Mumbai Covid Cases: ಮುಂಬೈನಲ್ಲಿ ಕೊರೊನಾ ಕೇಸ್ ಹೆಚ್ಚಳ; ಜ. 31ರವರೆಗೆ ಶಾಲೆಗಳು ಬಂದ್

ಮುಂಬೈನಲ್ಲಿ ಜನವರಿ 31ರವರೆಗೆ ಮಹಾರಾಷ್ಟ್ರದಲ್ಲಿ 1ರಿಂದ 9ನೇ ತರಗತಿಯವರೆಗೆ ಶಾಲೆಗಳನ್ನು ಮುಚ್ಚಲಾಗುವುದು. 15ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳನ್ನು ಕೊರೊನಾ ಲಸಿಕೆ ಹಾಕಲು ಮಾತ್ರ ಶಾಲೆಗಳಿಗೆ ಕರೆಸಲಾಗುವುದು ಎಂದು ಬಿಎಂಸಿ ತಿಳಿಸಿದೆ.

Mumbai Covid Cases: ಮುಂಬೈನಲ್ಲಿ ಕೊರೊನಾ ಕೇಸ್ ಹೆಚ್ಚಳ; ಜ. 31ರವರೆಗೆ ಶಾಲೆಗಳು ಬಂದ್
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 03, 2022 | 7:11 PM

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಕೇಸುಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು, ಸಚಿವ ಸಂಪುಟದಲ್ಲೂ ಹಲವು ಸಚಿವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಹಾರಾಷ್ಟ್ರದಲ್ಲಿ ಕೊವಿಡ್​-19 ಪ್ರಕರಣಗಳ ಭಾರೀ ಏರಿಕೆಯ ದೃಷ್ಟಿಯಿಂದ ಮುಂಬೈನಲ್ಲಿ ಜನವರಿ 31ರವರೆಗೆ ಮಹಾರಾಷ್ಟ್ರದಲ್ಲಿ 1ರಿಂದ 9ನೇ ತರಗತಿಯವರೆಗೆ ಶಾಲೆಗಳನ್ನು ಮುಚ್ಚಲಾಗುವುದು. 10 ಮತ್ತು 12ನೇ ತರಗತಿಗಳಿಗೆ ನಿಗದಿಪಡಿಸಿದಂತೆ ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಆನ್‌ಲೈನ್ ತರಗತಿಗಳನ್ನು ನಡೆಸಲಾಗುತ್ತದೆ.

15ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳನ್ನು ಕೊರೊನಾವೈರಸ್ ಲಸಿಕೆ ಹಾಕಲು ಮಾತ್ರ ಶಾಲೆಗಳಿಗೆ ಕರೆಸಲಾಗುವುದು ಎಂದು ಬಿಎಂಸಿ ತಿಳಿಸಿದೆ. ಮುಂಬೈನಲ್ಲಿ 8,063 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದೆ. ಕೊವಿಡ್ ಸಾಂಕ್ರಾಮಿಕ ರೋಗದಿಂದಾಗಿ 20 ತಿಂಗಳುಗಳಿಗಿಂತ ಹೆಚ್ಚು ಕಾಲ ಮಹಾರಾಷ್ಟ್ರದಲ್ಲಿ ಶಾಲೆಗಳನ್ನು ಮುಚ್ಚಲಾಗಿತ್ತು. ಬಳಿಕ 1ರಿಂದ 7 ನೇ ತರಗತಿಗಳಿಗೆ ಡಿಸೆಂಬರ್ 15ರಂದು ಮುಂಬೈನಲ್ಲಿ ಶಾಲೆಯನ್ನು ಪುನಃ ತೆರೆಯಲಾಗಿತ್ತು. ಆದರೆ, ಇದೀಗ ಒಮಿಕ್ರಾನ್ ಕೇಸುಗಳು ಹೆಚ್ಚಾಗುತ್ತಿರುವುದರಿಂದ ಮತ್ತೆ ಶಾಲೆಯನ್ನು ಮುಚ್ಚಲಾಗಿದೆ.

ಮಹಾರಾಷ್ಟ್ರದಲ್ಲಿ 50 ಹೊಸ ಒಮಿಕ್ರಾನ್ ಪ್ರಕರಣಗಳು ವರದಿಯಾಗಿದ್ದು, ರಾಜ್ಯದ ಸಂಖ್ಯೆಯನ್ನು 510 ಕ್ಕೆ ತಲುಪಿದೆ. ಹೊಸ ಪ್ರಕರಣಗಳಲ್ಲಿ, 36 ಪುಣೆ ನಗರದಲ್ಲಿ, ಎಂಟು ಪಿಂಪ್ರಿ ಚಿಂಚ್‌ವಾಡ್‌ನಿಂದ ಮತ್ತು ಪುಣೆ ಗ್ರಾಮಾಂತರ ಮತ್ತು ಸಾಂಗ್ಲಿ ಜಿಲ್ಲೆಗಳಿಂದ ತಲಾ ಎರಡು ಪ್ರಕರಣಗಳು ವರದಿಯಾಗಿವೆ. ಇಲ್ಲಿಯವರೆಗೆ, ರಾಜ್ಯದಲ್ಲಿ 66,99,868 ಕೋವಿಡ್ -19 ಪ್ರಕರಣಗಳು ವರದಿಯಾಗಿದ್ದು, ಭಾನುವಾರ 11,877 ದಾಖಲಾಗಿವೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಪ್ರಸ್ತುತ ಪ್ರವೃತ್ತಿಯನ್ನು ಆಧರಿಸಿ, ಜನವರಿ ಮೂರನೇ ವಾರದ ವೇಳೆಗೆ ನಾವು ಸುಮಾರು ಎರಡು ಲಕ್ಷ ಸಕ್ರಿಯ ಪ್ರಕರಣಗಳನ್ನು ತಲುಪುವ ನಿರೀಕ್ಷೆಯಿದೆ.

ಇದನ್ನೂ ಓದಿ: Omicron: ಒಮಿಕ್ರಾನ್ ಮೊದಲು ಪತ್ತೆಯಾದ ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ಹೊಸ ಕೇಸುಗಳ ಸಂಖ್ಯೆ ಕುಸಿತ

Covid Vaccine: ಕರ್ನಾಟಕದಲ್ಲಿರುವ 31 ಲಕ್ಷ ಮಕ್ಕಳಿಗೆ ಕೊವಿಡ್ ಲಸಿಕೆ ಪಡೆಯಲು ಅರ್ಹತೆ

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ