Maharashtra Exit Poll: ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರುತ್ತಾ ಬಿಜೆಪಿ ಮೈತ್ರಿಕೂಟ?; ಎಕ್ಸಿಟ್​ ಪೋಲ್​ನಲ್ಲಿ ಮಹಾಯುತಿಗೆ ಮುನ್ನಡೆ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ 2024ರ ಎಕ್ಸಿಟ್ ಪೋಲ್ ಫಲಿತಾಂಶಗಳು ಹೊರಬಿದ್ದಿವೆ. ಇಂದು ಮತದಾನ ಪೂರ್ಣಗೊಂಡಿದ್ದು, ಅದರ ಮತಗಳ ಎಣಿಕೆ ನವೆಂಬರ್ 23ರಂದು ನಡೆಯಲಿದೆ. ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ ಮಹಾಯುತಿ ಮತ್ತು ಮಹಾವಿಕಾಸ್ ಅಘಾಡಿ ಮೈತ್ರಿಕೂಟಗಳ ನಡುವೆ ತೀವ್ರ ಪೈಪೋಟಿಯಿದ್ದರೂ ಮಹಾಯುತಿಯತ್ತ ಜನರ ಒಲವು ಹೆಚ್ಚಾಗಿದೆ. ಹೀಗಾಗಿ, ಎಲ್ಲ ಸಮೀಕ್ಷೆಗಳಲ್ಲೂ ಬಿಜೆಪಿ-ಎನ್​ಸಿಪಿ-ಶಿವಸೇನೆ ಶಿಂಧೆ ಬಣದ ಮೈತ್ರಿಕೂಟವೇ ಅಧಿಕಾರಕ್ಕೇರುವುದು ಪಕ್ಕಾ ಎಂದು ಸೂಚಿಸಲಾಗಿದೆ.

Maharashtra Exit Poll: ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರುತ್ತಾ ಬಿಜೆಪಿ ಮೈತ್ರಿಕೂಟ?; ಎಕ್ಸಿಟ್​ ಪೋಲ್​ನಲ್ಲಿ ಮಹಾಯುತಿಗೆ ಮುನ್ನಡೆ
ಮಹಾಯುತಿ
Follow us
ಸುಷ್ಮಾ ಚಕ್ರೆ
|

Updated on: Nov 20, 2024 | 7:20 PM

ನವದೆಹಲಿ: ಈಗಾಗಲೇ ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆ ಮುಗಿದಿದೆ. ಇದರ ಬೆನ್ನಲ್ಲೇ ಎಕ್ಸಿಟ್ ಪೋಲ್ (ಚುನಾವಣೋತ್ತರ ಸಮೀಕ್ಷೆ) ಫಲಿತಾಂಶಗಳು ಹೊರಬಿದ್ದಿದ್ದು, ಬಹುತೇಕ ಎಲ್ಲ ಸಮೀಕ್ಷೆಗಳಲ್ಲೂ ಮತದಾರರ ಒಲವು ಈ ಬಾರಿ ಕೂಡ ಮಹಾಯುತಿ ಪರವಾಗಿದೆ ಎಂದು ಸೂಚಿಸಿದೆ. ಹೀಗಾಗಿ, ಕಾಂಗ್ರೆಸ್​ ಮೈತ್ರಿಕೂಟವಾದ ಮಹಾವಿಕಾಸ್ ಅಘಾಡಿಯನ್ನು ಹಿಂದಿಕ್ಕಿ ಬಿಜೆಪಿ ಮೈತ್ರಿಕೂಟ ಮಹಾಯುತಿ ಮತ್ತೊಮ್ಮೆ ಅಧಿಕಾರಕ್ಕೇರುವ ಸಾಧ್ಯತೆಗಳು ಹೆಚ್ಚಾಗಿವೆ.

ಮಹಾರಾಷ್ಟ್ರ ವಿಧಾನಸಭೆಯ ಎಲ್ಲಾ 288 ಕ್ಷೇತ್ರಗಳಲ್ಲಿ ಇಂದು ಬೆಳಿಗ್ಗೆ 7 ರಿಂದ ಸಂಜೆ 6ರವರೆಗೆ ಮತದಾನ ನಡೆಯಿತು. ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ಒಟ್ಟು ಸ್ಥಾನಗಳ ಸಂಖ್ಯೆ 288 ಆಗಿದ್ದು, ರಾಜ್ಯದಲ್ಲಿ ಸರ್ಕಾರ ರಚಿಸಲು ಪಕ್ಷ ಅಥವಾ ಮೈತ್ರಿಕೂಟವು ಪಡೆಯಬೇಕಾದ ಬಹುಮತದ ಸಂಖ್ಯೆ 145 ಆಗಿದೆ.

ಬಿಜೆಪಿ 149 ಸ್ಥಾನಗಳಲ್ಲಿ, ಶಿವಸೇನೆ 81 ಸ್ಥಾನಗಳಲ್ಲಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ 59 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ವಿರೋಧ ಪಕ್ಷದ ಮೈತ್ರಿಯಲ್ಲಿ ಕಾಂಗ್ರೆಸ್ 101 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ, ಶಿವಸೇನೆ (ಯುಬಿಟಿ) 95, ಮತ್ತು ಎನ್‌ಸಿಪಿ (ಎಸ್‌ಪಿ) 86 ಸ್ಥಾನಗಳಲ್ಲಿ ಸ್ಪರ್ಧಿಸಿದೆ. ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದಲ್ಲಿ ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಸೇರಿವೆ. ಪ್ರತಿಪಕ್ಷ ಮಹಾವಿಕಾಸ್ ಅಘಾಡಿ (ಎಂವಿಎ)ಯಲ್ಲಿ ಕಾಂಗ್ರೆಸ್, ಶಿವಸೇನೆ (UBT), ಮತ್ತು NCP (ಶರದ್ ಪವಾರ್ ಬಣ) ಸೇರಿದೆ.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿಗೆ ಗಯಾನಾದಲ್ಲಿ ಭಾರತೀಯ ವಲಸಿಗರಿಂದ ಅದ್ದೂರಿ ಸ್ವಾಗತ

ಮಹಾರಾಷ್ಟ್ರ ಚುನಾವಣೆಯಲ್ಲಿ ಯಾವ ಪಕ್ಷಗಳಿಗೆ ಎಷ್ಟು ಸ್ಥಾನ ಸಿಗಲಿದೆ ಎಂಬ ಬಗ್ಗೆ ನಡೆದ ಎಕ್ಸಿಟ್ ಪೋಲ್ ಫಲಿತಾಂಶ ಇಲ್ಲಿದೆ.

ಪಿ-ಮಾರ್ಕ್ ಎಕ್ಸಿಟ್ ಪೋಲ್:

ಪಿ-ಮಾರ್ಕ್ ಸಮೀಕ್ಷೆ ಪ್ರಕಾರ ಬಿಜೆಪಿ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ.

ಬಿಜೆಪಿ: 137-157

ಕಾಂಗ್ರೆಸ್: 126-146

ಇತರರು: 2-8

ಮ್ಯಾಟ್ರಿಜ್ ಎಕ್ಸಿಟ್ ಪೋಲ್ ಸಮೀಕ್ಷೆ:

ಮ್ಯಾಟ್ರಿಜ್ ಸಮೀಕ್ಷೆ ಕೂಡ ಬಿಜೆಪಿ ನೇತೃತ್ವದ ಮಹಾಯುತಿಗೆ ಗೆಲುವು ಎಂದು ಹೇಳಿದೆ.

ಬಿಜೆಪಿ: 150-170

ಕಾಂಗ್ರೆಸ್: 110-130

ಇತರರು: 08-10

ಪೀಪಲ್ಸ್ ಪಲ್ಸ್ ಎಕ್ಸಿಟ್ ಪೋಲ್:

ಪೀಪಲ್ಸ್ ಪಲ್ಸ್ ಎಕ್ಸಿಟ್ ಪೋಲ್ ಪ್ರಕಾರ ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಮಹಾಯುತಿ ಗೆಲುವಿಗೆ ಸಜ್ಜಾಗಿದೆ.

ಮಹಾಯುತಿ: 182 (175-195)

ಮಹಾವಿಕಾಸ್ ಅಘಾಡಿ: 97 (85-112)

ಇತರೆ: 9 (7-12)

ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆ ಮಧ್ಯೆ ಸಂಚಲನ ಮೂಡಿಸಿದ ಬಿಟ್​ಕಾಯಿನ್ ಹಗರಣ, ಸುಪ್ರಿಯಾ ಸುಳೆ ವಿರುದ್ಧ ಗಂಭೀರ ಆರೋಪ

ಚಾಣಕ್ಯ ಸ್ಟ್ರಾಟಜೀಸ್ ಸಮೀಕ್ಷೆ:

ಬಿಜೆಪಿ: 152-160

ಎಂವಿಎ: 130-138

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಬುಧವಾರ ಒಂದೇ ಹಂತದಲ್ಲಿ ಮತದಾನ ಮಾಡಲಾಗಿದ್ದು, ನವೆಂಬರ್ 23 ರಂದು ಫಲಿತಾಂಶ ಹೊರಬೀಳಲಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಮಹಾಯುತಿ ಮೈತ್ರಿಕೂಟವು ಅಧಿಕಾರವನ್ನು ಉಳಿಸಿಕೊಳ್ಳುವ ಗುರಿಯನ್ನು ಹೊಂದಿದೆ. ಆದರೆ ಮಹಾ ವಿಕಾಸ್ ಅಘಾಡಿ (ಎಂವಿಎ) ಪ್ರಭಾವಶಾಲಿ ಪುನರಾಗಮನದ ನಿರೀಕ್ಷೆಯಲ್ಲಿದೆ. ಮಹಾರಾಷ್ಟ್ರದ ಎಲ್ಲಾ 288 ಸ್ಥಾನಗಳಿಗೆ ಇಂದು ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿ ಸಂಜೆ 6 ಗಂಟೆಯವರೆಗೆ ನಡೆಯಿತು. ನವೆಂಬರ್ 23ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ