AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಸಿಎಂ ಫಡ್ನವಿಸ್ ಕಚೇರಿಗೆ ಬಾಂಬ್ ಇಡುವುದಾಗಿ ಪಾಕಿಸ್ತಾನಿ ನಂಬರ್​ನಿಂದ ಬಂತು ಕರೆ

ಮಹಾರಾಷ್ಟ್ರ ಮಖ್ಯಮಂತ್ರಿ ದೇವೇಂದ್ರ ಫಡ್ನವಿಸ್​ ಕಚೇರಿಗೆ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಪಾಕಿಸ್ತಾನಿ ಸಂಖ್ಯೆಯಿಂದ ಬೆದರಿಕೆ ಕರೆ ಬಂದಿದೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪಾಕಿಸ್ತಾನದ ಸಂಖ್ಯೆಯಿಂದ ವರ್ಲಿ ಸಂಚಾರ ಪೊಲೀಸ್ ನಿಯಂತ್ರಣ ಕೊಠಡಿಗೆ ಈ ಸಂದೇಶ ಕಳುಹಿಸಲಾಗಿದ್ದು, ಇದು ಗಂಭೀರ ಭದ್ರತಾ ಕಳವಳ ಹುಟ್ಟುಹಾಕಿದೆ.

ಮಹಾರಾಷ್ಟ್ರ: ಸಿಎಂ ಫಡ್ನವಿಸ್ ಕಚೇರಿಗೆ ಬಾಂಬ್ ಇಡುವುದಾಗಿ ಪಾಕಿಸ್ತಾನಿ ನಂಬರ್​ನಿಂದ ಬಂತು ಕರೆ
ದೇವೇಂದ್ರ ಫಡ್ನವಿಸ್ Image Credit source: Oneindia
ನಯನಾ ರಾಜೀವ್
|

Updated on: Feb 28, 2025 | 11:45 AM

Share

ಮಹಾರಾಷ್ಟ್ರ, ಫೆಬ್ರವರಿ 28: ಮಹಾರಾಷ್ಟ್ರ ಮಖ್ಯಮಂತ್ರಿ ದೇವೇಂದ್ರ ಫಡ್ನವಿಸ್(Devendra Fadnavis)​ ಕಚೇರಿಗೆ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಪಾಕಿಸ್ತಾನಿ ಸಂಖ್ಯೆಯಿಂದ ಬೆದರಿಕೆ ಕರೆ ಬಂದಿದೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪಾಕಿಸ್ತಾನದ ಸಂಖ್ಯೆಯಿಂದ ವರ್ಲಿ ಸಂಚಾರ ಪೊಲೀಸ್ ನಿಯಂತ್ರಣ ಕೊಠಡಿಗೆ ಈ ಸಂದೇಶ ಕಳುಹಿಸಲಾಗಿದ್ದು, ಇದು ಗಂಭೀರ ಭದ್ರತಾ ಕಳವಳ ಹುಟ್ಟುಹಾಕಿದೆ.

ಮುಂಬೈ ಪೊಲೀಸರು ತ್ವರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ, ಸಂದೇಶದ ಮೂಲವನ್ನು ಪತ್ತೆಹಚ್ಚಲು ಮತ್ತು ಅದರ ವಿಶ್ವಾಸಾರ್ಹತೆಯನ್ನು ನಿರ್ಧರಿಸಲು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಸಿಎಂಒ ಮತ್ತು ಇತರ ಪ್ರಮುಖ ಸರ್ಕಾರಿ ಕಟ್ಟಡಗಳ ಸುತ್ತಲೂ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ. ತನಿಖೆ ಮುಂದುವರೆದಂತೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಮತ್ತಷ್ಟು ಓದಿ:  Schools Bomb Threat:ದೆಹಲಿ, ನೋಯ್ಡಾ ಶಾಲೆಗಳಿಗೆ ಬಾಂಬ್ ಬೆದರಿಕೆ

ಮುಂಬೈ ಸಂಚಾರ ಪೊಲೀಸರಿಗೆ ಪಾಕಿಸ್ತಾನಿ ಸಂಖ್ಯೆಯಿಂದ ವಾಟ್ಸಾಪ್‌ನಲ್ಲಿ ಈ ಬೆದರಿಕೆ ಸಂದೇಶ ಬಂದಿದೆ. ಬುಧವಾರ ಮಧ್ಯಾಹ್ನ ಸಂದೇಶ ಬಂದ ನಂತರ, ಪೊಲೀಸ್ ತನಿಖೆಯನ್ನು ಕಟ್ಟೆಚ್ಚರಗೊಳಿಸಲಾಯಿತು. ಸಂದೇಶ ಕಳುಹಿಸಿದ ವ್ಯಕ್ತಿ ತನ್ನ ಹೆಸರನ್ನು ಮಲಿಕ್ ಶಹಬಾಜ್ ಹುಮಾಯೂನ್ ರಾಜಾ ದೇವ್ ಎಂದು ಹೇಳಿದ್ದಾನೆ. ಸಂದೇಶ ಕಳುಹಿಸುತ್ತಿರುವ ವ್ಯಕ್ತಿ ಭಾರತದಿಂದ ಬಂದವನೋ ಅಥವಾ ಹೊರಗಿನಿಂದ ಬಂದವನೋ ಎಂದು ಕಂಡುಹಿಡಿಯಲು ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಳೆದ ವಾರ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಬಾಂಬ್ ಬೆದರಿಕೆ ಬಂದಿತ್ತು. ಶಿಂಧೆ ಅವರ ವಾಹನವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕುವ ಈ ಇಮೇಲ್ ಅನ್ನು ಗೋರೆಗಾಂವ್ ಮತ್ತು ಜೆಜೆ ಮಾರ್ಗ್ ಪೊಲೀಸ್ ಠಾಣೆಗಳು, ಸಿಎಂಒ ಮತ್ತು ಸಚಿವಾಲಯ ಸೇರಿದಂತೆ ಹಲವಾರು ಅಧಿಕೃತ ಖಾತೆಗಳಿಗೆ ಕಳುಹಿಸಲಾಗಿದೆ.

ಆಗಸ್ಟ್ 20, 2022 ರಂದು ಕೂಡ ಪಾಕಿಸ್ತಾನಿ ಸಂಖ್ಯೆಯಿಂದ ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶವನ್ನು ಕಳುಹಿಸಲಾಗಿದೆ. ಆ ಸಮಯದಲ್ಲಿ ಕರೆ ಮಾಡಿದ ವ್ಯಕ್ತಿ ಮುಂಬೈನಲ್ಲಿ 26/11 ರಂತಹ ದಾಳಿಯ ಬೆದರಿಕೆ ಹಾಕಿದ್ದ. ಮೂರು ವರ್ಷಗಳ ಹಿಂದೆಯೂ ಮುಂಬೈ ಸಂಚಾರ ಪೊಲೀಸರ ವಾಟ್ಸಾಪ್ ಸಂಖ್ಯೆಗೆ ಒಂದು ಸಂದೇಶ ಬಂದಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ