ಮುಂಬೈ: ಕಲ್ಲಿದ್ದಲು ಉತ್ಪಾದನೆ ಹೆಚ್ಚಿಸುವಲ್ಲಿ (Coal and Mines) ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ ಕಾರ್ಯಕ್ಷಮತೆ ಶ್ಲಾಘನೀಯ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅಭಿಪ್ರಾಯ ಮುಕ್ತಕಂಠದಿಂದ ಹೊಗಳಿದ್ದಾರೆ. ಮುಂಬೈನಲ್ಲಿಂದು ಕಲ್ಲಿದ್ದಲು ಮತ್ತು ಗಣಿ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಂಡ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು (Maharashtra CM Eknath shinde) ಪ್ರಲ್ಹಾದ ಜೋಶಿಯವರ (Union Coal Minister Pralhad Joshi) ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಳೆದ ಸಾಲಿನಲ್ಲಿ ದೇಶದಲ್ಲಿ ಕಲ್ಲಿದ್ದಲು ಕೊರತೆ ಎದುರಾಗಿದ್ದನ್ನ ನಾನು ನೋಡಿದ್ದೇನೆ. ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಸಮರ್ಪಕವಾಗಿ ದೊರೆಯುತ್ತದೆಯೋ ಇಲ್ಲವೋ ಎಂಬ ಆತಂಕ ದೇಶದ ರಾಜ್ಯಗಳಿಗೆ ಕಾಡಿತ್ತು. ಆದರೆ ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಅವರು ಕಲ್ಲಿದ್ದಲು ಕೊರತೆಯನ್ನ ಒಂದು ಸವಾಲಾಗಿ ಸ್ವೀಕರಿಸಿದರು. ದೇಶಕ್ಕೆ ಎಷ್ಟು ಕಲ್ಲಿದ್ದಲು ಬೇಕೋ ಅಷ್ಟನ್ನ ಒದಗಿಸಿಕೊಡುವುದಾಗಿ ಅಭಯ ನೀಡಿದ್ದರು. ಅದರಂತೆ ಕಲ್ಲಿದ್ದಲು ಕೊರತೆಯನ್ನು ನೀಗಿಸಿ ಅಗತ್ಯವಿರುವ ಕಲ್ಲಿದ್ದಲನ್ನು ಪೂರೈಸಿ ಸೈ ಎನಿಸಿಕೊಂಡಿದ್ದಾರೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಪ್ರಲ್ಹಾದ್ ಜೋಶಿ ಅವರನ್ನ ಮುಕ್ತಕಂಠದಿಂದ ಶ್ಲಾಘಿಸಿದರು.
ಇದೀಗ 6 ನೇ ಹಂತದ ಕಲ್ಲಿದ್ದಲು ಬ್ಲಾಕ್ಸ್ ಗಳ ಹರಾಜಿನಲ್ಲಿ ಖಾಸಗಿ ವಲಯಕ್ಕೂ ಅವಕಾಶ ಕಲ್ಪಿಸುವ ಮೂಲಕ ಕಲ್ಲಿದ್ದಲು ಉತ್ಪಾದನೆ ಹೆಚ್ಚಿಸುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಹಾರಾಷ್ಟ್ರಕ್ಕೆ 13 ಕಲ್ಲಿದ್ದಲು ಗಣಿ ಬ್ಲಾಕ್ಸ್ ಗಳನ್ನ ಕೇಂದ್ರ ಸರ್ಕಾರ ನೀಡಿದೆ. ಇದಕ್ಕಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಧನ್ಯವಾದ ಸಲ್ಲಿಸಿದರು.
Addressed the Investors’ Conclave in Mumbai, in presence of CM @mieknathshinde, State Minister @dadajibhuse & MoS @raosahebdanve
Invited the industry to participate in the ongoing 6th tranche of commercial coal auctions and auction of mineral blocks in the state.@PMOIndia pic.twitter.com/uyaYpedQf4— Pralhad Joshi (@JoshiPralhad) December 1, 2022
ಡಿ. 3 ರಂದು ಬೆಂಗಳೂರಿನಲ್ಲಿ ಗಣಿ ಹೂಡಿಕೆದಾರರ ಸಮಾವೇಶ – ಪ್ರಲ್ಹಾದ್ ಜೋಶಿ
ಡಿ. 03 ಶನಿವಾರದಂದು ಬೆಂಗಳೂರಿನಲ್ಲಿ ಹೂಡಿಕೆದಾರರ ಸಮಾವೇಶ ನಡೆಯಲಿದೆ ಎಂದು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಮುಂಬೈ ನಲ್ಲಿ ಇಂದು ಕಲ್ಲಿದ್ದಲು ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.
ಮುಂಬೈನಲ್ಲಿ ನಡೆದ ಕಲ್ಲಿದ್ದಲು ಹೂಡಿಕೆದಾರರ ಸಮಾವೇಶ ಯಶಸ್ವಿಯಾಗಿದ್ದು, ಇದೇ ಶನಿವಾರ ಬೆಂಗಳೂರಿನಲ್ಲಿ ಗಣಿಗಾರಿಕೆ ಕುರಿತಂತೆ ಹೂಡಿಕೆದಾರರ ಸಮಾವೇಶ ಆಯೋಜಿಸಲಾಗಿದೆ ಎಂದರು. ಆಸಕ್ತರು ಸಮಾವೇಶದಲ್ಲಿ ಭಾಗವಹಿಸುವಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೂಡಿಕೆದಾರರಿಗೆ ಆಹ್ವಾನಿಸಿದ್ದಾರೆ. ಮುಂಬೈ, ಬೆಂಗಳೂರಿನ ಹೂಡಿಕೆದಾರರ ಸಮಾವೇಶಗಳು ಭಾರತದಲ್ಲಿನ ಗಣಿಗಾರಿಕೆ ಕ್ಷೇತ್ರದ ಸಾಮರ್ಥ್ಯವನ್ನು ಅರಿತುಕೊಳ್ಳಲು ಸಹಾಯ ಮಾಡುತ್ತದೆ ಎಂದು ಇದೇ ವೇಳೆ ಪ್ರಲ್ಹಾದ್ ಜೋಶಿ ಅಭಿಪ್ರಾಯ ವ್ಯಕ್ತಪಡಿಸಿದರು.
ವಾಣಿಜ್ಯ ಗಣಿ ಹರಾಜು ಮತ್ತು ದೇಶದ ಗಣಿಗಾರಿಕೆ ವಲಯದಲ್ಲಿ ವಿವಿಧ ಅವಕಾಶಗಳ ಕುರಿತು ಸಮಾವೇಶವನ್ನು ನಡೆಸಲಾಗುತ್ತಿದೆ. ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದು, ವಿವಿಧ ವಾಣಿಜ್ಯ ಗಣಿಗಳ ಮೆಗಾ ಹರಾಜು ಕುರಿತು ಹೂಡಿಕೆದಾರರಿಗೆ ಮಾಹಿತಿ ಒದಗಿಸುವುದಾಗಿ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಭಾರತವು ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದೆ ಮತ್ತು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ವಿದ್ಯುತ್ ಉತ್ಪಾದನೆ ಅವಶ್ಯಕವಾಗಿದೆ. ವಿದ್ಯುತ್ ಉತ್ಪಾದನೆಗೆ ಬೇಕಾದ ಕಲ್ಲಿದ್ದಲು ಉತ್ಪಾದನೆ ಹೆಚ್ವಳಕ್ಕೆ ವಿಶೇಷ ಒತ್ತು ನೀಡಲಾಗುತ್ತಿದೆ. ಮುಂಬೈ ನಲ್ಲಿ ನಡೆದ ಸಮಾವೇಶದಲ್ಲಿ ಮಹಾರಾಷ್ಟ್ರಕ್ಕೆ 13 ಕಲ್ಲಿದ್ದಲು ಬ್ಲಾಕ್ಸ್ ಗಳನ್ನ ನೀಡಲಾಗಿದೆ. ಇದರಲ್ಲಿ 5 ಗಣಿ ಬ್ಲಾಕ್ಸ್ ಗಳು ಸಂಪೂರ್ಣವಾಗಿ ಅನ್ವೇಷಿಸಲಾಗಿದೆ ಎಂದು ಪ್ರಲ್ಹಾದ ಜೋಶಿ ಹೇಳಿದ್ದಾರೆ.
Published On - 7:06 pm, Thu, 1 December 22