ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಪ್ರಕರಣ; ಮಧ್ಯ ಪ್ರವೇಶಿಸಲು ಪ್ರಧಾನಿ ಮೋದಿಗೆ ಸಿಎಂ ಉದ್ಧವ್ ಠಾಕ್ರೆ ಒತ್ತಾಯ

ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ, ಛತ್ರಪತಿ ಶಿವಾಜಿ ಮಹಾರಾಜರನ್ನು ಮಹಾರಾಷ್ಟ್ರ ಮಾತ್ರವಲ್ಲದೆ ದೇಶಾದ್ಯಂತ ಪೂಜಿಸಲಾಗುತ್ತಿದ್ದು, ಅವರಿಗೆ ಮಾಡಿದ ಅವಮಾನವನ್ನು ಸಹಿಸುವುದಿಲ್ಲ. ಈ ಅನಗತ್ಯ ಘಟನೆಯ ಸಂಪೂರ್ಣ ತನಿಖೆ ಅಗತ್ಯವಿದೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಪ್ರಕರಣ; ಮಧ್ಯ ಪ್ರವೇಶಿಸಲು ಪ್ರಧಾನಿ ಮೋದಿಗೆ ಸಿಎಂ ಉದ್ಧವ್ ಠಾಕ್ರೆ ಒತ್ತಾಯ
ಉದ್ಧವ್ ಠಾಕ್ರೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 19, 2021 | 12:15 PM

ಮುಂಬೈ: ಬೆಂಗಳೂರಿನಲ್ಲಿ ಛತ್ರಪತಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಆರೋಪದ ನಂತರ ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಇದನ್ನು ವಿರೋಧಿಸಿ ಬೆಳಗಾವಿ, ಮುಂಬೈ, ಕೊಲ್ಲಾಪುರ, ಸಾಂಗ್ಲಿಯಲ್ಲಿ ಪ್ರತಿಭಟನೆಗಳು ನಡೆದಿದ್ದು, ಮಹಾರಾಷ್ಟ್ರದ ಎಲ್ಲ ಪಕ್ಷಗಳ ಮುಖಂಡರು ಕೃತ್ಯವನ್ನು ಖಂಡಿಸಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿಯವರ ಮಧ್ಯಪ್ರವೇಶಕ್ಕೆ ಒತ್ತಾಯಿಸಿದ್ದಾರೆ. ಹಾಗೇ, ಘಟನೆಗೆ ಕಾರಣರಾದ ಜನರ ವಿರುದ್ಧ ಮತ್ತು ಕರ್ನಾಟಕದಲ್ಲಿ ಮರಾಠಿ ಮಾತನಾಡುವ ಜನರ ಮೇಲಿನ ದೌರ್ಜನ್ಯದ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ, ಛತ್ರಪತಿ ಶಿವಾಜಿ ಮಹಾರಾಜರನ್ನು ಮಹಾರಾಷ್ಟ್ರ ಮಾತ್ರವಲ್ಲದೆ ದೇಶಾದ್ಯಂತ ಪೂಜಿಸಲಾಗುತ್ತಿದ್ದು, ಅವರಿಗೆ ಮಾಡಿದ ಅವಮಾನವನ್ನು ಸಹಿಸುವುದಿಲ್ಲ. ಈ ಅನಗತ್ಯ ಘಟನೆಯ ಸಂಪೂರ್ಣ ತನಿಖೆ ಅಗತ್ಯವಿದೆ. ಬೆಳಗಾವಿಯ ಗಡಿ ಭಾಗದ ಮರಾಠಿ ಭಾಷಿಕ ಜನರು ವರ್ಷಗಳಿಂದ ದೌರ್ಜನ್ಯ ಎದುರಿಸುತ್ತಿದ್ದಾರೆ. ಇದೀಗ ಶಿವಾಜಿ ಪ್ರತಿಮೆಗೆ ಧ್ವಂಸ ಮಾಡಿರುವ ಘಟನೆ ನಡೆದಿದೆ, ಆದರೂ ಕರ್ನಾಟಕ ರಾಜ್ಯ ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ಉದ್ಧವ್ ಠಾಕ್ರೆ ಕಿಡಿ ಕಾರಿದ್ದಾರೆ.

ಈ ವಾರದ ಆರಂಭದಲ್ಲಿ ಕಾಶಿಯಲ್ಲಿ ಮಾಡಿದ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ಛತ್ರಪತಿ ಶಿವಾಜಿ ಮಹಾರಾಜರ ಶಕ್ತಿ ಮತ್ತು ಪರಾಕ್ರಮವನ್ನು ಹೊಗಳಿದ್ದರು. ಇದಾದ ಕೆಲವೇ ದಿನಗಳಲ್ಲಿ ಈ ಅವಹೇಳನಕಾರಿ ಘಟನೆ ನಡೆದಿದೆ. ಘಟನೆಯನ್ನು ಖಂಡಿಸಿದ ಮರಾಠಿ ಮಾತನಾಡುವ ಜನರ ಧ್ವನಿಯನ್ನು ಸ್ಥಳೀಯ ಕರ್ನಾಟಕ ಸರ್ಕಾರ ಹತ್ತಿಕ್ಕುತ್ತಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೆಲವರು ಶಿವಾಜಿ ಮಹಾರಾಜರ ಹೆಸರನ್ನು ರಾಜಕೀಯಕ್ಕೆ ಬಳಸುತ್ತಾರೆ. ಆದರೆ ಅವರಿಗೆ ಅಗೌರವ ತೋರಿದಾಗ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಮರಾಠಿ ಅಭಿಮಾನವನ್ನು ಅವಮಾನಿಸಿದ್ದಕ್ಕಾಗಿ ಅವರು ಬೆಲೆ ತೆರಬೇಕಾಗುತ್ತದೆ ಎಂದು ಠಾಕ್ರೆ ಹೇಳಿದ್ದಾರೆ.

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್, ಕೇಂದ್ರ ಮತ್ತು ಕರ್ನಾಟಕ ಸರ್ಕಾರವು ಈ ಸಂಪೂರ್ಣ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಹಾಗೇ, ಇಂತಹ ಕೃತ್ಯಗಳು ಪುನರಾವರ್ತನೆಯಾಗದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಮಹಾರಾಷ್ಟ್ರದ ಜನರ ಭಾವನೆಗಳಿಗೆ ತೀವ್ರ ಧಕ್ಕೆಯಾಗಿದೆ. ಅದರ ಹಿಂದಿರುವ ಜನರನ್ನು ಮತ್ತು ಅವರನ್ನು ರಕ್ಷಿಸುತ್ತಿರುವವರನ್ನು ಅವರು ಎಂದಿಗೂ ಕ್ಷಮಿಸುವುದಿಲ್ಲ ಎಂದಿದ್ದಾರೆ.

ಇನ್ನು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದವರ ವಿರುದ್ಧ ಕಠಿಣಕ್ರಮ ಕೈಗೊಳ್ಳುತ್ತೇವೆ. ಬೆಳಗಾವಿಯಲ್ಲಿ ಈಗಾಗಲೇ ಕೆಲ ಆರೋಪಿಗಳ ಬಂಧನ ಮಾಡಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರತಿಮೆಗಳನ್ನು ಮಾಡಿರುವುದು ಗೌರವ ಸೂಚಿಸುವುದಕ್ಕಾಗಿ. ಅಂಥ ಮಹಾನ್ ನಾಯಕರನ್ನು ಅಪಮಾನಿಸುವುದು ಸರಿಯಲ್ಲ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಸದಾಶಿವನಗರದ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿಯೂ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸದಾಶಿವನಗರ ಠಾಣೆ ಪೊಲೀಸರಿಂದ ಆರೋಪಿಗಳ ಬಂಧನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸದಾಶಿವನಗರದಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ 7 ಆರೋಪಿಗಳು ಅರೆಸ್ಟ್

ಬೆಂಗಳೂರು: ಶಿವಾಜಿ ಪ್ರತಿಮೆಗೆ ಮಸಿ ಬಳಿದ ಪ್ರಕರಣದಲ್ಲಿ ಮೂವರು ಆರೋಪಿಗಳ ಬಂಧನ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ