ಮಹಾರಾಷ್ಟ್ರ ಚುನಾವಣೆಗೆ ಬಿಜೆಪಿಯ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ; ಮೋದಿಯಿಂದ 12 ರ್ಯಾಲಿ ಸಾಧ್ಯತೆ
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿಯು 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಗ್ರಸ್ಥಾನದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಮತ್ತು ಅಶ್ವಿನಿ ವೈಷ್ಣವ್ ಸೇರಿದಂತೆ ಕೇಂದ್ರ ಸಚಿವರು ಕೂಡ ಇದ್ದಾರೆ. ಬಿಜೆಪಿಯ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಮಹಾರಾಷ್ಟ್ರದ ಪರ ಪ್ರಚಾರ ನಡೆಸಲಿದ್ದಾರೆ.
ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಒಂದು ತಿಂಗಳಿಗಿಂತ ಕಡಿಮೆ ಸಮಯ ಬಾಕಿ ಉಳಿದಿದೆ. ಈಗಾಗಲೇ ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇನ್ನೆರಡು ದಿನಗಳಲ್ಲಿ ಇನ್ನೂ ಕೆಲವು ಪಟ್ಟಿಗಳನ್ನು ನಿರೀಕ್ಷಿಸಲಾಗಿದೆ. ಈ ವಾರದ ಆರಂಭದಲ್ಲಿ ತನ್ನ 99 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ನಂತರ ಬಿಜೆಪಿ ಇಂದು ಮಹಾರಾಷ್ಟ್ರ ಚುನಾವಣೆಗೆ 40 ಆರಂಭಿಕ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಪಿಎಂ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ, ಹಲವಾರು ಕೇಂದ್ರ ಸಚಿವರು ಮತ್ತು ಬಿಜೆಪಿ ನೇತೃತ್ವದ ರಾಜ್ಯ ಮುಖ್ಯಮಂತ್ರಿಗಳು ಇದ್ದಾರೆ.
ಮಹಾರಾಷ್ಟ್ರದ ಸ್ಟಾರ್ ಪ್ರಚಾರಕರಾಗಿರುವ ಕೇಂದ್ರ ಸಚಿವರೆಂದರೆ, ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಅಶ್ವಿನಿ ವೈಷ್ಣವ್, ಭೂಪೇಂದ್ರ ಯಾದವ್, ಪಿಯೂಷ್ ಗೋಯಲ್, ಜ್ಯೋತಿರಾದಿತ್ಯ ಸಿಂಧಿಯಾ, ಮುರಳೀಧರ್ ಮೊಹೋಲ್ ಮತ್ತು ಇತರರು.
ಇದನ್ನೂ ಓದಿ: ಗಡಿಯಲ್ಲಿ ಶಾಂತಿಗೆ ಆದ್ಯತೆ ನೀಡಬೇಕು; ರಷ್ಯಾದಲ್ಲಿ ಚೀನಾ ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಹರಿಯಾಣದ ನಯಾಬ್ ಸಿಂಗ್ ಸೈನಿ, ಗೋವಾದ ಪ್ರಮೋದ್ ಸಾವತ್, ಅಸ್ಸಾಂನ ಹಿಮಂತ ಬಿಸ್ವ ಶರ್ಮಾ ಮತ್ತು ಇತರ ಬಿಜೆಪಿ ನೇತೃತ್ವದ ರಾಜ್ಯದ ಹಲವಾರು ಮುಖ್ಯಮಂತ್ರಿಗಳು ಮಹಾರಾಷ್ಟ್ರ ಚುನಾವಣೆಗಳಿಗೆ ಪ್ರಚಾರ ನಡೆಸಲಿದ್ದಾರೆ.
ಮಹಾರಾಷ್ಟ್ರದ ಸ್ಟಾರ್ ಪ್ರಚಾರಕರಲ್ಲಿ ಮೋಹನ್ ಯಾದವ್, ನಾರಾಯಣ ರಾಣೆ, ವಿಷ್ಣು ದೇವ ಸಾಯಿ, ಮಾಜಿ ಸಂಸದೆ ಮತ್ತು ಮಾಜಿ ಕೇಂದ್ರ ಸಚಿವ ಸ್ಮೃತಿ ಇರಾನಿ, ನವನೀತ್ ರಾಣಾ ಮತ್ತು ಪಂಕಜಾ ಮುಂಡೆ ಸೇರಿದಂತೆ ಇತರ ಬಿಜೆಪಿ ನಾಯಕರು ಸೇರಿದ್ದಾರೆ.
BJP releases a list of star campaigners for the Maharashtra assembly elections.
The list includes the names of PM Narendra Modi, Union Ministers JP Nadda, Amit Shah, Rajnath Singh, Nitin Gadkari, Shivraj Singh Chouhan, Assam CM Himanta Biswa Sarma, UP CM Yogi Adityanath, among… pic.twitter.com/TezHqpieey
— ANI (@ANI) October 26, 2024
40 ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮಹಾರಾಷ್ಟ್ರ ಬಿಜೆಪಿ ನಾಯಕರು ಮತ್ತು ಸಿಎಂ ದೇವೇಂದ್ರ ಫಡ್ನವಿಸ್, ರಾಜ್ಯ ಪಕ್ಷದ ಅಧ್ಯಕ್ಷ ಚಂದ್ರಶೇಖರ್ ಬವಾಂಕುಲೆ, ಮುಂಬೈ ಬಿಜೆಪಿ ಮುಖ್ಯಸ್ಥ ಆಶಿಶ್ ಶೆಲಾರ್ ಮತ್ತು ಇತರರು ಸೇರಿದಂತೆ ವಿಧಾನಸಭಾ ಚುನಾವಣಾ ಅಭ್ಯರ್ಥಿಗಳು ಸಹ ಸೇರಿದ್ದಾರೆ.
ಇದನ್ನೂ ಓದಿ: ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಮುಂದಿನ ದಿನಗಳಲ್ಲಿ ಪ್ರಧಾನಿ ಮೋದಿ ಕೂಡ ಮಹಾರಾಷ್ಟ್ರದಲ್ಲಿ ಚುನಾವಣಾ ರ್ಯಾಲಿ ನಡೆಸಲಿದ್ದಾರೆ. ಪ್ರಧಾನಿ ಮೋದಿ ಅವರು ಮಹಾರಾಷ್ಟ್ರದಲ್ಲಿ ಅಕೋಲಾ, ಧುಲೆ, ನಾಂದೇಡ್, ಮುಂಬೈ ಮತ್ತು ನವಿ ಮುಂಬೈ ಸೇರಿದಂತೆ 11 ಅಥವಾ 12 ಪ್ರಚಾರ ರ್ಯಾಲಿಗಳನ್ನು ನಡೆಸಲಿದ್ದಾರೆ.
ಮಹಾರಾಷ್ಟ್ರದ 288 ವಿಧಾನಸಭೆಗಳಿಗೆ ನವೆಂಬರ್ 20 ರಂದು ಮತದಾನ ನಡೆಯಲಿದ್ದು, ಮತದಾನ ನಡೆದ ಮೂರು ದಿನಗಳ ನಂತರ ಫಲಿತಾಂಶ ಪ್ರಕಟವಾಗಲಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ