ಮಹಾರಾಷ್ಟ್ರ ಸಿಎಂ ಆಯ್ಕೆ ಇನ್ನೂ ಅತಂತ್ರ; ಡಿ. 5ಕ್ಕೆ ಸಂಪುಟದ ಪ್ರಮಾಣವಚನ ಸ್ವೀಕಾರ ಸಾಧ್ಯತೆ

ಮಹಾರಾಷ್ಟ್ರದಲ್ಲಿ ಇನ್ನೂ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬುದು ಘೋಷಣೆಯಾಗಿಲ್ಲ. ಆದರೆ, ಡಿಸೆಂಬರ್ 5ರಂದು ನಡೆಯಲಿರುವ ಇಬ್ಬರು ಉಪ ಮುಖ್ಯಮಂತ್ರಿಗಳೊಂದಿಗೆ ಮಹಾರಾಷ್ಟ್ರ ಸಂಪುಟದ ಪ್ರಮಾಣ ವಚನ ಸ್ವೀಕಾರ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಮಹಾರಾಷ್ಟ್ರ ಸಿಎಂ ಆಯ್ಕೆ ಇನ್ನೂ ಅತಂತ್ರ; ಡಿ. 5ಕ್ಕೆ ಸಂಪುಟದ ಪ್ರಮಾಣವಚನ ಸ್ವೀಕಾರ ಸಾಧ್ಯತೆ
ಏಕನಾಥ್ ಶಿಂಧೆ, ಅಜಿತ್ ಪವಾರ್, ದೇವೇಂದ್ರ ಫಡ್ನವಿಸ್
Follow us
ಸುಷ್ಮಾ ಚಕ್ರೆ
|

Updated on:Nov 29, 2024 | 7:36 PM

ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಯಾರೆಂಬುದರ ಬಗ್ಗೆ ಕುತೂಹಲ ಮುಂದುವರಿದಿದ್ದು, ಇದರ ನಡುವೆ ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಡಿಸೆಂಬರ್ 5ರಂದು ಮಹಾರಾಷ್ಟ್ರದ ಆಜಾದ್ ಮೈದಾನದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ರೇಸ್‌ನಲ್ಲಿ ದೇವೇಂದ್ರ ಫಡ್ನವೀಸ್ ಇನ್ನೂ ಮುಂದಿದ್ದಾರೆ. ಏಕನಾಥ್ ಶಿಂಧೆ ಇಂದು ಎರಡು ಪ್ರಮುಖ ಸಭೆಗಳನ್ನು ರದ್ದುಗೊಳಿಸಿದ್ದಾರೆ.

ಮೂಲಗಳನ್ನು ನಂಬುವುದಾದರೆ ಏಕನಾಥ್ ಶಿಂಧೆ ತಮ್ಮ ಗ್ರಾಮವಾದ ಸತಾರಾಕ್ಕೆ ತೆರಳಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಿತ್ರಪಕ್ಷ ಭಾರಿ ಬಹುಮತವನ್ನು ದಾಖಲಿಸಿದ ನಂತರ ಮಹಾರಾಷ್ಟ್ರದಲ್ಲಿ ಮುಂದಿನ ಸರ್ಕಾರಕ್ಕಾಗಿ ಅಧಿಕಾರ ಹಂಚಿಕೆ ಒಪ್ಪಂದವನ್ನು ಭೇದಿಸಲು ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಅವರೊಂದಿಗೆ ಗುರುವಾರ ತಡರಾತ್ರಿ ಅಮಿತ್ ಶಾ ಮತ್ತು ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆ: ಒಂದು ಕ್ಷೇತ್ರದಿಂದ ಅಭ್ಯರ್ಥಿ ಘೋಷಿಸಿದ ಠಾಕ್ರೆ, ಶಿವಸೇನೆ ಕಾಂಗ್ರೆಸ್​ ನಡುವೆ ಹೆಚ್ಚಿದ ಉದ್ವಿಗ್ನತೆ

ಮೂಲಗಳ ಪ್ರಕಾರ, ಮೊದಲು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಅಲ್ಲಿ ಅದರ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ ಮತ್ತು ನಂತರ ಮಹಾಯುತಿ ಮೈತ್ರಿಕೂಟದ ಜಂಟಿ ಸಭೆ ನಡೆಯಲಿದೆ.

ಯಾರಿಗೆ ಏನು ಸಿಗುತ್ತದೆ?:

ಮೂಲಗಳ ಪ್ರಕಾರ, ಹಳೆಯ ಮತ್ತು ಹೊಸ ಮುಖಗಳ ಸಮಾನ ಮಿಶ್ರಣವನ್ನು ಹೊಂದಿರುವ 17 ಕ್ಯಾಬಿನೆಟ್ ಮಂತ್ರಿಗಳನ್ನು ಬಿಜೆಪಿ ಹೊಂದಬಹುದು. ಏಕನಾಥ್ ಶಿಂಧೆ ಅವರ ಶಿವಸೇನೆಗೆ 9 ಕ್ಯಾಬಿನೆಟ್ ಸಚಿವರನ್ನು ನೀಡಬಹುದು. ಅಜಿತ್ ಪವಾರ್ ಅವರ ಎನ್‌ಸಿಪಿಗೆ 7 ಕ್ಯಾಬಿನೆಟ್ ಮಂತ್ರಿ ಸ್ಥಾನಗಳನ್ನು ಹೊಂದಬಹುದು.

ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆ: ಉದ್ಧವ್ ಠಾಕ್ರೆಯ ಶಿವಸೇನೆಯಿಂದ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಗುರುವಾರ ರಾತ್ರಿ ಮಹಾರಾಷ್ಟ್ರ ರಾಜ್ಯದಲ್ಲಿ ಸರ್ಕಾರ ರಚನೆಯ ವಿಷಯದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆ.ಪಿ. ನಡ್ಡಾ ಅವರೊಂದಿಗೆ ಉತ್ತಮ ಮತ್ತು ಸಕಾರಾತ್ಮಕ ಚರ್ಚೆ ನಡೆಸಿದ್ದೇನೆ ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:43 pm, Fri, 29 November 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ