ಇಂದು ದೇವೇಂದ್ರ ಫಡ್ನವಿಸ್- ಏಕನಾಥ್ ಶಿಂಧೆಯಿಂದ ಪ್ರಧಾನಿ ಮೋದಿ ಭೇಟಿ; ಅಂತಿಮವಾಗುತ್ತಾ ಸಚಿವರ ಪಟ್ಟಿ?

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ.

ಇಂದು ದೇವೇಂದ್ರ ಫಡ್ನವಿಸ್- ಏಕನಾಥ್ ಶಿಂಧೆಯಿಂದ ಪ್ರಧಾನಿ ಮೋದಿ ಭೇಟಿ; ಅಂತಿಮವಾಗುತ್ತಾ ಸಚಿವರ ಪಟ್ಟಿ?
ಏಕನಾಥ್ ಶಿಂಧೆ- ದೇವೇಂದ್ರ ಫಡ್ನವಿಸ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 09, 2022 | 11:01 AM

ನವದೆಹಲಿ: ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆ (Eknath Shinde) ನಿನ್ನೆ ಸಂಜೆಯೇ ದೆಹಲಿಗೆ ಬಂದಿಳಿದಿದ್ದಾರೆ. ಶುಕ್ರವಾರ ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ಭೇಟಿಯಾಗಿದ್ದರು. ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಏಕನಾಥ್ ಶಿಂಧೆ ಮತ್ತು ಫಡ್ನವಿಸ್ ಭೇಟಿಯಾಗಲಿದ್ದಾರೆ. ದೆಹಲಿಯ ಭೇಟಿ ವೇಳೆ ಮಹಾರಾಷ್ಟ್ರದ ಕ್ಯಾಬಿನೆಟ್ ರಚನೆಯ ಬಗ್ಗೆ ಚರ್ಚೆ ನಡೆಯುವ ನಿರೀಕ್ಷೆ ಇದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ. ಮಹಾರಾಷ್ಟ್ರದಲ್ಲಿ ನೂತನ ಸಚಿವ ಸಂಪುಟ ರಚನೆಯಾಗಲಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದೆ.

ಬೃಹತ್ ಬಂಡಾಯದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದರು. ಅದರ ಬೆನ್ನಲ್ಲೇ ಜೂನ್ 30ರಂದು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಏಕನಾಥ್ ಶಿಂಧೆ ಮತ್ತು ಡಿಸಿಎಂ ದೇವೇಂದ್ರ ಫಡ್ನವಿಸ್ ದೆಹಲಿ ಪ್ರವಾಸದಲ್ಲಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರನ್ನು ಕೂಡ ಭೇಟಿ ಮಾಡುವ ನಿರೀಕ್ಷೆಯಿದೆ.

ಇದನ್ನೂ ಓದಿ
Image
Maharashtra Politics: ಸಿಎಂ ಏಕನಾಥ್ ಶಿಂಧೆ ಸರ್ಕಾರಕ್ಕೆ ಉದ್ಧವ್ ಠಾಕ್ರೆ ಬಣದಿಂದ ಹೊಸ ಸವಾಲು
Image
Maharashtra New Cabinet: ಬಿಜೆಪಿಗೆ 25 ಸಚಿವ ಸ್ಥಾನ, ಶಿಂಧೆ ಬಣಕ್ಕೆ 13 ಸ್ಥಾನ; ಮಹಾರಾಷ್ಟ್ರ ನೂತನ ಸಂಪುಟ ಹೀಗಿದೆ
Image
Maharashtra Rain: ಮಹಾರಾಷ್ಟ್ರದ ಥಾಣೆಯಲ್ಲಿ ಪ್ರವಾಹ ಭೀತಿ; ಸಿಎಂ ಏಕನಾಥ್ ಶಿಂಧೆ ಮನೆ ಆವರಣಕ್ಕೂ ನುಗ್ಗಿದ ಮಳೆ ನೀರು

ಇದನ್ನೂ ಓದಿ: Maharashtra New Cabinet: ಬಿಜೆಪಿಗೆ 25 ಸಚಿವ ಸ್ಥಾನ, ಶಿಂಧೆ ಬಣಕ್ಕೆ 13 ಸ್ಥಾನ; ಮಹಾರಾಷ್ಟ್ರ ನೂತನ ಸಂಪುಟ ಹೀಗಿದೆ

ಮಹಾರಾಷ್ಟ್ರದ ಈ ಇಬ್ಬರು ನಾಯಕರು ಶುಕ್ರವಾರ ರಾತ್ರಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಬಿಜೆಪಿ ಮತ್ತು ಶಿವಸೇನೆಯ ಶಿಂಧೆ ನೇತೃತ್ವದ ಬಣದ ನಡುವಿನ ಅಧಿಕಾರ ಹಂಚಿಕೆ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ನೀವಿಬ್ಬರೂ ನಿಷ್ಠೆಯಿಂದ ಜನರಿಗೆ ಸೇವೆ ಸಲ್ಲಿಸುತ್ತೀರಿ, ಮಹಾರಾಷ್ಟ್ರವನ್ನು ಅಭಿವೃದ್ಧಿಯ ಹೊಸ ಎತ್ತರಕ್ಕೆ ಕೊಂಡೊಯ್ಯುತ್ತೀರಿ ಎಂದು ನನಗೆ ವಿಶ್ವಾಸವಿದೆ ಎಂದು ಅಮಿತ್ ಷಾ ಶುಕ್ರವಾರ ರಾತ್ರಿ ಟ್ವಿಟರ್‌ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: Maharashtra Politics: ಸಿಎಂ ಏಕನಾಥ್ ಶಿಂಧೆ ಸರ್ಕಾರಕ್ಕೆ ಉದ್ಧವ್ ಠಾಕ್ರೆ ಬಣದಿಂದ ಹೊಸ ಸವಾಲು

ಮೂಲಗಳ ಪ್ರಕಾರ, 28 ಸಚಿವ ಸ್ಥಾನಗಳು ಬಿಜೆಪಿಗೆ ಬರಲಿದ್ದು, ಈ ಪೈಕಿ 8 ಮಂದಿ ರಾಜ್ಯ ಸಚಿವರಾಗಲಿದ್ದಾರೆ. ಇದೇ ವೇಳೆ ಶಿಂಧೆ ಪಾಳಯಕ್ಕೆ 14 ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ. ಪಿಟಿಐ ಪ್ರಕಾರ, ಇಂದು ಮೋದಿ, ಜೆ.ಪಿ. ನಡ್ಡಾ ಭೇಟಿಯ ಬಳಿಕ ಸಂಜೆ ಸಿಎಂ ಏಕನಾಥ್ ಶಿಂಧೆ ಪುಣೆಗೆ ತೆರಳುತ್ತಾರೆ. ಭಾನುವಾರ ಮುಂಜಾನೆ ‘ಆಷಾಢ ಏಕಾದಶಿ’ ಮಹಾಪೂಜೆಯಲ್ಲಿ ಪಾಲ್ಗೊಳ್ಳಲು ದೇವಾಲಯದ ಪಟ್ಟಣವಾದ ಪಂಢರಪುರಕ್ಕೆ ತೆರಳಲಿದ್ದಾರೆ.

ಪ್ರಮುಖ ಹಿಂದೂ ಹಬ್ಬವಾದ ‘ಆಷಾಢ ಏಕಾದಶಿ’ಯಂದು ದೇವಸ್ಥಾನದಲ್ಲಿ ಮುಂಜಾನೆ ಪ್ರಾರ್ಥನೆಗೆ ಮುಖ್ಯಮಂತ್ರಿ ಮತ್ತು ಅವರ ಸಂಗಾತಿಯು ಹಾಜರಾಗಲು ಮಹಾರಾಷ್ಟ್ರದಲ್ಲಿ ದೀರ್ಘಕಾಲದ ಸಂಪ್ರದಾಯವಾಗಿದೆ.

Published On - 11:01 am, Sat, 9 July 22

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ