಸೊಲ್ಲಾಪುರ ಹೆದ್ದಾರಿಯಲ್ಲಿ ಇಂದಾಪುರದಿಂದ ಸುಮಾರು 15 ಕಿ.ಮೀ ದೂರದಲ್ಲಿರುವ ಭೀಮನಿಡಿ ತೊಟ್ಟಿಯಲ್ಲಿ 1975ರಲ್ಲಿ ನೀರಿನಲ್ಲಿ ಹುದುಗಿದ್ದ ಹೇಮಡಪಂಥಿ ಪಾಲಸನಾಥನ ಅತ್ಯಂತ ಪುರಾತನ ದೇವಾಲಯವೂ ಸಂಪೂರ್ಣವಾಗಿ ಕಾಣಿಸಲಾರಂಭಿಸಿದೆ.

ಒಡಿಶಾ: 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಿ ನಾಲ್ವರು ಸಾವು ಸುಮಾರು 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮುಳುಗಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಈ ಘಟನೆ ಒಡಿಶಾದ ಝಾರ್ಸುಗುಡಾ ಜಿಲ್ಲೆಯ ಮಹಾನದಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ ಎಂದು ಹೇಳಲಾಗಿದೆ. ನಾಪತ್ತೆಯಾದವರ ಪತ್ತೆಗಾಗಿ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಹೇಳಿದೆ. ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿ ಚಿಂತಾಮಣಿ ಪ್ರಧಾನ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಬೋಟ್ ಬರ್ಗಢ್ ಜಿಲ್ಲೆಯ ಬಂಧಿಪಾಲಿ ಪ್ರದೇಶದಿಂದ ಪ್ರಯಾಣಿಕರನ್ನು ಸಾಗಿಸುತ್ತಿತ್ತು. ಈ ಸಮಯದಲ್ಲಿ ಅನೀರಿಕ್ಷಿತವಾಗಿ ನೀರಿನ ಮಟ್ಟ ಹೆಚ್ಚಾಗಿದೆ. ಇದರಿಂದ ದೋಣಿ ಜಾರ್ಸುಗುಡಾದ ಶಾರದಾ ಘಾಟ್ ಬಳಿ ಮುಳುಗಿದೆ ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ