ಮಹಾರಾಷ್ಟ್ರ ಚುನಾವಣೆ: ಬಿಜೆಪಿ 150 ರಿಂದ 160 ಸ್ಥಾನಗಳಲ್ಲಿ ಸ್ಪರ್ಧಿಸುವ ಸಾಧ್ಯತೆ
ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು 150 ರಿಂದ 160 ಸ್ಥಾನಗಳಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮಹಾರಾಷ್ಟ್ರ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.
ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು 150 ರಿಂದ 160 ಸ್ಥಾನಗಳಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮಹಾರಾಷ್ಟ್ರ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.
ಮಹಾಯುತಿ ಒಕ್ಕೂಟದಲ್ಲಿ ಬಿಜೆಪಿ ಸುಮಾರು 160 ಸ್ಥಾನಗಳನ್ನು ಪಡೆದುಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ. ಬಿಜೆಪಿ, ಎನ್‌ಸಿಪಿ (ಅಜಿತ್ ಪವಾರ್) ಮತ್ತು ಶಿವಸೇನೆ (ಏಕನಾಥ್ ಶಿಂಧೆ) ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಒಕ್ಕೂಟದ ಭಾಗಗಳಾಗಿವೆ.
ಈಗ ದೆಹಲಿಯಲ್ಲಿ ಕೇಂದ್ರ ಸಂಸದೀಯ ಮಂಡಳಿ ಸಿಇಸಿ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ಕೇಂದ್ರ ನಾಯಕತ್ವದಿಂದ ಹೆಸರುಗಳನ್ನು ಅನುಮೋದಿಸಲಾಗುವುದು. ಮಹಾರಾಷ್ಟ್ರ ಬಿಜೆಪಿ ನಾಯಕರು ಇಂದು ದೆಹಲಿಯಲ್ಲಿ ಕೇಂದ್ರ ನಾಯಕತ್ವದೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಶಿವಸೇನೆ ನಾಯಕ ಏಕನಾಥ್ ಶಿಂಧೆ ಕೂಡ ಸೀಟು ಹಂಚಿಕೆ ಕುರಿತು ಚರ್ಚಿಸಲು ದೆಹಲಿಗೆ ಹೋಗಬಹುದು ಎಂದು ಹೇಳಲಾಗುತ್ತಿದೆ. ಆಡಳಿತಾರೂಢ ಮೈತ್ರಿಕೂಟವು ಭಾರತೀಯ ಜನತಾ ಪಕ್ಷ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಶಿವಸೇನೆ ಮತ್ತು ಅಜಿತ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷವನ್ನು ಒಳಗೊಂಡಿದೆ.
ಮತ್ತಷ್ಟು ಓದಿ: ಮಹಾರಾಷ್ಟ್ರ, ಜಾರ್ಖಂಡ್ನಲ್ಲೂ ಹರಿಯಾಣದ ಫಲಿತಾಂಶ ಮರುಕಳಿಸಲಿದೆ; ಚಂದ್ರಬಾಬು ನಾಯ್ಡು ಭವಿಷ್ಯ
ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಹಾಲಿ ವಿಧಾನಸಭೆಯ ಅವಧಿ ನವೆಂಬರ್ 26ಕ್ಕೆ ಕೊನೆಗೊಳ್ಳಲಿದೆ. ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಅವರು ಮುಂದಿನ ಮೂರು ದಿನಗಳಲ್ಲಿ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಮೈತ್ರಿಕೂಟವು ಸೀಟು ಹಂಚಿಕೆಯನ್ನು ಅಂತಿಮಗೊಳಿಸಲಿದೆ ಎಂದು ಹೇಳಿದ್ದಾರೆ.
ನಾವು ರಾಜ್ಯದಲ್ಲಿ ಸ್ಥಾನಗಳನ್ನು ಮತ್ತು ನಂತರ (ಬಿಜೆಪಿ) ಕೇಂದ್ರ ಸಂಸದೀಯ ಮಂಡಳಿಯನ್ನು ಚರ್ಚಿಸುತ್ತೇವೆ. 90 ರಷ್ಟು ಸ್ಥಾನಗಳ ಬಗ್ಗೆ ಮಾತುಕತೆ ಪೂರ್ಣಗೊಂಡಿದೆ. ಉಳಿದ 10 ಶೇಕಡಾವನ್ನು ಮುಂದಿನ ಮೂರು ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಬಾವಂಕುಲೆ ಸುದ್ದಿಗಾರರಿಗೆ ತಿಳಿಸಿದರು.
ಬಿಜೆಪಿ ಸಂಸದೀಯ ಮಂಡಳಿ ಸಭೆಯ ನಂತರ ಸಿಎಂ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಸ್ಪರ್ಧಿಸುವ ಸ್ಥಾನಗಳನ್ನು ಪ್ರಕಟಿಸಲಿದ್ದಾರೆ. ಕಳೆದ ಬಾರಿಯಂತೆಯೇ ವಿದರ್ಭದಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಬವಾಂಕುಲೆ ಹೇಳಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:02 pm, Mon, 14 October 24