ಕರ್ನಾಟಕದ ನಿಲುವು ಖಂಡಿಸಿ ಗಡಿ ಬಗ್ಗೆ ನಿರ್ಣಯ ಮಂಡಿಸಿದ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ

Karnataka Maharashtra Border Row ಮಹಾರಾಷ್ಟ್ರದೊಂದಿಗಿನ ಗಡಿ ವಿವಾದದ ನಿರ್ಣಯವನ್ನು ಕರ್ನಾಟಕ ವಿಧಾನಸಭೆಯು ಸರ್ವಾನುಮತದಿಂದ ಅಂಗೀಕರಿಸಿದ ಕೆಲವೇ ದಿನಗಳ ನಂತರ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಕರ್ನಾಟಕದ "ಮರಾಠಿ ವಿರೋಧಿ" ನಿಲುವನ್ನು ಖಂಡಿಸಿದ್ದು ರಾಜ್ಯ ವಿಧಾನಸಭೆಯಲ್ಲಿ ಇದೇ ರೀತಿಯ ನಿರ್ಣಯವನ್ನು ಮಂಡಿಸಿದ್ದಾರೆ

ಕರ್ನಾಟಕದ ನಿಲುವು ಖಂಡಿಸಿ ಗಡಿ ಬಗ್ಗೆ ನಿರ್ಣಯ ಮಂಡಿಸಿದ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ
ಅಮಿತ್ ಶಾ ಜತೆ ಏಕನಾಥ್ ಶಿಂಧೆ ಮತ್ತು ಬೊಮ್ಮಾಯಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Dec 27, 2022 | 2:25 PM

ಮುಂಬೈ: ರಾಜ್ಯದ ಹಿತಾಸಕ್ತಿಗಳನ್ನು ಕಾಪಾಡಲು ಮಹಾರಾಷ್ಟ್ರದೊಂದಿಗಿನ ಗಡಿ ವಿವಾದದ (Border Row) ನಿರ್ಣಯವನ್ನು ಕರ್ನಾಟಕ (Karnataka) ವಿಧಾನಸಭೆಯು ಸರ್ವಾನುಮತದಿಂದ ಅಂಗೀಕರಿಸಿದ ಕೆಲವೇ ದಿನಗಳ ನಂತರ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಅವರು ಕರ್ನಾಟಕದ “ಮರಾಠಿ ವಿರೋಧಿ” ನಿಲುವನ್ನು ಖಂಡಿಸಿದ್ದು ರಾಜ್ಯ ವಿಧಾನಸಭೆಯಲ್ಲಿ ಇದೇ ರೀತಿಯ ನಿರ್ಣಯವನ್ನು ಮಂಡಿಸಿದ್ದಾರೆ. ಇದೂ ಸಹ ಸರ್ವಾನುಮತದಿಂದ ಅಂಗೀಕಾರವಾಗಿದೆ. ಮುಂದಿನ ವರ್ಷ ಕರ್ನಾಟಕದಲ್ಲಿ ಚುನಾವಣೆ ನಡೆಯಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಧ್ಯಪ್ರವೇಶದ ಹೊರತಾಗಿಯೂ ಬಿಜೆಪಿ ಆಡಳಿತವಿರುವ ಎರಡೂ ರಾಜ್ಯಗಳ ನಡುವಿನ ಸಂಘರ್ಷ ಮತ್ತಷ್ಟು ಉಲ್ಬಣಗೊಳ್ಳುವ ನಿರೀಕ್ಷೆಯಿದೆ. ಅಲ್ಲಿ ಮರಾಠಿ ಮಾತನಾಡುವ 865 ಗ್ರಾಮಗಳಿವೆ, ಈ ಗ್ರಾಮಗಳ ಇಂಚಿಂಚನ್ನೂ ಬಿಡದೆ ಅವುಗಳನ್ನು ಮಹಾರಾಷ್ಟ್ರಕ್ಕೆ ತರಬೇಕು. ಸುಪ್ರೀಂಕೋರ್ಟ್ ಏನು ಕೇಳುತ್ತದೆಯೋ ಅದನ್ನು ಮಹಾರಾಷ್ಟ್ರ ಸರ್ಕಾರ ಮಾಡುತ್ತದೆ ಎಂದು ನಿರ್ಣಯದಲ್ಲಿ ಹೇಳಿದೆ. ಬೆಳಗಾವಿ, ಕಾರವಾರ, ಬೀದರ್, ನಿಪ್ಪಾಣಿ,ಭಾಲ್ಕಿಯ ಪ್ರತಿಯೊಂದು ಇಂಚನ್ನೂ ಮಹಾರಾಷ್ಟ್ರದ ಭಾಗವನ್ನಾಗಿ ಮಾಡಲಾಗುವುದು ಎಂದು ನಿರ್ಣಯದಲ್ಲಿ ಒತ್ತಿ ಹೇಳಲಾಗಿದೆ.

ಮಹಾರಾಷ್ಟ್ರ ಸೃಷ್ಟಿಸಿರುವ ಗಡಿ ವಿವಾದವನ್ನು ಕರ್ನಾಟಕ ಗುರುವಾರ ಖಂಡಿಸಿತ್ತು. ಕರ್ನಾಟಕದ ಭೂಮಿ, ನೀರು, ಭಾಷೆ ಮತ್ತು ಕನ್ನಡಿಗರ ಹಿತಾಸಕ್ತಿಗೆ ಸಂಬಂಧಿಸಿದಂತೆ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ.ಕರ್ನಾಟಕದ ಜನತೆ ಮತ್ತು ಸದಸ್ಯರ (ವಿಧಾನಸಭಾ) ಭಾವನೆಗಳು ಕೂಡಾ ಇದೇ ಆಗಿದೆ. ರಾಜ್ಯದ ಹಿತಾಸಕ್ತಿ ಕಾಪಾಡಲು ನಾವೆಲ್ಲರೂ ಒಗ್ಗಟ್ಟಿನಿಂದ ಸಾಂವಿಧಾನಿಕ ಮತ್ತು ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ಬದ್ಧರಾಗಿದ್ದೇವೆ ಎಂದು ಕರ್ನಾಟಕ ಹೇಳಿದೆ.

ಮಹಾರಾಷ್ಟ್ರದವರು ಅನಗತ್ಯವಾಗಿ ಸೃಷ್ಟಿಸಿರುವ ಗಡಿ ವಿವಾದಗಳನ್ನು ಖಂಡಿಸಿ ಈ ಸದನವು ರಾಜ್ಯದ ಹಿತಾಸಕ್ತಿ ಕಾಪಾಡಲು ಬದ್ಧವಾಗಿದೆ ಎಂಬ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸುತ್ತದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಬೊಮ್ಮಾಯಿ ಅವರು ಕಳೆದ ವಾರ ಮಂಡಿಸಿದ ನಿರ್ಣಯದಲ್ಲಿ ಹೇಳಲಾಗಿದೆ.

ಇದನ್ನೂ ಓದಿ:Nasal Vaccine Price: ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆಗೆ ಬೆಲೆ ನಿಗದಿ: ಸರ್ಕಾರಿ, ಖಾಸಗಿ ಆಸ್ಪತ್ರೆ ದರ ವಿವರ

ಗೃಹ ಸಚಿವ ಅಮಿತ್ ಶಾ ಅವರೊಂದಿಗಿನ ಸಭೆಯಲ್ಲಿ ಎರಡೂ ರಾಜ್ಯಗಳು ಶಾಂತಿ ಕಾಪಾಡಲು ಒಪ್ಪಿಕೊಂಡಿವೆ ಎಂದು ಕರ್ನಾಟಕ ಮುಖ್ಯಮಂತ್ರಿ ಈ ಹಿಂದೆ ಹೇಳಿದ್ದರು.

ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿ ವಿವಾದವು 1956 ರ ರಾಜ್ಯ ಮರುಸಂಘಟನೆ ಕಾಯಿದೆಯ ಅನುಷ್ಠಾನಕ್ಕೆ ಹೋಗುತ್ತದೆ. ಆಗಿನ ಮಹಾರಾಷ್ಟ್ರ ಸರ್ಕಾರವು ಕರ್ನಾಟಕದೊಂದಿಗೆ ತನ್ನ ಗಡಿಯನ್ನು ಮರುಹೊಂದಿಸುವಂತೆ ಒತ್ತಾಯಿಸಿತ್ತು. ಇದರ ಬೆನ್ನಲ್ಲೇ ಎರಡೂ ರಾಜ್ಯಗಳಿಂದ ನಾಲ್ವರು ಸದಸ್ಯರ ಸಮಿತಿ ರಚಿಸಲಾಗಿತ್ತು. ಮಹಾರಾಷ್ಟ್ರ ಸರ್ಕಾರವು 260 ಪ್ರಧಾನವಾಗಿ ಕನ್ನಡ ಮಾತನಾಡುವ ಗ್ರಾಮಗಳನ್ನು ವರ್ಗಾಯಿಸಲು ತನ್ನ ಇಚ್ಛೆಯನ್ನು ವ್ಯಕ್ತಪಡಿಸಿತ್ತು, ಆದರೆ ಕರ್ನಾಟಕವು ಈ ಪ್ರಸ್ತಾಪವನ್ನು ತಿರಸ್ಕರಿಸಿತು.

ನಂತರ ಎರಡೂ ಸರ್ಕಾರಗಳು ಈ ವಿಷಯವನ್ನು ತ್ವರಿತಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದವು. ಆದರೆ, ಈ ವಿಷಯ ಇನ್ನೂ ಇತ್ಯರ್ಥವಾಗಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:54 pm, Tue, 27 December 22

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ