AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nana Patole: ಚುನಾವಣೆಯಲ್ಲಿ ಸೋಲು: ಮಹಾರಾಷ್ಟ್ರ ಕಾಂಗ್ರೆಸ್​ ಅಧ್ಯಕ್ಷ ನಾನಾ ಪಟೋಲೆ ರಾಜೀನಾಮೆ

Maharashtra Congress chief Nana Patole resigns: ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾನಾ ಪಟೋಲೆ ರಾಜೀನಾಮೆ ನೀಡಿದರು. ಚುನಾವಣೆಯ ಹೀನಾಯ ಸೋಲಿನ ಹೊಣೆ ಹೊತ್ತು ಪಟೋಲೆ ರಾಜೀನಾಮೆ ನೀಡಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಎರಡಂಕಿ ತಲುಪಿದೆ. ಕೇವಲ 10 ಸ್ಥಾನಗಳಿಗೆ ತೃಪ್ತಿಪಡಬೇಕಾಯಿತು, ಆದರೆ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಸಾಧನೆ ಉತ್ತಮವಾಗಿತ್ತು.

Nana Patole: ಚುನಾವಣೆಯಲ್ಲಿ ಸೋಲು: ಮಹಾರಾಷ್ಟ್ರ ಕಾಂಗ್ರೆಸ್​ ಅಧ್ಯಕ್ಷ ನಾನಾ ಪಟೋಲೆ ರಾಜೀನಾಮೆ
ನಾನಾ ಪಟೋಲೆ Image Credit source: Aaj Tak
ನಯನಾ ರಾಜೀವ್
|

Updated on:Nov 25, 2024 | 11:47 AM

Share

ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾನಾ ಪಟೋಲೆ ರಾಜೀನಾಮೆ ನೀಡಿದ್ದಾರೆ.. ಚುನಾವಣೆಯ ಹೀನಾಯ ಸೋಲಿನ ಹೊಣೆ ಹೊತ್ತು ಪಟೋಲೆ ರಾಜೀನಾಮೆ ನೀಡಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಎರಡಂಕಿ ತಲುಪಿದೆ. ಕೇವಲ 10 ಸ್ಥಾನಗಳಿಗೆ ತೃಪ್ತಿಪಡಬೇಕಾಯಿತು, ಆದರೆ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಸಾಧನೆ ಉತ್ತಮವಾಗಿತ್ತು.

ಭಂಡಾರಾ ಜಿಲ್ಲೆಯ ಸಾಕೋಲಿ ಕ್ಷೇತ್ರದಿಂದ ನಾನಾ ಪಟೋಲೆ ಅವರೇ ಚುನಾವಣಾ ಕ್ಷೇತ್ರದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಪಟೋಲೆ ಅವರು ಸಾಕೋಲಿ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿದ್ದಾರೆ. ಆದರೂ, ಈ ಸ್ಥಾನದಿಂದ ಗೆಲ್ಲಲು ಅವರು ಶ್ರಮಿಸಬೇಕಿತ್ತು. ಕೇವಲ 208 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಚುನಾವಣಾ ಫಲಿತಾಂಶ ಹೀಗಿತ್ತು ಮಹಾರಾಷ್ಟ್ರದಲ್ಲಿ 2024 ರ ವಿಧಾನಸಭಾ ಚುನಾವಣೆಯಲ್ಲಿ ಪ್ರಮುಖ ಸ್ಪರ್ಧೆಯು ಎರಡು ಪ್ರಮುಖ ಮೈತ್ರಿಗಳಾದ ಮಹಾಯುತಿ ಮತ್ತು MVA ನಡುವೆ ಇತ್ತು. ಫಲಿತಾಂಶದಲ್ಲಿ, 288 ಸದಸ್ಯ ಬಲದ ವಿಧಾನಸಭೆಯಲ್ಲಿ ಮಹಾಯುತಿ, ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ (ಅಜಿತ್ ಬಣ) ಮೈತ್ರಿಕೂಟ 235 ಸ್ಥಾನಗಳನ್ನು ಪಡೆದುಕೊಂಡಿದೆ.

ಇದರಲ್ಲಿ ಬಿಜೆಪಿ ಗರಿಷ್ಠ 132 ಸ್ಥಾನಗಳನ್ನು, ಮಿತ್ರಪಕ್ಷ ಶಿವಸೇನೆ 57 ಸ್ಥಾನಗಳನ್ನು ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿ 41 ಸ್ಥಾನಗಳನ್ನು ಪಡೆದುಕೊಂಡಿದೆ. ಇದು ಬಹುಮತದ 145 ಕ್ಕಿಂತ ಹೆಚ್ಚು. ಮತ್ತೊಂದೆಡೆ, ಮಹಾವಿಕಾಸ್ ಅಘಾಡಿ 54 ಸ್ಥಾನಗಳನ್ನು ಪಡೆದಿದ್ದಾರೆ. ಇದರಲ್ಲಿ ಶಿವಸೇನೆ (ಉದ್ಧವ್) 20 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 16 ಮತ್ತು ಎನ್‌ಸಿಪಿ (ಶರದ್) 10 ಸ್ಥಾನಗಳನ್ನು ಗೆದ್ದಿದೆ.

ಮತ್ತಷ್ಟು ಓದಿ: ಮಹಾರಾಷ್ಟ್ರ: ರಾಜ್​ ಠಾಕ್ರೆಯ ಎಂಎನ್​ಎಸ್ ಪಕ್ಷದ ಮಾನ್ಯತೆ ರದ್ದಾಗುವ ಸಾಧ್ಯತೆ

ನಾನಾ ಪಟೋಲೆ ಬಗ್ಗೆ ಮಾಹಿತಿ ಮಹಾರಾಷ್ಟ್ರದ ಭಂಡಾರಾ-ಗೊಂಡಿಯಾ ಕ್ಷೇತ್ರದಿಂದ ಬಿಜೆಪಿಯ ಮಾಜಿ ಸಂಸದ ನಾನಾ ಪಟೋಲೆ 2018ರ ಜನವರಿಯಲ್ಲಿ ಕಾಂಗ್ರೆಸ್‌ ಸೇರಿದ್ದರು. ಪಟೋಲೆ ಮೂಲತಃ ಕಾಂಗ್ರೆಸ್ಸಿಗರಾಗಿದ್ದರು, ಆದರೆ ಕೆಲವು ಕಾಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಕಳೆದ ಬಾರಿ ಕಾಂಗ್ರೆಸ್‌ನ ನಾನಾ ಪಟೋಲೆ ಅವರು ಬಿಜೆಪಿಯ ಡಾ.ಪರಿಣಯ್ ಫುಕೆ ಅವರನ್ನು 6240 ಮತಗಳಿಂದ ಸೋಲಿಸಿದ್ದರು.

ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ನ ನಾನಾ ಪಟೋಲೆ ವಿರುದ್ಧ ಸಾಕೋಲಿಯಲ್ಲಿ ಒಂದು ದಿನ ಮುಂಚಿತವಾಗಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಅವಿನಾಶ ಬ್ರಹ್ಮಣಕರ್ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿಸಿತ್ತು. ಅವಿನಾಶ್ ಎನ್‌ಸಿಪಿಯ (ಶರದ್ ಪವಾರ್) ಭಂಡಾರ ಜಿಲ್ಲಾ ಪರಿಷತ್‌ನ ಗುಂಪು ನಾಯಕರಾಗಿದ್ದರು.

ಇಲ್ಲಿ ಪಟೋಲೆ ಕೇವಲ 208 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅವರು ಒಟ್ಟು 96795 ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ ಅವಿನಾಶ್ 96587 ಮತಗಳನ್ನು ಪಡೆದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:44 am, Mon, 25 November 24

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ