ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ದಿಢೀರ್ ಆಸ್ಪತ್ರೆಗೆ ದಾಖಲು

Eknath shinde hospitalized: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ಶಿವಸೇನೆ ಶಿಂಧೆ ಬಣದ ಮುಖ್ಯಸ್ಥ ಏಕನಾಥ್ ಶಿಂಧೆ ತೀವ್ರ ಜ್ವರ ಮತ್ತು ಸುಸ್ತು ಹಿನ್ನೆಲೆಯಲ್ಲಿ ಶನಿವಾರ ಥಾಣೆಯ ಜುಪಿಟರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರು ವಿವಿಧ ಆರೋಗ್ಯ ತಪಾಸಣೆಗಳನ್ನು ನಡೆಸುತ್ತಿದ್ದಾರೆ.

ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ದಿಢೀರ್ ಆಸ್ಪತ್ರೆಗೆ ದಾಖಲು
ಏಕನಾಥ್ ಶಿಂಧೆ
Image Credit source: PTI

Updated on: Jul 04, 2026 | 11:09 AM

ಮುಖ್ಯಾಂಶಗಳು

  • ಥಾಣೆಯ ಜುಪಿಟರ್ ಆಸ್ಪತ್ರೆಗೆ ಶಿಂಧೆ ದಾಖಲು
  • ಜ್ವರ ಮತ್ತು ಮೈಕೈ ನೋವಿನಿಂದ ಬಳಲಿಕೆ
  • ಆರೋಗ್ಯ ಸ್ಥಿರ, ಶೀಘ್ರದಲ್ಲೇ ಡಿಸ್ಚಾರ್ಜ್

ಮುಂಬೈ, ಜುಲೈ 4: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಆರೋಗ್ಯದಲ್ಲಿ ಏರುಪೇರಾಗಿದ್ದು, ಶನಿವಾರ (ಜುಲೈ 4) ಥಾಣೆಯ ಜುಪಿಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರದಿಂದಲೇ ಅವರು ಲಘು ಜ್ವರ, ಮೈಕೈ ನೋವು ಮತ್ತು ತೀವ್ರ ಸುಸ್ತಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವೈದ್ಯರ ಸಲಹೆಯ ಮೇರೆಗೆ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ನಿಯಮಿತ ಆರೋಗ್ಯ ತಪಾಸಣೆ: ಆತಂಕ ಬೇಡ ಎಂದ ವೈದ್ಯರು

ಆಸ್ಪತ್ರೆಯ ಮೂಲಗಳ ಪ್ರಕಾರ, ಏಕನಾಥ್ ಶಿಂಧೆಗೆ ಸದ್ಯ ರೂಟಿನ್ ಹೆಲ್ತ್ ಚೆಕಪ್ (ನಿಯಮಿತ ಆರೋಗ್ಯ ತಪಾಸಣೆ) ಮಾಡಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ಸಾರ್ವಜನಿಕರು ಹಾಗೂ ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಜ್ವರ ಮತ್ತು ಸುಸ್ತಿಗೆ ನಿಖರ ಕಾರಣ ತಿಳಿಯಲು ವೈದ್ಯರ ತಂಡವು ವಿವಿಧ ರಕ್ತ ಪರೀಕ್ಷೆಗಳನ್ನು ನಡೆಸುತ್ತಿದ್ದು, ಆರೋಗ್ಯದ ಮೇಲೆ ನಿರಂತರ ನಿಗಾ ಇರಿಸಿದೆ. ಸದ್ಯಕ್ಕೆ ಆಸ್ಪತ್ರೆಯ ಕಡೆಯಿಂದಾಗಲಿ ಅಥವಾ ಉಪಮುಖ್ಯಮಂತ್ರಿಗಳ ಕಚೇರಿಯಿಂದಾಗಲಿ ಯಾವುದೇ ಅಧಿಕೃತ ವೈದ್ಯಕೀಯ ಬುಲೆಟಿನ್ ಬಿಡುಗಡೆಯಾಗಿಲ್ಲ.

ಶೀಘ್ರದಲ್ಲೇ ಕೆಲಸಕ್ಕೆ ವಾಪಸ್

ಮಹಾರಾಷ್ಟ್ರದಲ್ಲಿ ಸದ್ಯ ಮುಂಗಾರು ಚುರುಕಾಗಿದ್ದು, ಸಾಂಕ್ರಾಮಿಕ ಜ್ವರ ಮತ್ತು ವೈರಲ್ ಇನ್ಫೆಕ್ಷನ್ ಪ್ರಕರಣಗಳು ಹೆಚ್ಚಾಗುತ್ತಿವೆ. ಶಿಂಧೆ ಅವರಿಗೂ ಇದೇ ರೀತಿಯ ಹವಾಮಾನ ಬದಲಾವಣೆಯ ಜ್ವರ ಬಂದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಶಿವಸೇನೆಯ ಹಿರಿಯ ನಾಯಕರು ಮತ್ತು ಸರ್ಕಾರಿ ಅಧಿಕಾರಿಗಳು ಆಸ್ಪತ್ರೆಯ ವೈದ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.

ಇದನ್ನೂ ಓದಿ: ‘ಆಪರೇಷನ್ ರಾಮ ಮಂದಿರ್’; ಬಿಜೆಪಿ ವಿರುದ್ಧ ಉದ್ಧವ್ ಠಾಕ್ರೆ ಗಂಭೀರ ಆರೋಪ

ಉಪಮುಖ್ಯಮಂತ್ರಿಗಳು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ವೈದ್ಯಕೀಯ ತಪಾಸಣೆಗಳು ಪೂರ್ಣಗೊಂಡ ತಕ್ಷಣವೇ ಡಿಸ್ಚಾರ್ಜ್ ಆಗಿ ಮರಳಿ ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us