ಮಹಾರಾಷ್ಟ್ರದ ಸರ್ಕಾರಿ ಬಸ್‌ಗಳಲ್ಲಿ ಹಿರಿಯ ನಾಗರಿಕರು, ಮಹಿಳೆಯರಿಗೆ ನೀಡುತ್ತಿರುವ ರಿಯಾಯಿತಿ ರದ್ದಾಗುತ್ತಾ?
ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ಮಹಾಯುತಿ ಸರ್ಕಾರವು ಚುನಾವಣೆಗೆ ಮುನ್ನ ಘೋಷಿಸಿದ್ದ ಯೋಜನೆಗಳು ಸರ್ಕಾರದ ಹಣಕಾಸಿನ ವ್ಯವಹಾರಗಳ ಮೇಲೆ ಪರಿಣಾಮ ಬೀರುತ್ತಿವೆ. ಸಾರಿಗೆಯಲ್ಲಿ ಮಹಿಳೆಯರಿಗೆ ಅರ್ಧದಷ್ಟು ಹಾಗೂ ಹಿರಿಯನಾಗರಿಗೆ ಉಚಿತ ಪ್ರಯಾಣ ಅವಕಾಶ ಕಲ್ಪಿಸಿರುವುದರಿಂದ ಸಾರಿಗೆ ನಿಗಮಕ್ಕೆ 3 ಕೋಟಿ ರೂ. ನಷ್ಟವಾಗಿದೆ ಎಂದು ಸಚಿವ ಪ್ರತಾಪ್ ಸರ್ನಾಯಕ್ ಹೇಳಿದ್ದಾರೆ.

ಮುಂಬೈ, ಫೆಬ್ರವರಿ 23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ, ಮಹಾಮೈತ್ರಿಕೂಟ ಸರ್ಕಾರವು ಹಲವಾರು ಯೋಜನೆಗಳನ್ನು ಪ್ರಾರಂಭಿಸಿತು. ಹಲವಾರು ಸಾರ್ವಜನಿಕ ಘೋಷಣೆಗಳನ್ನು ಮಾಡಲಾಯಿತು. ಇದಾದ ನಂತರ ಕೆಲವು ಯೋಜನೆಗಳನ್ನು ಮುಂದೂಡಲಾಯಿತು. ಮಹಾರಾಷ್ಟ್ರ ಸರ್ಕಾರದ ಮಹಿಳಾ ಸಮ್ಮಾನ್ ಯೋಜನೆಯಿಂದ ಸಾರಿಗೆ ನಿಗಮಕ್ಕೆ ನಿತ್ಯ 3 ಕೋಟಿ ರೂ. ನಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ, ಎಸ್‌ಟಿ ಬಸ್‌ಗಳಲ್ಲಿ ಮಹಿಳೆಯರು ಮತ್ತು ಹಿರಿಯ ನಾಗರಿಕರಿಗೆ ನೀಡಲಾಗುತ್ತಿದ್ದ ರಿಯಾಯಿತಿಗಳನ್ನು ರದ್ದುಗೊಳಿಸುವ ಬಗ್ಗೆ ಚರ್ಚೆ ಪ್ರಾರಂಭವಾಗಿದೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಾಜ್ಯ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್, ಸರ್ಕಾರಿ ಬಸ್‌ಗಳಿಂದ ಆಗುತ್ತಿರುವ ನಷ್ಟದ ಬಗ್ಗೆ ಪ್ರಸ್ತಾಪಿಸಿದರು. ಮಹಿಳೆಯರು ಮತ್ತು ಹಿರಿಯ ನಾಗರಿಕರಿಗೆ ನೀಡಲಾಗುವ ರಿಯಾಯಿತಿಗಳನ್ನು ನಿಲ್ಲಿಸಲಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಸ್ಪಷ್ಟಪಡಿಸಿದ್ದಾರೆ.
ಎಸ್‌ಟಿ ಕಾರ್ಪೊರೇಷನ್‌ನ ಎಲ್ಲಾ ಬಸ್‌ಗಳಲ್ಲಿ ರಿಯಾಯಿತಿ ನೀಡಲಾಯಿತು. ಈಗ ನಮ್ಮ ಸಹೋದರಿಯರಿಗೆ ಶೇಕಡಾ 50 ರಷ್ಟು ರಿಯಾಯಿತಿ ಸಿಗುತ್ತಿದೆ, ಜೊತೆಗೆ ಹಿರಿಯ ನಾಗರಿಕರಿಗೆ ಬಸ್‌ಗಳಲ್ಲಿ ವಾರ್ಷಿಕ ರಿಯಾಯಿತಿಯೂ ಸಿಗುತ್ತಿದೆ. ಈ ರಿಯಾಯಿತಿಗಳಿಂದಾಗಿ ಎಸ್‌ಟಿ ಬಸ್‌ಗಳು ಪ್ರತಿದಿನ 3 ಕೋಟಿ ರೂ. ನಷ್ಟ ಅನುಭವಿಸುತ್ತಿವೆ.
ಮತ್ತಷ್ಟು ಓದಿ: ಬೆಳಗಾವಿ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನ: ಮಹಾರಾಷ್ಟ್ರ-ಕರ್ನಾಟಕ ನಡುವೆ ಬಸ್ ಸೇವೆ ಸ್ಥಗಿತ
ನಾವು ಎಲ್ಲರಿಗೂ ರಿಯಾಯಿತಿಗಳನ್ನು ನೀಡುತ್ತಲೇ ಇದ್ದರೆ, ಎಸ್‌ಟಿ ನಿಗಮವನ್ನು ನಡೆಸುವುದು ಕಷ್ಟಕರವಾಗುತ್ತದೆ ಎಂದು ನಾನು ಭಾವಿಸುತ್ತೇನೆ. ಹಾಗಾಗಿ ಈಗ ಅದರ ಬಗ್ಗೆ ಯೋಚಿಸಲು ಸಾಧ್ಯವಿಲ್ಲ ಎಂದು ಪ್ರತಾಪ್ ಸರ್ನಾಯಕ್ ಹೇಳಿದ್ದರು. ಕಳೆದ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟದ ಅದ್ಭುತ ಗೆಲುವಿಗೆ ಈ ಯೋಜನಗಳೂ ಕೂಡ ಕಾರಣ ಎಂಬುದು ಸತ್ಯ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ