AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashok Chavan: ಕಾಂಗ್ರೆಸ್ ತೊರೆದ ಮಹಾರಾಷ್ಟ್ರದ ಮಾಜಿ ಸಿಎಂ ಅಶೋಕ್ ಚವಾಣ್ ಬಿಜೆಪಿಗೆ?

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಹೊಡೆತ. ಮಹಾರಾಷ್ಟ್ರದ ಮಾಜಿ ಸಿಎಂ ಆಶೋಕ್ ಚವಾಣ್ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದಲ್ಲಿ ಅಸಮಾಧಾನ ಹೊಂದಿದ್ದ ಚವಾಣ್ ಬಿಜೆಪಿ ಸೇರಲಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ಚವಾಣ್ ಇಂದು ಬೆಳಗ್ಗೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

Ashok Chavan: ಕಾಂಗ್ರೆಸ್ ತೊರೆದ ಮಹಾರಾಷ್ಟ್ರದ ಮಾಜಿ ಸಿಎಂ ಅಶೋಕ್ ಚವಾಣ್ ಬಿಜೆಪಿಗೆ?
ಅಶೋಕ್ ಚವಾಣ್
Follow us
ರಶ್ಮಿ ಕಲ್ಲಕಟ್ಟ
|

Updated on:Feb 12, 2024 | 1:31 PM

ಮುಂಬೈ ಫೆಬ್ರುವರಿ 12: ಮಹಾರಾಷ್ಟ್ರದ (Maharashtra) ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್(Ashok Chavan) ಕಾಂಗ್ರೆಸ್‌ಗೆ(Congress) ರಾಜೀನಾಮೆ ನೀಡಿದ್ದು,  ಬಿಜೆಪಿಗೆ (BJP) ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ವರದಿ ಮಾಡಿವೆ. ಚವಾಣ್ ಅವರು ಪಕ್ಷದ ಬಗ್ಗೆ ಅತೃಪ್ತರಾಗಿದ್ದರು.ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಚವಾಣ್ ಸಂಪರ್ಕಕ್ಕೆ ಸಿಗುತ್ತಿಲ್ಲ. ಇತ್ತ ಬಿಜೆಪಿ ಕಚೇರಿ ಕಾಂಗ್ರೆಸ್ ಮುಖಂಡನ ಪ್ರವೇಶಕ್ಕೆ ಸಿದ್ಧತೆ ನಡೆದಿದೆ. ಆದಾಗ್ಯೂ, ಅಶೋಕ್ ಚವಾಣ್ ಮಾತ್ರ ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇಂದು (ಸೋಮವಾರ) ಬೆಳಗ್ಗೆ ಅಶೋಕ್ ಚವಾಣ್ ಅವರು ವಿಧಾನಸಭಾಧ್ಯಕ್ಷ ರಾಹುಲ್ ನಾರ್ವೇಕರ್ ಅವರನ್ನು ಭೇಟಿ ಮಾಡಿದ್ದರು.”12/02/2024 ಮಧ್ಯಾಹ್ನದಿಂದ ಜಾರಿಗೆ ಬರುವಂತೆ ನಾನು ನ್ಯಾಷನಲ್ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನನ್ನ ರಾಜೀನಾಮೆಯನ್ನು ಈ ಮೂಲಕ ಸಲ್ಲಿಸುತ್ತೇನೆ” ಎಂದು ಚವಾಣ್  ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ (ಎಂಪಿಸಿಸಿ) ಅಧ್ಯಕ್ಷ ನಾನಾ ಪಟೋಲೆ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಚವಾಣ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸುದ್ದಿ ಕೇಳಿದ ಕೂಡಲೇ  ಮುಂಬೈನ ಬಿಜೆಪಿ ಕಚೇರಿಗೆ ಪಕ್ಷದ ದೊಡ್ಡ ನಾಯಕರು ಬಂದಿದ್ದಾರೆ. ಮುಖಂಡರಾದ ದೇವೇಂದ್ರ ಫಡ್ನವೀಸ್, ಆಶಿಶ್ ಶೆಲಾರ್, ಮಂಗಲಪ್ರಭಾತ್ ಲೋಧಾ ಬಿಜೆಪಿ ಕಚೇರಿಗೆ ಬಂದಿದ್ದು ದೇವೇಂದ್ರ ಫಡ್ನವೀಸ್ ಸಮ್ಮುಖದಲ್ಲಿ ಚವಾಣ್ ಬಿಜೆಪಿ ಸೇರಲಿದ್ದಾರೆ ಎಂದು ವರದಿ ಆಗಿದೆ. ಕಳೆದ ಕೆಲ ದಿನಗಳಿಂದ ಅಶೋಕ್ ಚವಾಣ್ ಬಿಜೆಪಿ ಸೇರಲಿದ್ದಾರೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಕೇಳಿ ಬಂದಿತ್ತು.

ಕಾಂಗ್ರೆಸ್ ಪಕ್ಷದ ನಾಯಕ ಮಿಲಿಂದ್ ದಿಯೋರಾ ಬಿಜೆಪಿಗೆ ಸೇರಿದ ಒಂದು ತಿಂಗಳ ನಂತರ ಇದು ಕಾಂಗ್ರೆಸ್‌ಗೆ ಎರಡನೇ ದೊಡ್ಡ ಹೊಡೆತವಾಗಿದೆ. ದಿಯೋರಾ ಅವರ ಕುಟುಂಬವು ಐದು ದಶಕಗಳಿಂದ ಕಾಂಗ್ರೆಸ್‌ನೊಂದಿಗೆ ಸಂಬಂಧ ಹೊಂದಿದ್ದು ಅವರ ಅಪ್ಪ ಮುರಳಿ ದಿಯೋರಾ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದರು.

ವಿಲಾಸ್ ರಾವ್ ದೇಶಮುಖ್ ನಂತರ ಚವಾಣ್ ಅವರು ಡಿಸೆಂಬರ್ 2008ರಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿದ್ದು, ಆದರ್ಶ ವಸತಿ ಹಗರಣದ ಹಿನ್ನೆಲೆಯಲ್ಲಿ ನವೆಂಬರ್ 2010 ರಲ್ಲಿ ರಾಜೀನಾಮೆ ನೀಡಬೇಕಾಯಿತು. ಅವರು 2014 ರಿಂದ 2019 ರವರೆಗೆ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ (MPCC) ಅಧ್ಯಕ್ಷರಾಗಿದ್ದರು.

ಇದನ್ನೂ ಓದಿ: Rozgar Mela: ಪ್ರಧಾನಿ ಮೋದಿಯಿಂದ ಒಂದು ಲಕ್ಷಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಪತ್ರ ವಿತರಣೆ

ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಶನಿವಾರ ಅಜಿತ್ ಪವಾರ್ ಅವರ ಎನ್‌ಸಿಪಿಗೆ ಸೇರಿದ ಕೆಲವು ದಿನಗಳ ನಂತರ ಕಾಂಗ್ರೆಸ್ ಪಕ್ಷದೊಂದಿಗೆ ಅವರ 48 ವರ್ಷಗಳ ಸುದೀರ್ಘ ಸಂಬಂಧವನ್ನು ಮುಗಿಸಿದ್ದಾರೆ. ಮಹಾರಾಷ್ಟ್ರದ ಸಚಿವರು ತಕ್ಷಣದಿಂದ ಜಾರಿಗೆ ಬರುವಂತೆ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:54 pm, Mon, 12 February 24

ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ