ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿ ಮಹಾರಾಷ್ಟ್ರಕ್ಕೆ ಸೇರಿಸಿ: ಪ್ರಧಾನಿ ಮೋದಿಗೆ ಪತ್ರ ಬರೆದ ಮಹಾರಾಷ್ಟ್ರ ಡಿಸಿಎಂ

ಬೆಳಗಾವಿ ಮಹಾನಗರ ಪಾಲಿಕೆಗೆ ಚುನಾವಣೆ ಘೋಷಣೆ ಆಗ್ತಿದ್ದಂತೆ ಮಹಾರಾಷ್ಟ್ರ ನಾಯಕರಿಂದ ಕ್ಯಾತೆ ಕೇಳಿಬಂದಿದೆ. ಮತ್ತೆ ಗಡಿ ವಿವಾದ ಕೆದಕಿದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್‌ ಪ್ರಧಾನಿಗೆ ಪತ್ರ ಬರೆದಿದ್ದಾರೆ. ಗಡಿ ವಿವಾದ ಕುರಿತು ಎಂಇಎಸ್ ಪುಂಡರಿಂದ ಪ್ರಧಾನಿಗೆ ಪತ್ರ ಅಭಿಯಾನ ಬೆನ್ನಲ್ಲೇ ಅಜಿತ್ ಪವಾರ್ ಕ್ಯಾತೆ ಶುರುವಿಟ್ಟುಕೊಂಡಿದ್ದಾರೆ. ಅಜಿತ್ ಪವಾರ ಆಗಸ್ಟ್ 9ರಂದು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

Follow us
TV9 Web
| Updated By: ಸಾಧು ಶ್ರೀನಾಥ್​

Updated on:Aug 12, 2021 | 11:12 AM

ಬೆಳಗಾವಿ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್‌ ಮತ್ತೆ ಗಡಿ ಕ್ಯಾತೆ ತೆಗೆದಿದ್ದಾರೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವ ಡಿಸಿಎಂ ಅಜಿತ್ ಪವಾರ್ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಇತ್ಯರ್ಥ ಮಾಡಲು ಮಧ್ಯಪ್ರವೇಶಿಸಬೇಕು ಎಂದು ಪ್ರಧಾನಿಗೆ ಮೊರೆಯಿಟ್ಟಿದ್ದಾರೆ. ಮಹಾರಾಷ್ಟ್ರ ರಚನೆಯಾಗಿ 65ಕ್ಕೂ ಹೆಚ್ಚು ವರ್ಷ ಕಳೆದಿದೆ. ಕರ್ನಾಟಕದ ಮರಾಠಿ ಭಾಷಿಕರ ಪ್ರದೇಶಗಳು ಇನ್ನೂ ಸೇರಿಲ್ಲ. ಸಂಯುಕ್ತ ಮಹಾರಾಷ್ಟ್ರ ರಚನೆ ಕನಸು ಇನ್ನೂ ಈಡೇರಿಲ್ಲ. ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿ ಸೇರಿ ಮರಾಠಿ ಭಾಷಿಕರ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಅವರು ಪತ್ರ ಮುಖೇನ ಆಗ್ರಹಿಸಿದ್ದಾರೆ.

ಬೆಳಗಾವಿ ಮಹಾನಗರ ಪಾಲಿಕೆಗೆ ಚುನಾವಣೆ ಘೋಷಣೆ ಆಗ್ತಿದ್ದಂತೆ ಮಹಾರಾಷ್ಟ್ರ ನಾಯಕರಿಂದ ಕ್ಯಾತೆ ಕೇಳಿಬಂದಿದೆ. ಮತ್ತೆ ಗಡಿ ವಿವಾದ ಕೆದಕಿದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್‌ ಪ್ರಧಾನಿಗೆ ಪತ್ರ ಬರೆದಿದ್ದಾರೆ. ಗಡಿ ವಿವಾದ ಕುರಿತು ಎಂಇಎಸ್ ಪುಂಡರಿಂದ ಪ್ರಧಾನಿಗೆ ಪತ್ರ ಅಭಿಯಾನ ಬೆನ್ನಲ್ಲೇ ಅಜಿತ್ ಪವಾರ್ ಕ್ಯಾತೆ ಶುರುವಿಟ್ಟುಕೊಂಡಿದ್ದಾರೆ. ಅಜಿತ್ ಪವಾರ ಆಗಸ್ಟ್ 9ರಂದು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

ಸಂಯುಕ್ತ ಮಹಾರಾಷ್ಟ್ರ ರಚನೆ ಆಗುವವರೆಗೆ ನಾವು ವಿರಮಿಸಲ್ಲ. ಕರ್ನಾಟಕದಲ್ಲಿರುವ ಮರಾಠಿ ಭಾಷಿಕರಿಗೆ ನ್ಯಾಯ ಒದಗಿಸಿ. ಸುಪ್ರೀಂ ಕೋರ್ಟ್‌ನಲ್ಲೂ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ. ತಾವೂ ಸಹ ಮಧ್ಯ ಪ್ರವೇಶಿಸಬೇಕೆಂದು ಪ್ರಧಾನ ಮಂತ್ರಿ ನರೇಂದರ ಮೋದಿಗೆ ಡಿಸಿಎಂ ಅಜಿತ್ ಪವಾರ್ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

ಸೆಪ್ಟಂಬರ್ 3ರಂದು ಮತದಾನ; ಸೆ. 6ಕ್ಕೆ ಚುನಾವಣೆ ಫಲಿತಾಂಶ ಪ್ರಕಟ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ದಿನಾಂಕ ನಿಗದಿಯಾಗದ್ದು, ಕುಂದಾನಗರಿ ಬೆಳಗಾವಿಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಆಗಸ್ಟ್ 16ರಿಂದಲೇ ಚುನಾವಣೆ ಪ್ರಕ್ರಿಯೆ ಆರಂಭಗೊಂಡಿದೆ. ಆಗಸ್ಟ್ 23ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಸೆಪ್ಟಂಬರ್ 3ರಂದು ನಡೆಯಲಿರುವ ಮತದಾನ ಪ್ರಕ್ರಿಯೆ ನಡೆಯಲಿದೆ. ಸೆಪ್ಟೆಂಬರ್ 6 ರಂದು ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.

ಬೆಳಗಾವಿ ಮಹಾನಗರ ಪಾಲಿಕೆ ಅವಧಿ ಮುಗಿದು 2 ವರ್ಷ ಮೂರು ತಿಂಗಳು ಕಳೆದಿದೆ. ವಾರ್ಡ್ ಮರು ವಿಂಗಡನೆ, ಮೀಸಲಾತಿ ಬಗ್ಗೆ ಕೇಸ್ ಇತ್ತು. ಹಾಗಾಗಿ 2 ವರ್ಷ 3 ತಿಂಗಳಿಂದ ಜನಪ್ರತಿನಿಧಿಗಳಿಲ್ಲದೇ ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳಿಂದ ಆಡಳಿತ ನಡೆಯುತ್ತಿತ್ತು. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಒಟ್ಟು 58 ವಾರ್ಡ್‌ ಗಳಿವೆ.

ಬೆಳಗಾವಿ-ಮಹಾರಾಷ್ಟ್ರ ಗಡಿ ವಿವಾದ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆದ ಎಂಇಎಸ್ ಪುಂಡರು

(maharashtra dcm ajit pawar writes letter to pm modi demanding intervention on border dispute with karnataka)

Published On - 10:47 am, Thu, 12 August 21

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ