ಮಹಾರಾಷ್ಟ್ರ ಡೆಪ್ಯುಟಿ ಸ್ಪೀಕರ್ ಹಾಗೂ ಅಜಿತ್ ಪವಾರ್ ಬಣದ ಶಾಸಕ ನರಹರಿ ಜಿರ್ವಾಲ್ ಸಚಿವಾಲಯದ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದಿದ್ದಾರೆ. ಕೆಳಗ್ಗೆ ನೆಟ್ ಅಳವಡಿಸಿದ್ದ ಕಾರಣ ಅವರು ಅದರಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ, ಧಂಗಾರ್ ಸಮುದಾಯದ ಎಸ್ಟಿ (ಪರಿಶಿಷ್ಟ ಪಂಗಡ) ಮೀಸಲಾತಿ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಈ ಘಟನೆ ನಡೆದಿದೆ.
ಹಾರಿದ ಬಳಿಕ ನೆಟ್ನಲ್ಲಿ ಸಿಲುಕಿದ್ದ ಅವರನ್ನು ಹೊರಗೆ ಕರೆದುಕೊಂಡು ಹೋಗುತ್ತಿರುವ ದೃಶ್ಯ ಸೆರೆಯಾಗಿದೆ. ನರಹರಿ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಭೇಟಿಯಾಗಲು ಬಂದಿದ್ದರು, ಆದರೆ ಅವರ ಭೇಟಿ ಸಾಧ್ಯವಾಗಲಿಲ್ಲ. ಇದಾದ ಬಳಿಕ ಶುಕ್ರವಾರವೂ ಸಿಎಂ ಭೇಟಿಗೆ ತೆರಳಿದ್ದು, ಸಿಎಂ ಸಿಗಲಿಲ್ಲ.
ನರಹರಿ ಜೊತೆಗೆ ಇನ್ನೂ ಕೆಲವರು ನೆಟ್‌ಗೆ ಹಾರಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ಅವರಲ್ಲಿ ಬುಡಕಟ್ಟು ಶಾಸಕರೂ ಇದ್ದರು. ಎಲ್ಲ ಶಾಸಕರು ನೆಟ್‌ನಲ್ಲಿಯೇ ನಿಂತು ಘೋಷಣೆಗಳನ್ನು ಕೂಗಲು ಆರಂಭಿಸಿದರು. ಉಪಸಭಾಪತಿ ತಮ್ಮ ಸರ್ಕಾರದ ಮೇಲೆಯೇ ಕೋಪಗೊಂಡು ಸಿಟ್ಟಿನ ಭರದಲ್ಲಿ ಈ ಹೆಜ್ಜೆ ಇಟ್ಟಿದ್ದಾರೆ.
ಮತ್ತಷ್ಟು ಓದಿ: ದೆಹಲಿ: ಕಟ್ಟಡದ 5ನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಸಾವು
ಆದರೆ ಮಹಾರಾಷ್ಟ್ರದ ಡೆಪ್ಯೂಟಿ ಸ್ಪೀಕರ್ ಛಾವಣಿಯಿಂದ ಕೆಳಗೆ ಜಿಗಿದ ನಂತರ ಯಾವುದೇ ಗಾಯವೂ ಆಗದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಿಗಿದ ಬಳಿಕ ಕೆಳಗಿದ್ದ ಬಲೆಯಲ್ಲಿ ಸಿಲುಕಿದ್ದರಿಂದ ಬಚಾವಾಗಿದ್ದಾರೆ. ಬಳಿಕ ಪೊಲೀಸ್ ಸಿಬ್ಬಂದಿ ಅವರನ್ನು ಹೊರಗೆ ಕರೆದೊಯ್ದರು.
ಸಂಪುಟ ಸಭೆಯ ದಿನ, ಎಲ್ಲಾ ಶಾಸಕರು ಸಿಎಂ ಅವರನ್ನು ಭೇಟಿಯಾಗಬೇಕಿತ್ತು ಆದರೆ ಸಾಕಷ್ಟು ಪ್ರಯತ್ನ ಮಾಡಿದರೂ ಶಿಂಧೆ ಅವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ ಹೀಗಾಗಿ ಕಟ್ಟಡದಿಂದ ಜಿಗಿದಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ