Maharashtra Bus Accident: ಮಹಾರಾಷ್ಟ್ರದ ಬುಲ್ದಾನಾದಲ್ಲಿ ಬಸ್ ಅಪಘಾತ; 6 ಮಂದಿ ಸಾವು

ಮಲ್ಕಾಪುರ ಪ್ರದೇಶದ ಎನ್‌ಎಚ್ 53 ರಲ್ಲಿ ನಂದೂರ್ ನಾಕಾ ಮೇಲ್ಸೇತುವೆಯಲ್ಲಿ ತಡರಾತ್ರಿ 2.30 ರ ಸುಮಾರಿಗೆ ಎರಡು ಬಸ್‌ಗಳು ಡಿಕ್ಕಿಯಾಗಿವೆ.

Maharashtra Bus Accident: ಮಹಾರಾಷ್ಟ್ರದ ಬುಲ್ದಾನಾದಲ್ಲಿ ಬಸ್ ಅಪಘಾತ; 6 ಮಂದಿ ಸಾವು
ಅಪಘಾತದ ತೀವ್ರತೆಗೆ ಬಸ್ ನುಜ್ಜುಗುಜ್ಜಾಗಿರುವುದುImage Credit source: TV9 Marathi
Follow us
Ganapathi Sharma
|

Updated on:Jul 29, 2023 | 12:22 PM

ಮುಂಬೈ: ಮಹಾರಾಷ್ಟ್ರದ ಬುಲ್ದಾನಾದಲ್ಲಿ (Buldhana) ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ಆರು ಮಂದಿ ಮೃತಪಟ್ಟು, 20 ಮಂದಿ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಮಲ್ಕಾಪುರ ಪ್ರದೇಶದ ಎನ್‌ಎಚ್ 53 ರಲ್ಲಿ ನಂದೂರ್ ನಾಕಾ ಮೇಲ್ಸೇತುವೆಯಲ್ಲಿ ತಡರಾತ್ರಿ 2.30 ರ ಸುಮಾರಿಗೆ ಎರಡು ಬಸ್‌ಗಳು ಡಿಕ್ಕಿಯಾಗಿವೆ. ಬಾಲಾಜಿ ಟ್ರಾವೆಲ್ಸ್ ಹೆಸರಿನ ಕಂಪನಿಯ ಒಡೆತನದ ಬಸ್‌ಗಳಲ್ಲಿ ಒಂದು ಅಮರನಾಥ ಯಾತ್ರೆಯಿಂದ ಹಿಂಗೋಲಿ ಜಿಲ್ಲೆಗೆ ಮರಳುತ್ತಿದ್ದರೆ, ಇನ್ನೊಂದು ರಾಯಲ್ ಟ್ರಾವೆಲ್ಸ್ ಕಂಪನಿಯ ಮಾಲೀಕತ್ವದ ನಾಸಿಕ್ಮ್‌ಗೆ ತೆರಳುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಂದೂರ್ ನಾಕಾದಲ್ಲಿ ಒಂದು ಬಸ್ ಇನ್ನೊಂದನ್ನು ಹಿಂದಿಕ್ಕಿತು, ನಂತರ ಎರಡೂ ಡಿಕ್ಕಿ ಹೊಡೆದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡಿರುವ ಸುಮಾರು 20 ಮಂದಿಯನ್ನು ಬುಲ್ದಾನಾದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣಪುಟ್ಟ ಗಾಯಗಳೊಂಡಿರುವ 32 ಪ್ರಯಾಣಿಕರಿಗೆ ಸಮೀಪದ ಗುರುದ್ವಾರದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಅಮರನಾಥದಿಂದ ಹಿಂತಿರುಗುತ್ತಿದ್ದ ಬಸ್ಸಿನ ಚಾಲಕ ಕೂಡ ಮೃತಪಟ್ಟವರಲ್ಲಿ ಸೇರಿದ್ದಾರೆ. ಬಸ್ ಅನ್ನು ರಸ್ತೆಯಿಂದ ತೆರವು ಮಾಡಲಾಗಿದ್ದು, ಸಂಚಾರವನ್ನು ಪುನಃಸ್ಥಾಪಿಸಲಾಗಿದೆ ಎಂದು ಹೆದ್ದಾರಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Andhra Pradesh: ಮಾನವೀಯತೆ ಸಾಕಾರಗೊಳಿಸಿದ ಆಂಧ್ರ ರೈಲ್ವೆ ಪೊಲೀಸರು ಕಚ್ಚಾ ಡೋಲಿ ಕಟ್ಟಿ ಮೃತ ದೇಹವನ್ನು ಹೊತ್ತೊಯ್ದರು!

ಇತ್ತೀಚಿಗೆ ಬುಲ್ದಾನಾ ಜಿಲ್ಲೆಯಲ್ಲಿ ನಡೆದ ಎರಡನೇ ದೊಡ್ಡ ಬಸ್ ಅಪಘಾತ ಇದಾಗಿದೆ. ಜುಲೈ 1 ರಂದು, ಜಿಲ್ಲೆಯ ಸಮೃದ್ಧಿ-ಮಹಾಮಾರ್ಗ್ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್‌ಗೆ ಬೆಂಕಿ ಹೊತ್ತಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ 25 ಜನರು ಸಜೀವ ದಹನವಾಗಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:20 pm, Sat, 29 July 23

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು