Ajit Pawar Death: ಮಹಾ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನಕ್ಕೆ ಸಂತಾಪ ಸೂಚಿಸಿದ ರಾಜಕೀಯ ಗಣ್ಯರು
Condolences on Maha DyCM Ajit Pawar Death: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅನಿರೀಕ್ಷಿತ ನಿಧನಕ್ಕೆ ದೇಶಾದ್ಯಂತ ರಾಜಕೀಯ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಇಂದು ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಅವರು ಮೃತಪಟ್ಟಿದ್ದು, ಪ್ರಧಾನಿ ಮೋದಿ, ಶರದ್ ಪವಾರ್ ಸೇರಿದಂತೆ ಹಲವು ನಾಯಕರು ಕಂಬನಿ ಮಿಡಿದಿದ್ದಾರೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ಪ್ರಮುಖ ನಾಯಕರು ದಕ್ಷ ಆಡಳಿತಗಾರ ಅಜಿತ್ ಪವಾರ್ ಅವರನ್ನು ಕಳೆದುಕೊಂಡಿರುವುದು ದೇಶಕ್ಕೆ ತುಂಬಲಾರದ ನಷ್ಟ ಎಂದು ಶೋಕ ವ್ಯಕ್ತಪಡಿಸಿದ್ದಾರೆ.

ಬಾರಾಮತಿ, ಜ.28: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅನಿರೀಕ್ಷಿತ ನಿಧನಕ್ಕೆ ದೇಶದಾದ್ಯಂತ ರಾಜಕೀಯ ಗಣ್ಯರು ತೀವ್ರ ಸಂತಾಪ ಸೂಚಿಸುತ್ತಿದ್ದಾರೆ. ಇಂದು (ಜನವರಿ 28) ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಪಕ್ಷಾತೀತವಾಗಿ ನಾಯಕರು ಕಂಬನಿ ಮಿಡಿದಿದ್ದಾರೆ. ಪ್ರಧಾನಿ ಮೋದಿ ಅವರು ಅಜಿತ್ ಪವಾರ್ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದು, “ಅಜಿತ್ ಪವಾರ್ ಅವರು ಮಹಾರಾಷ್ಟ್ರದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ ಶ್ರೇಷ್ಠ ನಾಯಕ. ಅವರ ನಿಧನವು ನನಗೆ ವೈಯಕ್ತಿಕವಾಗಿ ಮತ್ತು ದೇಶದ ರಾಜಕೀಯಕ್ಕೆ ತುಂಬಲಾರದ ನಷ್ಟ ಎಂದು ಸಂತಾಪ ಸೂಚಿಸಿದ್ದಾರೆ. ಅಜಿತ್ ಪವಾರ್ ಅವರ ಚಿಕ್ಕಪ್ಪ ಹಾಗೂ ಎನ್‌ಸಿಪಿ (NCP) ಸ್ಥಾಪಕ ಶರದ್ ಪವಾರ್ ಅವರು ಈ ಸುದ್ದಿಯಿಂದ ದಿಗ್ಭ್ರಮೆಗೊಂಡಿದ್ದಾರೆ. “ಈ ದುರಂತವನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಜಿತ್ ಯಾವಾಗಲೂ ಉತ್ಸಾಹಿ ಮತ್ತು ಕಷ್ಟಪಟ್ಟು ಕೆಲಸ ಮಾಡುವ ವ್ಯಕ್ತಿಯಾಗಿದ್ದರು. ನನ್ನ ಮಗನನ್ನೇ ಕಳೆದುಕೊಂಡಷ್ಟು ನೋವಾಗುತ್ತಿದೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರವು ಇಂದು ಒಬ್ಬ ದಕ್ಷ ಆಡಳಿತಗಾರನನ್ನು ಕಳೆದುಕೊಂಡಿದೆ. ನಮ್ಮ ಸರ್ಕಾರದ ಪ್ರಬಲ ಶಕ್ತಿಯಾಗಿದ್ದ ‘ದಾದಾ’ (ಅಜಿತ್ ಪವಾರ್) ಅವರ ಅಗಲಿಕೆ ವೈಯಕ್ತಿಕವಾಗಿ ನನಗೆ ದೊಡ್ಡ ಆಘಾತ ತಂದಿದೆ ಎಂದು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ಅಜಿತ್ ಪವಾರ್ ಅವರ ಕೆಲಸದ ವೈಖರಿ ಮತ್ತು ನಿರ್ಧಾರ ತೆಗೆದುಕೊಳ್ಳುವ ವೇಗ ಎಲ್ಲರಿಗೂ ಮಾದರಿಯಾಗಿತ್ತು. ನಾವು ಒಬ್ಬ ಉತ್ತಮ ಸ್ನೇಹಿತ ಮತ್ತು ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಎಂದು ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಕಾಲಿಕ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಮಹಾರಾಷ್ಟ್ರ ರಾಜಕೀಯದ ಚಾಣಕ್ಯ ಶರದ್ ಪವಾರ್ಗೆ ಸೆಡ್ಡು ಹೊಡೆದು ಗೆದ್ದಿದ್ದ ಅಜಿತ್ ಪವಾರ್ ಇನ್ನು ನೆನಪು ಮಾತ್ರ
ಪ್ರಧಾನಿ ನರೇಂದ್ರ ಮೋದಿ ಸಂತಾಪ:
Shri Ajit Pawar Ji was a leader of the people, having a strong grassroots level connect. He was widely respected as a hardworking personality at the forefront of serving the people of Maharashtra. His understanding of administrative matters and passion for empowering the poor and… pic.twitter.com/mdgwwGzw4R
— Narendra Modi (@narendramodi) January 28, 2026
ಕರ್ನಾಟಕದ ನಾಯಕರ ಸಂತಾಪ:
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅನಿರೀಕ್ಷಿತ ನಿಧನಕ್ಕೆ ಕರ್ನಾಟಕದ ರಾಜಕೀಯ ನಾಯಕರು ತೀವ್ರ ದಿಗ್ಭ್ರಮೆ ಮತ್ತು ಶೋಕ ವ್ಯಕ್ತಪಡಿಸಿದ್ದಾರೆ. ಹಿರಿಯ ನಾಯಕರಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರು ಈ ಕುರಿತು ತಮ್ಮ ಸಂತಾಪದ ಸಂದೇಶಗಳನ್ನು ಹಂಚಿಕೊಂಡಿದ್ದಾರೆ.
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರು ವಿಮಾನ ಅಪಘಾತದಲ್ಲಿ ಅಕಾಲಿಕ ನಿಧನರಾದ ಸುದ್ದಿ ಕೇಳಿ ಆಘಾತವಾಗಿದೆ. ಅವರ ನಿಧನವು ಮಹಾರಾಷ್ಟ್ರದ ರಾಜಕೀಯ ಮತ್ತು ಸಾರ್ವಜನಿಕ ಜೀವನಕ್ಕೆ ದೊಡ್ಡ ನಷ್ಟ. ಅವರು ಅಪಾರ ಅನುಭವ ಮತ್ತು ದೃಢ ಸಂಕಲ್ಪ ಹೊಂದಿದ್ದ ನಾಯಕರಾಗಿದ್ದರು. ಅವರ ಕುಟುಂಬಕ್ಕೆ ಮತ್ತು ಬೆಂಬಲಿಗರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಅಜಿತ್ ಪವಾರ್ ಅವರ ಸಾವಿನ ಸುದ್ದಿ ಅತ್ಯಂತ ಆಘಾತಕಾರಿ ಮತ್ತು ಬೇಸರ ತಂದಿದೆ. ಅವರು ದೇಶದ ರಾಜಕೀಯದಲ್ಲಿ ಅತ್ಯಂತ ಕ್ರಿಯಾಶೀಲ ನಾಯಕರಾಗಿದ್ದರು ಎಂದು ಹೇಳಿದ್ದಾರೆ.
ಹೆಚ್ ಡಿ ಕುಮಾರಸ್ವಾಮಿ:
ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರು ಅಕಾಲಿಕ ಮರಣ ಹೊಂದಿದರು ಎಂಬ ವಾರ್ತೆ ತಿಳಿದು ತೀವ್ರ ಆಘಾತ ಉಂಟಾಯಿತು.
ಮಹಾರಾಷ್ಟ್ರದ ಪ್ರಭಾವೀ ನಾಯಕರಾಗಿದ್ದ ಅವರು, ಅಪಾರ ಜನಪ್ರಿಯತೆ ಗಳಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ.
ಈ ಸಂದರ್ಭದಲ್ಲಿ ಅವರ ಧರ್ಮಪತ್ನಿ ಶ್ರೀಮತಿ… pic.twitter.com/8trQx37xwL
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) January 28, 2026
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಅಜಿತ್ ಪವಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ನೆರೆಯ ರಾಜ್ಯದ ಒಬ್ಬ ಹಿರಿಯ ನಾಯಕನನ್ನು ಕಳೆದುಕೊಂಡಿರುವುದು ಇಡೀ ದೇಶಕ್ಕೆ ನಷ್ಟ ಎಂದು ಹೇಳಿದ್ದಾರೆ.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:24 am, Wed, 28 January 26
