Maharashtra Cabinet: ಇಂದು ಮಹಾರಾಷ್ಟ್ರ ಸಂಪುಟ ವಿಸ್ತರಣೆ; ಬೆಳಗ್ಗೆ 11 ಗಂಟೆಗೆ ನೂತನ ಸಚಿವರ ಪ್ರಮಾಣವಚನ

Maharashtra News: ನೂತನ ಸಚಿವ ಸಂಪುಟದಲ್ಲಿ 14 ಹೊಸ ಸಚಿವರು ಸೇರ್ಪಡೆಯಾಗಲಿದ್ದಾರೆ, ಬಿಜೆಪಿ ಮತ್ತು ಶಿವಸೇನೆಯ ತಲಾ 7 ಶಾಸಕರಿಗೆ ಮಂತ್ರಿ ಸ್ಥಾನ ನೀಡಲಾಗುವುದು ಎನ್ನಲಾಗಿದೆ.

Maharashtra Cabinet: ಇಂದು ಮಹಾರಾಷ್ಟ್ರ ಸಂಪುಟ ವಿಸ್ತರಣೆ; ಬೆಳಗ್ಗೆ 11 ಗಂಟೆಗೆ ನೂತನ ಸಚಿವರ ಪ್ರಮಾಣವಚನ
ಏಕನಾಥ್ ಶಿಂಧೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Aug 09, 2022 | 8:15 AM

ಮುಂಬೈ: ಏಕನಾಥ್ ಶಿಂಧೆ (Eknath Shinde) ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಒಂದು ತಿಂಗಳ ನಂತರ ಇಂದು ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಮೂಲಗಳು ತಿಳಿಸಿವೆ. ನೂತನ ಸಚಿವ ಸಂಪುಟದಲ್ಲಿ 14 ಹೊಸ ಸಚಿವರು ಸೇರ್ಪಡೆಯಾಗಲಿದ್ದಾರೆ, ಬಿಜೆಪಿ ಮತ್ತು ಶಿವಸೇನೆಯ ತಲಾ 7 ಶಾಸಕರಿಗೆ ಮಂತ್ರಿ ಸ್ಥಾನ ನೀಡಲಾಗುವುದು ಎನ್ನಲಾಗಿದೆ. ಗಮನಾರ್ಹವಾಗಿ, ಸಿಎಂ ಉದ್ಧವ್ ಠಾಕ್ರೆ (Uddhav Thackeray) ನೇತೃತ್ವದ ಮಹಾವಿಕಾಸ್ ಅಘಾಡಿ ಸರ್ಕಾರದಲ್ಲಿ ಸಚಿವರಾಗಿದ್ದ ಶಿವಸೇನೆಯ (Shiv Sena) ಏಕನಾಥ್ ಶಿಂಧೆ ಬಣದವರು ಕೂಡ ಇಂದು ಕ್ಯಾಬಿನೆಟ್‌ಗೆ ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ. ಇಂದು ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಏಕನಾಥ್ ಶಿಂಧೆ ಸರ್ಕಾರದ ನೂತನ ಸಚಿವರಾಗಿ ಉದಯ್ ಸಾಮಂತ್, ಸಂದೀಪನ್ ಬುಮ್ರೆ, ದಾದಾ ಭೂಸೆ, ಗುಲಾಬ್ರಾವ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಸೇರಿದಂತೆ ಮಾಜಿ ಸಚಿವರು ಹೊಸ ಸಂಪುಟಕ್ಕೆ ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ. ಬಂಡಾಯದ ಸಂದರ್ಭದಲ್ಲಿ ಏಕನಾಥ್ ಶಿಂಧೆ ಅವರನ್ನು ಬೆಂಬಲಿಸಿದ್ದ ಮಾಜಿ ಸಚಿವ ಪ್ರಹಾರ್ ಜನಶಕ್ತಿ ಪಕ್ಷದ ಮತ್ತೊಬ್ಬ ಮಾಜಿ ಸಚಿವ ಓಂಪ್ರಕಾಶ್ ಕಾಡು ಕೂಡ ಹೊಸ ಸಂಪುಟದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ: ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ

ಇಂದು ಬೆಳಗ್ಗೆ ಮಹಾರಾಷ್ಟ್ರ ಸರ್ಕಾರದ ಸಹ್ಯಾದ್ರಿ ಅತಿಥಿ ಗೃಹದಲ್ಲಿ ಶಿವಸೇನೆಯ ಏಕನಾಥ್ ಶಿಂಧೆ ಬಣದ ಶಾಸಕರು ಸಭೆ ಸೇರಲಿದ್ದಾರೆ ಎನ್ನಲಾಗಿದೆ. ಆದರೆ, ಈ ವಿಷಯದ ಬಗ್ಗೆ ಮುಖ್ಯಮಂತ್ರಿಯಿಂದ ಯಾವುದೇ ಮಾಹಿತಿ ಬಂದಿಲ್ಲ. ಇಂದಿನ ಸಭೆಯ ನಂತರ ಹೆಚ್ಚಿನ ಸ್ಪಷ್ಟತೆ ಸಿಗಲಿದೆ.

ನೂತನ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಶಾಸಕರ ಹೆಸರನ್ನು ಸೋಮವಾರ ರಾತ್ರಿ ಅಥವಾ ಮಂಗಳವಾರದೊಳಗೆ ಅಂತಿಮಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೋಮವಾರ ಸಂಜೆ ನಾಂದೇಡ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದರು.

ಉದ್ಧವ್ ಠಾಕ್ರೆ ವಿರುದ್ಧ ದಂಗೆದ್ದು ಗೋವಾಗೆ ತೆರಳಿದ್ದ ಶಿವಸೇನೆಯ ಬಂಡಾಯ ಶಾಸಕರಿಂದಾಗಿ ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡಬೇಕಾಯಿತು. ನಂತರ ಬಿಜೆಪಿಯ ಬೆಂಬಲದಿಂದ ಬಂಡಾಯ ಶಾಸಕರ ನೇತೃತ್ವ ವಹಿಸಿದ್ದ ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಹೆಚ್ಚು ಶಾಸಕ ಸ್ಥಾನವಿದ್ದರೂ ಬಿಜೆಪಿಯ ದೇವೇಂದ್ರ ಫಡ್ನವಿಸ್ ಸಿಎಂ ಸ್ಥಾನವನ್ನು ಶಿವಸೇನೆಗೆ ಬಿಟ್ಟುಕೊಟ್ಟು ತಾವು ಉಪಮುಖ್ಯಮಂತ್ರಿ ಸ್ಥಾನ ಪಡೆದರು. ಸದ್ಯಕ್ಕೆ ಮಹಾರಾಷ್ಟ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಬಿಟ್ಟರೆ ಬೇರಾವ ಸಚಿವರೂ ಇಲ್ಲ. ನೂತನ ಸರ್ಕಾರ ರಚನೆಯಾಗಿ 1 ತಿಂಗಳಾಗಿರುವುದರಿಂದ ಇಂದು ಸಚಿವ ಸಂಪುಟ ವಿಸ್ತರಣೆಯಾಗಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:15 am, Tue, 9 August 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್