Maharashtra Rains: ಮಹಾರಾಷ್ಟ್ರದಲ್ಲಿ ಮಳೆಯ ಆರ್ಭಟಕ್ಕೆ 138 ಮಂದಿ ಸಾವು; ಸುರಕ್ಷಿತ ಸ್ಥಳಕ್ಕೆ 90 ಸಾವಿರ ಜನರು ಶಿಫ್ಟ್​

| Updated By: ಸುಷ್ಮಾ ಚಕ್ರೆ

Updated on: Jul 24, 2021 | 1:56 PM

Maharashtra Flood Updates: ಮಹಾರಾಷ್ಟ್ರದಲ್ಲಿ ಮಳೆ ಮತ್ತು ಭೂಕುಸಿತದಿಂದ ಇದುವರೆಗೂ 138 ಜನರು ಸಾವನ್ನಪ್ಪಿದ್ದಾರೆ. 90 ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್​ ಮಾಡಲಾಗಿದೆ.

Maharashtra Rains: ಮಹಾರಾಷ್ಟ್ರದಲ್ಲಿ ಮಳೆಯ ಆರ್ಭಟಕ್ಕೆ 138 ಮಂದಿ ಸಾವು; ಸುರಕ್ಷಿತ ಸ್ಥಳಕ್ಕೆ 90 ಸಾವಿರ ಜನರು ಶಿಫ್ಟ್​
ಮಹಾರಾಷ್ಟ್ರದಲ್ಲಿ ಎನ್​ಡಿಆರ್​ಎಫ್ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ
Follow us on

ಮುಂಬೈ: ಕಳೆದೊಂದು ವಾರದಿಂದ ಮಹಾರಾಷ್ಟ್ರದಲ್ಲಿ (Maharashtra Rain)ಭಾರೀ ಮಳೆ ಸುರಿಯುತ್ತಿದೆ. (Mumbai Rain) ಥಾಣೆ, ಪುಣೆ, ರಾಯಘಡ ಮುಂತಾದ ಜಿಲ್ಲೆಗಳಲ್ಲಿ ಇನ್ನೂ ಮೂರ್ನಾಲ್ಕು ದಿನ ಮಳೆ ಹೆಚ್ಚಾಗುವುದರಿಂದ ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ. ರಾಯಘಡದಲ್ಲಿ (Raigad Landslide) ಇಂದು ಭೂಕುಸಿತ ಉಂಟಾಗಿ 36 ಜನರು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರ ರಾಜ್ಯದಲ್ಲಿ ಮಳೆಯಿಂದಾಗಿ ಇದುವರೆಗೂ 138 ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ, 90 ಸಾವಿರಕ್ಕೂ ಹೆಚ್ಚು ಜನರು ಪ್ರವಾಹದ ಭೀತಿ ಎದುರಿಸುತ್ತಿದ್ದು, ಅವರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್​ ಮಾಡಲಾಗಿದೆ.

ಮಹಾರಾಷ್ಟ್ರದಲ್ಲಿ ಮಳೆ ಮತ್ತು ಭೂಕುಸಿತದಿಂದ ಇದುವರೆಗೂ 138 ಜನರು ಸಾವನ್ನಪ್ಪಿದ್ದಾರೆ. ರಾಯಘಡ ಜಿಲ್ಲೆಯೊಂದರಲ್ಲೇ ಭೂಕುಸಿತದಿಂದ 36 ಜನರು ಸಾವನ್ನಪ್ಪಿದ್ದಾರೆ. ಮುಂಬೈನ ಗೋವಂಡಿ ಪ್ರದೇಶದಲ್ಲಿ ಕಟ್ಟಡ ಕುಸಿದಿದ್ದು ಇದರಲ್ಲಿ 3 ಜನರು ಸಾವನ್ನಪ್ಪಿದ್ದಾರೆ ಮತ್ತು 7 ಜನರು ಗಾಯಗೊಂಡಿದ್ದಾರೆ. ಸತಾರ ಜಿಲ್ಲೆಯಲ್ಲಿ ಮಳೆಯಿಂದ 27 ಜನರು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದ ಮಳೆಯಲ್ಲಿ ಸಿಲುಕಿದವರನ್ನು ರಕ್ಷಿಸಲು 9 ಎನ್​ಡಿಆರ್​ಎಫ್ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಕೊಂಕಣ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಮಹಾರಾಷ್ಟ್ರದ ರಾಯಘಡದ ಭೂಕುಸಿತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಪ್ರಧಾನಮಂತ್ರಿಗಳ ಪರಿಹಾರ ನಿಧಿಯಿಂದ ಹೆಚ್ಚುವರಿಯಾಗಿ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಧಾನಮಂತ್ರಿಗಳ ಕಚೇರಿ ಘೋಷಿಸಿದೆ. ಹಾಗೇ, ಭೂಕುಸಿತದಲ್ಲಿ ಗಾಯಗೊಂಡಿರುವವರಿಗೆ 50 ಸಾವಿರ ರೂ. ನೀಡುವುದಾಗಿ ಘೋಷಿಸಲಾಗಿದೆ.

ಈಗಾಗಲೇ ಕೊಲ್ಲಾಪುರ ಜಿಲ್ಲೆಯಲ್ಲಿ 40,000 ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗಿದೆ. ಇಲ್ಲಿನ 54ಕ್ಕೂ ಹೆಚ್ಚು ಗ್ರಾಮಗಳು ಮುಳುಗಡೆಯಾಗಿವೆ. 2019ರಲ್ಲೂ ಕೊಲ್ಲಾಪುರದಲ್ಲಿ ಇದೇ ರೀತಿಯ ಪರಿಸ್ಥಿತಿ ನಿರ್ಮಾಣವಾಗಿತ್ತು. ಮಳೆಗೆ ತತ್ತರಿಸಿರುವ ಮಹಾರಾಷ್ಟ್ರದಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿರುವುದಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಕೂಡ ಆತಂಕ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಫೋನ್ ಮಾಡಿರುವ ರಾಷ್ಟ್ರಪತಿ ಕೋವಿಂದ್ ಮಹಾರಾಷ್ಟ್ರದ ರಕ್ಷಣಾ ಕಾರ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಕರ್ನಾಟಕದಲ್ಲೂ ಮಳೆಯ ಆರ್ಭಟ ಜೋರಾಗಿದ್ದು, ಕರಾವಳಿ, ಮಲೆನಾಡು, ಕೊಡಗು, ಬೆಳಗಾವಿ, ರಾಯಚೂರು ಮುಂತಾದ ಕಡೆಗಳಲ್ಲಿ ಇನ್ನೂ ಮೂರ್ನಾಲ್ಕು ದಿನ ಹೈ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ:  Mumbai Rains: ಮಹಾರಾಷ್ಟ್ರದ ರಾಯಘಡದಲ್ಲಿ ಭಾರೀ ಭೂಕುಸಿತ; ಮಣ್ಣಿನಡಿ ಸಿಲುಕಿ 36 ಜನ ಸಾವು

ಮುಳುಗಿದ ಮಲೆನಾಡು; ತೀರ್ಥಹಳ್ಳಿ ಜಲಾವೃತ, ತತ್ತರಿಸಿದ ಉತ್ತರಕನ್ನಡ, ಮಳೆಯ ಭೀಕರತೆಗೆ ಸಾಕ್ಷಿಯಾದ ಚಿತ್ರಗಳು

(Maharashtra Floods Live Weather Today 138 Dead in Heavy Rain 90000 Shifted to Safer Places in Mumbai, Pune)

Published On - 1:55 pm, Sat, 24 July 21