ಏಕನಾಥ್ ಶಿಂಧೆಗೆ ಸಂಕಷ್ಟ?; ತಮ್ಮದೇ ಸರ್ಕಾರದ ಬಗ್ಗೆ ಅಸಮಾಧಾನ ಹೊರಹಾಕಿದ ಡಿಸಿಎಂ

ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರದಲ್ಲಿ ಬಿರುಕು ಉಂಟಾಗಿದೆಯೇ ಎಂಬ ಅನುಮಾನ ಉಂಟಾಗಿದೆ. ತಮ್ಮದೇ ಸರ್ಕಾರದ ಕುರಿತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ಮಹಾರಾಷ್ಟ್ರದ ಸಿಎಂ ಏಕನಾಥ ಶಿಂಧೆ ನೇತೃತ್ವದ ತಮ್ಮದೇ ಸರ್ಕಾರದ ಬಗ್ಗೆ ಡಿಸಿಎಂ ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರದ ವಿರುದ್ಧ ಡಿಸಿಎಂ ಅಜಿತ್ ಪವಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಏಕನಾಥ್ ಶಿಂಧೆಗೆ ಸಂಕಷ್ಟ?; ತಮ್ಮದೇ ಸರ್ಕಾರದ ಬಗ್ಗೆ ಅಸಮಾಧಾನ ಹೊರಹಾಕಿದ ಡಿಸಿಎಂ
ಅಜಿತ್ ಪವಾರ್‌
Edited By:

Updated on: Sep 27, 2024 | 6:42 PM

ಮುಂಬೈ: ಮಹಾರಾಷ್ಟ್ರ ಸರ್ಕಾರದಲ್ಲಿ ಬಿರುಕು ಮೂಡಿದೆಯೇ ಎಂಬ ವದಂತಿ ಎಲ್ಲೆಡೆ ಹರಿದಾಡುತ್ತಿದೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ತಮ್ಮದೇ ಸರ್ಕಾರದ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಆಪ್ತರ ಮುಂದೆ ಅಜಿತ್ ಪವಾರ್ ಅಸಮಾಧಾನ ಹೊರಹಾಕಿದ್ದಾರೆ. ಮಹಾರಾಷ್ಟ್ರದ ಚಂದಗಢ ಜಿಲ್ಲೆಗೆ ಭೇಟಿ ನೀಡಿದ್ದ ಡಿಸಿಎಂ ಅಜಿತ್​ ಪವಾರ್​​ ಮುಂಬೈನಿಂದ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಚಂದಗಢಕ್ಕೆ ತೆರಳಿದ್ದರು.

ಚಂದಗಢದಲ್ಲಿ ಕಾರ್ಯಕ್ರಮ ಮುಗಿಸಿ ಬೆಳಗಾವಿ ಸಾಂಬ್ರಾಗೆ ಆಗಮಿಸಿದ್ದ ಡಿಸಿಎಂ ಅಜಿತ್ ಪವಾರ್ ಅವರನ್ನು ಸಾಂಬ್ರಾದಲ್ಲಿ ಚಂದಗಢ ತಾಲೂಕು ಮುಖಂಡರು ಭೇಟಿಯಾಗಿದ್ದರು. ಚಂದಗಢ ತಾಲೂಕು ಅಭಿವೃದ್ಧಿ ಮಾಡುವಂತೆ ಮನವಿ ನೀಡಿದ ಮುಖಂಡರ ಬಳಿ ಅಜಿತ್ ಪವಾರ್ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಸಮ್ಮಿಶ್ರ ಸರ್ಕಾರ ಇದ್ದರೆ ಇದೇ ಸಮಸ್ಯೆ ಎಂದು ಅಜಿತ್ ಪವಾರ್ ಹೇಳಿದ್ದಾರೆ. ಈ ಮೂಲಕ ಪರೋಕ್ಷವಾಗಿ ಸಮ್ಮಿಶ್ರ ಸರ್ಕಾರ ಇದ್ದರೆ ಅಭಿವೃದ್ಧಿ ಆಗುವುದಿಲ್ಲ ಎಂದು ಅಜಿತ್ ಪವಾರ್‌ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ