ಇಂದು ಮಹಾರಾಷ್ಟ್ರ ಸಂಪುಟ ವಿಸ್ತರಣೆ, ಗೃಹ ಖಾತೆ ಬಿಜೆಪಿಯೇ ಉಳಿಸಿಕೊಳ್ಳುವ ಸಾಧ್ಯತೆ

Maharashtra Cabinet Expansion:ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಭಾನುವಾರ ತಮ್ಮ ಸಂಪುಟವನ್ನು ವಿಸ್ತರಿಸುವ ನಿರೀಕ್ಷೆಯಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಗೃಹ ಮತ್ತು ಕಂದಾಯ ಖಾತೆಗಳನ್ನು ಉಳಿಸಿಕೊಳ್ಳಬಹುದು ಎಂದು ಹೇಳಲಾಗುತ್ತಿದೆ. ಪಕ್ಷವು ಶಿವಸೇನೆಗೆ ನಗರಾಭಿವೃದ್ಧಿ ಖಾತೆಯನ್ನು ಹಂಚಬಹುದು ಮತ್ತು ಹಣಕಾಸು ಖಾತೆಯನ್ನು ಉಳಿಸಿಕೊಳ್ಳಬಹುದು.  ಫಡ್ನವಿಸ್ ಡಿಸೆಂಬರ್ 5 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು, ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರೊಂದಿಗೆ ಇಬ್ಬರೂ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಇಂದು ಮಹಾರಾಷ್ಟ್ರ ಸಂಪುಟ ವಿಸ್ತರಣೆ, ಗೃಹ ಖಾತೆ ಬಿಜೆಪಿಯೇ ಉಳಿಸಿಕೊಳ್ಳುವ ಸಾಧ್ಯತೆ
ದೇವೇಂದ್ರ ಫಡ್ನವಿಸ, ಅಜಿತ್ ಪವಾರ್, ಏಕನಾಥ್ ಶಿಂಧೆImage Credit source: Mint
Follow us
ನಯನಾ ರಾಜೀವ್
|

Updated on: Dec 15, 2024 | 9:27 AM

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಭಾನುವಾರ ತಮ್ಮ ಸಂಪುಟವನ್ನು ವಿಸ್ತರಿಸುವ ನಿರೀಕ್ಷೆಯಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಗೃಹ ಮತ್ತು ಕಂದಾಯ ಖಾತೆಗಳನ್ನು ಉಳಿಸಿಕೊಳ್ಳಬಹುದು ಎಂದು ಹೇಳಲಾಗುತ್ತಿದೆ. ಪಕ್ಷವು ಶಿವಸೇನೆಗೆ ನಗರಾಭಿವೃದ್ಧಿ ಖಾತೆಯನ್ನು ಹಂಚಬಹುದು ಮತ್ತು ಹಣಕಾಸು ಖಾತೆಯನ್ನು ಉಳಿಸಿಕೊಳ್ಳಬಹುದು.  ಫಡ್ನವಿಸ್ ಡಿಸೆಂಬರ್ 5 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು, ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರೊಂದಿಗೆ ಇಬ್ಬರೂ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಸೋಮವಾರದಿಂದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನದ ಮುನ್ನಾದಿನದಂದು ನಾಗ್ಪುರದಲ್ಲಿ ಸಂಜೆ 4 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಇದಕ್ಕೂ ಮುನ್ನ ದೇವೇಂದ್ರ ಫಡ್ನವಿಸ್ ಮತ್ತು ಏಕನಾಥ್ ಶಿಂಧೆ ನಡುವೆ ಸಭೆ ನಡೆದಿದ್ದು, ಸಚಿವ ಸಂಪುಟ ವಿಸ್ತರಣೆ ಕುರಿತು ಇಬ್ಬರೂ ಮಹಾಯುತಿ ನಾಯಕರು ಚರ್ಚಿಸಿದ್ದಾರೆ.

43 ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ  ಟಿವಿ9 ನೆಟ್‌ವರ್ಕ್ ಮೂಲಗಳ ಪ್ರಕಾರ, 43 ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಚಂದ್ರಶೇಖರ್ ಬಾವಂಕುಳೆ, ಚಂದ್ರಕಾಂತ್ ಪಾಟೀಲ್, ಸುಧೀರ್ ಮುಂಗಂತಿವಾರ್, ಗಿರೀಶ್ ಮಹಾಜನ್, ರವೀಂದ್ರ ಚವ್ಹಾಣ್, ಪ್ರವೀಣ್ ದಾರೇಕರ್, ಮಂಗಲ್ ಪ್ರಭಾತ್ ಲೋಧಾ, ಬಾಬನರಾವ್ ಲೋನಿಕರ್, ಪಂಕಜಾ ಮುಂಡೆ, ಆಶಿಶ್ ಶೇಲಾರ್ ಅಥವಾ ಯೋಗೇಶ್ ಸಾಗರ್ ಅವರಿಗೆ ಅವಕಾಶ ಸಿಗಬಹುದು.

ಮತ್ತಷ್ಟು ಓದಿ: ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಸೂತ್ರ, ಯಾರಿಗೆ ಯಾವ ಖಾತೆ ಸಿಗಬಹುದು?

ಸಂಭಾಜಿ ನಿಲಂಗೇಕರ್, ಜಯಕುಮಾರ್ ರಾವಲ್, ಶಿವೇಂದ್ರರಾಜೇ ಭೋಸಲೆ, ನಿತೇಶ್ ರಾಣೆ, ವಿಜಯಕುಮಾರ್ ಗವಿತ್, ದೇವಯಾನಿ ಫರಾಂಡೆ ಅಥವಾ ರಾಹುಲ್ ಅಹೆರ್, ರಾಹುಲ್ ಕುಲ್, ಮಾಧುರಿ ಮಿಸಾಲ್, ಸಂಜಯ್ ಕುಟೆ ಮತ್ತು ಗೋಪಿಚಂದ್ ಪಡಲ್ಕರ್ ಅವರಿಗೆ ಸಚಿವ ಸ್ಥಾನ ನೀಡಬಹುದು ಎಂದು ಹೇಳಲಾಗುತ್ತಿದೆ.

ನವೆಂಬರ್ 20 ರಂದು ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶವು ನವೆಂಬರ್ 23 ರಂದು ಪ್ರಕಟವಾಯಿತು. ರಾಜ್ಯದಲ್ಲಿ 288 ಸ್ಥಾನಗಳ ಪೈಕಿ 230 ಸ್ಥಾನಗಳನ್ನು ಗೆದ್ದು ಮಹಾಯುತಿ ಮೈತ್ರಿಕೂಟ ಅಧಿಕಾರಕ್ಕೆ ಬಂದಿದೆ. ಮಹಾಮೈತ್ರಿಕೂಟದ ಭಾಗವಾಗಿದ್ದ ಬಿಜೆಪಿ 132 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ 57 ಸ್ಥಾನಗಳನ್ನು ಗೆದ್ದಿದ್ದರೆ, ಅಜಿತ್ ಪವಾರ್ ಅವರ ಎನ್‌ಸಿಪಿ 41 ಸ್ಥಾನಗಳನ್ನು ಗೆದ್ದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Daily Devotional: ದಿಕ್ಕುಗಳ ಮಹತ್ವ ಹಾಗೂ ವಿಶೇಷತೆ ತಿಳಿಯಿರಿ
Daily Devotional: ದಿಕ್ಕುಗಳ ಮಹತ್ವ ಹಾಗೂ ವಿಶೇಷತೆ ತಿಳಿಯಿರಿ
ವಾರ ಭವಿಷ್ಯ: ಡಿಸೆಂಬರ್ 16 ರಿಂದ 22ರ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ
ವಾರ ಭವಿಷ್ಯ: ಡಿಸೆಂಬರ್ 16 ರಿಂದ 22ರ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ
Daily Horoscope: ಈ ರಾಶಿಯವರಿಗೆ ಏಳು ಗ್ರಹಗಳ ಶುಭಫಲವಿದೆ
Daily Horoscope: ಈ ರಾಶಿಯವರಿಗೆ ಏಳು ಗ್ರಹಗಳ ಶುಭಫಲವಿದೆ
Bigg Boss: ರಜತ್ ಮಾಡಿದ ತಪ್ಪಿಗೆ ಶಿಕ್ಷೆ ವಿಧಿಸಿದ ಕಿಚ್ಚ ಸುದೀಪ್
Bigg Boss: ರಜತ್ ಮಾಡಿದ ತಪ್ಪಿಗೆ ಶಿಕ್ಷೆ ವಿಧಿಸಿದ ಕಿಚ್ಚ ಸುದೀಪ್
ಬ್ರ್ಯಾಂಡ್ ಬೆಂಗಳೂರು ಸಿಗುತ್ತಿಲ್ಲ, ರಸ್ತೆಗುಂಡಿಗಳಲ್ಲಿ ದಫನ್ ಆಯಿತೇ?
ಬ್ರ್ಯಾಂಡ್ ಬೆಂಗಳೂರು ಸಿಗುತ್ತಿಲ್ಲ, ರಸ್ತೆಗುಂಡಿಗಳಲ್ಲಿ ದಫನ್ ಆಯಿತೇ?
ಒಂದು ದೇಶ ಒಂದು ಚುನಾವಣೆ ಮಸೂದೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧ:ಶಾಸಕ
ಒಂದು ದೇಶ ಒಂದು ಚುನಾವಣೆ ಮಸೂದೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧ:ಶಾಸಕ
ಪರಭಾಷಾ ಚಿತ್ರಗಳ ಹಾವಳಿ ಹೆಚ್ಚುತ್ತಿದೆ, ಕಡಿಮೆಯಾಗುತ್ತಿಲ್ಲ: ಗೋವಿಂದು
ಪರಭಾಷಾ ಚಿತ್ರಗಳ ಹಾವಳಿ ಹೆಚ್ಚುತ್ತಿದೆ, ಕಡಿಮೆಯಾಗುತ್ತಿಲ್ಲ: ಗೋವಿಂದು
ಧರಣಿಯಲ್ಲಿ ಪಾಲ್ಗೊಂಡ ಸಚಿವೆಯನ್ನು ಸಿಎಂ ಸಸ್ಪೆಂಡ್ ಮಾಡಲಿ: ಸ್ವಾಮೀಜಿ
ಧರಣಿಯಲ್ಲಿ ಪಾಲ್ಗೊಂಡ ಸಚಿವೆಯನ್ನು ಸಿಎಂ ಸಸ್ಪೆಂಡ್ ಮಾಡಲಿ: ಸ್ವಾಮೀಜಿ
ಗುರಿ ಕಳೆದುಕೊಂಡವರಿಗೆ, ಹಾದಿ ತಪ್ಪಿದವರಿಗೆ ಕಿಚ್ಚ ತೋರಲಿದ್ದಾರೆ ದಾರಿ
ಗುರಿ ಕಳೆದುಕೊಂಡವರಿಗೆ, ಹಾದಿ ತಪ್ಪಿದವರಿಗೆ ಕಿಚ್ಚ ತೋರಲಿದ್ದಾರೆ ದಾರಿ
ನಮ್ಮ ಹೋರಾಟಗಳನ್ನು ನಿಲ್ಲಿಸುವ ವ್ಯರ್ಥ ಪ್ರಯತ್ನ ಸರ್ಕಾರ ಮಾಡ್ತಿದೆ: ಅಶೋಕ
ನಮ್ಮ ಹೋರಾಟಗಳನ್ನು ನಿಲ್ಲಿಸುವ ವ್ಯರ್ಥ ಪ್ರಯತ್ನ ಸರ್ಕಾರ ಮಾಡ್ತಿದೆ: ಅಶೋಕ