Maharashtra Covid Guidelines: ಕೊವಿಡ್ ಪ್ರಕರಣಗಳ ಏರಿಕೆ; ಮಹಾರಾಷ್ಟ್ರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ

| Updated By: ಸುಷ್ಮಾ ಚಕ್ರೆ

Updated on: Jun 04, 2022 | 3:22 PM

ಮಹಾರಾಷ್ಟ್ರದಲ್ಲಿ ರೈಲುಗಳು, ಬಸ್‌ಗಳು, ಚಿತ್ರಮಂದಿರಗಳು, ಸಭಾಂಗಣಗಳು, ಕಚೇರಿಗಳು, ಆಸ್ಪತ್ರೆಗಳು, ಕಾಲೇಜುಗಳು, ಶಾಲೆಗಳಂತಹ ಮುಚ್ಚಿದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿದೆ.

Maharashtra Covid Guidelines: ಕೊವಿಡ್ ಪ್ರಕರಣಗಳ ಏರಿಕೆ; ಮಹಾರಾಷ್ಟ್ರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ
ಮಾಸ್ಕ್ ಧರಿಸಿರುವ ವ್ಯಕ್ತಿಗಳು
Image Credit source: India.com
Follow us on

ಮುಂಬೈ: ಮಹಾರಾಷ್ಟ್ರದಲ್ಲಿ ಕೊವಿಡ್ ಪ್ರಕರಣಗಳು (Maharashtra Covid Cases) ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರವು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ (Face Mask) ಧರಿಸುವುದನ್ನು ಕಡ್ಡಾಯಗೊಳಿಸಿದೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ಪ್ರದೀಪ್ ವ್ಯಾಸ್ ಎಲ್ಲಾ ಜಿಲ್ಲಾ ಅಧಿಕಾರಿಗಳಿಗೆ ಪತ್ರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸುವುದು ಸೇರಿದಂತೆ ಹಲವು ಆದೇಶಗಳನ್ನು ನೀಡಿದ್ದಾರೆ. ರೈಲುಗಳು, ಬಸ್‌ಗಳು, ಚಿತ್ರಮಂದಿರಗಳು, ಸಭಾಂಗಣಗಳು, ಕಚೇರಿಗಳು, ಆಸ್ಪತ್ರೆಗಳು, ಕಾಲೇಜುಗಳು, ಶಾಲೆಗಳಂತಹ ಮುಚ್ಚಿದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿದೆ ಎಂದು ಅವರು ಆದೇಶದಲ್ಲಿ ಸೂಚಿಸಿದ್ದಾರೆ.

ಮಹಾರಾಷ್ಟ್ರ ಆರೋಗ್ಯ ಇಲಾಖೆ ಶುಕ್ರವಾರ ಜಿಲ್ಲಾ ಮತ್ತು ನಾಗರಿಕ ಅಧಿಕಾರಿಗಳನ್ನು ಕೊರೊನಾವೈರಸ್ ಪರೀಕ್ಷೆಯನ್ನು ಹೆಚ್ಚಿಸಲು ಸೂಚಿಸಿತ್ತು. ಕಲೆಕ್ಟರ್‌ಗಳು, ಮುನ್ಸಿಪಲ್ ಕಾರ್ಪೊರೇಷನ್‌ಗಳು ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರ ಬರೆದ ವ್ಯಾಸ್, ಎಲ್ಲಾ ಜಿಲ್ಲೆಗಳು ಆರ್‌ಟಿ-ಪಿಸಿಆರ್ ಪರೀಕ್ಷೆಗಳ ಅನುಪಾತವನ್ನು ಕನಿಷ್ಠ ಶೇ. 60ರಷ್ಟು ಇರುವಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಕೊವಿಡ್ ನಿರ್ಬಂಧ, ಮಾಸ್ಕ್ ಕಡ್ಡಾಯ ಮತ್ತೆ ಜಾರಿ ಸಾಧ್ಯತೆ; ಸಿಎಂ ಉದ್ಧವ್ ಠಾಕ್ರೆ ಎಚ್ಚರಿಕೆ

ಮಹಾರಾಷ್ಟ್ರದಲ್ಲಿ ತೀವ್ರವಾದ ಉಸಿರಾಟದ ಸೋಂಕುಗಳು ಮತ್ತು ಜ್ವರದ ಬಗ್ಗೆ ಕಣ್ಗಾವಲು ಕಡ್ಡಾಯವಾಗಿದೆ. ಜನರು ಉಸಿರಾಟದ ತೊಂದರೆಗಳನ್ನು ಅನುಭವಿಸಿದರೆ ಕೋವಿಡ್ -19 ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ಕೋವಿಡ್ ಪ್ರಕರಣಗಳು ಉಲ್ಬಣಗೊಳ್ಳುವುದನ್ನು ಮುಂದುವರೆಸಿದರೆ ಅವರು ಎದುರಿಸಬಹುದಾದ ಅಪಾಯಗಳ ಬಗ್ಗೆ ದುರ್ಬಲ ಜನಸಂಖ್ಯೆಯನ್ನು ತಿಳಿಸುವ ಅಗತ್ಯವಿದೆ. ಕೋವಿಡ್-ಸೂಕ್ತ ನಡವಳಿಕೆ ಕಡ್ಡಾಯವಾಗಿದೆ.

ಕೊವಿಡ್ ಪ್ರಕರಣಗಳು ಹೆಚ್ಚುತ್ತಲೇ ಇದ್ದರೆ ಮತ್ತು ಜನರು ಮಾರ್ಗಸೂಚಿಗಳನ್ನು ಅನುಸರಿಸದಿದ್ದರೆ ಮಹಾರಾಷ್ಟ್ರದಲ್ಲಿ ಮತ್ತೆ ಕೋವಿಡ್ ನಿರ್ಬಂಧಗಳನ್ನು ವಿಧಿಸಬೇಕಾಗಬಹುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಎಚ್ಚರಿಸಿದ್ದರು. ಕೋವಿಡ್ ಟಾಸ್ಕ್ ಫೋರ್ಸ್ ಸಭೆಯಲ್ಲಿ ರಾಜ್ಯದ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ, ಜನರ ಮೇಲೆ ಮತ್ತೆ ಕೊರೊನಾ ನಿರ್ಬಂಧಗಳನ್ನು ಹೇರಬಾರದು ಎಂದರೆ ಎಲ್ಲರೂ ತಪ್ಪದೆ ಮಾಸ್ಕ್ ಧರಿಸಬೇಕು, ಕೊವಿಡ್ ಲಸಿಕೆ ಹಾಕಿಸಿಕೊಳ್ಳಬೇಕು ಮತ್ತು ಶಿಸ್ತನ್ನು ಅನುಸರಿಸಬೇಕು ಎಂದು ಮುಖ್ಯಮಂತ್ರಿ ಠಾಕ್ರೆ ಹೇಳಿದ್ದರು. ಅದರಂತೆ ಮಹಾರಾಷ್ಟ್ರದಲ್ಲಿ ಕೊವಿಡ್ ನಿಯಮಗಳನ್ನು ಜಾರಿಗೊಳಿಸಲಾಗಿದ್ದು, ಮತ್ತೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:22 pm, Sat, 4 June 22