Viral News: 5.93 ಕೋಟಿ ರೂ. ಮೌಲ್ಯದ ವಿದ್ಯುತ್ ಕದ್ದ ಅಪ್ಪ-ಮಗ!; ಮಹಾರಾಷ್ಟ್ರದಲ್ಲೊಂದು ವಿಚಿತ್ರ ಘಟನೆ

ಚಂದ್ರಕಾಂತ್ ಭಾಂಬ್ರೆ ಮತ್ತು ಅವರ ಪುತ್ರ ಸಚಿನ್ ವಿರುದ್ಧ ವಿದ್ಯುತ್ ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮುರ್ಬಾದ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

Viral News: 5.93 ಕೋಟಿ ರೂ. ಮೌಲ್ಯದ ವಿದ್ಯುತ್ ಕದ್ದ ಅಪ್ಪ-ಮಗ!; ಮಹಾರಾಷ್ಟ್ರದಲ್ಲೊಂದು ವಿಚಿತ್ರ ಘಟನೆ
ಬಿರುಗಾಳಿಯಿಂದ ವಿದ್ಯುತ್ ವಿತರಣೆಯಲ್ಲಿ ಸಮಸ್ಯೆಯಾಗಿತ್ತು
Follow us
TV9 Web
| Updated By: ಸುಷ್ಮಾ ಚಕ್ರೆ

Updated on:May 14, 2022 | 7:08 PM

ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮುರ್ಬಾದ್ ಪ್ರದೇಶದಲ್ಲಿ 5.93 ಕೋಟಿ ರೂ. ವಿದ್ಯುತ್ ಕಳ್ಳತನದ ಆರೋಪದ ಮೇಲೆ ತಂದೆ ಮತ್ತು ಮಗ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೇ 5 ರಂದು ಮಹಾರಾಷ್ಟ್ರ ರಾಜ್ಯ ವಿದ್ಯುತ್ ವಿತರಣಾ ಕಂಪನಿ ಲಿಮಿಟೆಡ್ (MSEDCL) ತಂಡವು ಫಲೇಗಾಂವ್‌ನಲ್ಲಿ ಕಲ್ಲು ಪುಡಿ ಮಾಡುವ ಘಟಕದ ಮೇಲೆ ದಾಳಿ ನಡೆಸಿದಾಗ ಈ ಅಕ್ರಮ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ.

“ಮೀಟರ್ ರೀಡಿಂಗ್ ಅನ್ನು ಟ್ಯಾಂಪರಿಂಗ್ ಮಾಡುವ ಗ್ಯಾಜೆಟ್ ಬಳಕೆಯಿಂದ ರಿಮೋಟ್ ಮೂಲಕ ವಿದ್ಯುತ್ ಕದಿಯಲಾಗುತ್ತಿತ್ತು. ಕಳೆದ 29 ತಿಂಗಳಲ್ಲಿ ಒಟ್ಟು 34,09,901 ಯೂನಿಟ್ 5.93 ಕೋಟಿ ರೂ. ಮೌಲ್ಯದ ವಿದ್ಯುತ್ ಕಳ್ಳತನವಾಗಿದೆ” ಎಂದು ಅವರು ಹೇಳಿದ್ದಾರೆ.

ಚಂದ್ರಕಾಂತ್ ಭಾಂಬ್ರೆ ಮತ್ತು ಅವರ ಪುತ್ರ ಸಚಿನ್ ವಿರುದ್ಧ ವಿದ್ಯುತ್ ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮುರ್ಬಾದ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳೆದ ತಿಂಗಳು ಮಹಾರಾಷ್ಟ್ರ ರಾಜ್ಯ ವಿದ್ಯುತ್ ವಿತರಣಾ ಕಂಪನಿ (MSEDCL) ವಿದ್ಯುತ್ ಕದಿಯಲು ಬಳಸಲಾದ 46,000 ಲೋಹದ ಕೊಕ್ಕೆಗಳನ್ನು ತೆಗೆದುಹಾಕಿತ್ತು. ಇದರಿಂದ ಸುಮಾರು 500 ಮೆಗಾ ವ್ಯಾಟ್ ವಿದ್ಯುತ್ ಉಳಿತಾಯವಾಗಿದೆ.

ಮಹಾರಾಷ್ಟ್ರ ಇಂಧನ ಸಚಿವ ನಿತಿನ್ ರಾವತ್ ಮಾತನಾಡಿ, ಕಳೆದ 22 ದಿನಗಳಿಂದ ಮಹಾರಾಷ್ಟ್ರದಲ್ಲಿ ಯಾವುದೇ ಲೋಡ್ ಶೆಡ್ಡಿಂಗ್ ಆಗಿಲ್ಲ. ಗ್ರಾಹಕರು ಸಕಾಲದಲ್ಲಿ ವಿದ್ಯುತ್ ಬಿಲ್ ಪಾವತಿಸಿ ವಿದ್ಯುತ್ ಪೋಲು ಮಾಡುವುದನ್ನು ತಪ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:07 pm, Sat, 14 May 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್