ಮಹಾರಾಷ್ಟ್ರ: ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಟ್ರಕ್, ನಾಲ್ವರು ಸಜೀವ ದಹನ
ಮಹಾರಾಷ್ಟ್ರದ ಪುಣೆ ನಗರದ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಟ್ರಕ್ ಹೊತ್ತಿ ಉರಿದ ಪರಿಣಾಮ ನಾಲ್ವರು ಸಜೀವ ದಹನವಾಗಿದ್ದಾರೆ. ವರದಿಗಳ ಪ್ರಕಾರ, ಪುಣೆಯ ಸ್ವಾಮಿನಾರಾಯಣ ದೇವಸ್ಥಾನದ ಬಳಿ ಈ ದುರಂತ ಸಂಭವಿಸಿದ್ದು, ಟ್ರಕ್ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಬೆಂಕಿ ಹೊತ್ತಿಕೊಂಡಿದೆ.
ಮಹಾರಾಷ್ಟ್ರದ ಪುಣೆ ನಗರದ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಟ್ರಕ್ ಹೊತ್ತಿ ಉರಿದ ಪರಿಣಾಮ ನಾಲ್ವರು ಸಜೀವ ದಹನವಾಗಿದ್ದಾರೆ.
ವರದಿಗಳ ಪ್ರಕಾರ, ಪುಣೆಯ ಸ್ವಾಮಿನಾರಾಯಣ ದೇವಸ್ಥಾನದ ಬಳಿ ಈ ದುರಂತ ಸಂಭವಿಸಿದ್ದು, ಟ್ರಕ್ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಬೆಂಕಿ ಹೊತ್ತಿಕೊಂಡಿದೆ.
ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದಾರೆ
ದುರಂತ ಸಂಭವಿಸಿದ ಕೂಡಲೇ ಅಲ್ಲಿದ್ದವರು ಸ್ಥಳೀಯ ಪೊಲೀಸ್ ಠಾಣೆ ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಜನರು ಸಂತ್ರಸ್ತರನ್ನು ರಕ್ಷಿಸಲು ಪ್ರಯತ್ನಿಸಿದರು ಆದರೆ ಬೆಂಕಿಯಿಂದಾಗಿ ಸಾಧ್ಯವಾಗಲಿಲ್ಲ. ಅಗ್ನಿಶಾಮಕ ದಳ ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ ನಂತರ ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು.
ಮೃತ ನಾಲ್ವರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ದುರಂತದ ಬಗ್ಗೆ ಅವರ ಕುಟುಂಬಗಳಿಗೆ ಮಾಹಿತಿ ನೀಡಲಾಗಿದೆ. ಎಫ್‌ಐಆರ್ ದಾಖಲಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಆದರೆ, ಬಲಿಯಾದವರ ಗುರುತು ಪುಣೆ ಪೊಲೀಸರಿಂದ ಇನ್ನೂ ಬಹಿರಂಗವಾಗಿಲ್ಲ.
ಮತ್ತಷ್ಟು ಓದಿ: ಅಮೃತಸರದ ಕಾರ್ಖಾನೆಯಲ್ಲಿ ಅಗ್ನಿ ಅವಘಡ, 4 ಮಂದಿ ಸಾವು
ಅಹ್ಮದ್‌ನಗರದಲ್ಲಿ ಪ್ಯಾಸೆಂಜರ್ ರೈಲಿನಲ್ಲಿ ಬೆಂಕಿ
ಅಶ್ತಿ-ಅಹ್ಮದ್‌ನಗರ ಡಿಇಎಂಯುನ ಕನಿಷ್ಠ ಐದು ಬೋಗಿಗಳಲ್ಲಿ ನಾರಾಯಣೋದಿಂದ ಅಹಮದ್‌ನಗರ ವಿಭಾಗದ ನಡುವೆ ಭಾರಿ ಬೆಂಕಿ ಕಾಣಿಸಿಕೊಂಡಿತು. ಮಧ್ಯಾಹ್ನ 3 ಗಂಟೆ ಸುಮಾರಿಗೆ ನಡೆದ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲದ ಕಾರಣ ಎಲ್ಲ ಪ್ರಯಾಣಿಕರನ್ನು ತಕ್ಷಣವೇ ಕೆಳಗಿಳಿಸಲಾಯಿತು. ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಪಂದಿಸಿದ್ದರಿಂದ ಒಂದು ಗಂಟೆಯೊಳಗೆ ಬೆಂಕಿ ನಂದಿಸಿದ್ದರಿಂದ ಭಾರೀ ಅನಾಹುತ ತಪ್ಪಿತು.
#WATCH | Maharashtra: Four people died after a truck was gutted in a fire on the Pune-Bangalore highway near Swaminarayan Temple in Pune city. Further details awaited. (16.10) pic.twitter.com/9iD4gokiLH
— ANI (@ANI) October 16, 2023
ಸಮೃದ್ಧಿ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ
ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಭಾನುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ 12 ಜನರು ಸಾವನ್ನಪ್ಪಿದ್ದಾರೆ.
ಅಲ್ಲದೆ, ಕಂಟೈನರ್‌ಗೆ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ 23 ಮಂದಿ ಗಾಯಗೊಂಡಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:34 am, Tue, 17 October 23