ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶ್​ಮುಖ್​​ರನ್ನು ಅರೆಸ್ಟ್ ಮಾಡಿದ ಇ ಡಿ ಅಧಿಕಾರಿಗಳು; ಪರಮ್​ ಬೀರ್​ ಸಿಂಗ್​ ಎಲ್ಲಿ?

Anil Deshmukh: ತಮ್ಮ ವಿರುದ್ಧದ ಆರೋಪಗಳೆಲ್ಲ ಸುಳ್ಳು ಎಂದು ಅನಿಲ್​ ದೇಶ್​ಮುಖ್​ ಹೇಳುತ್ತಲೇ ಬಂದಿದ್ದಾರೆ. ನಿನ್ನೆ ಕೂಡ ಇದನ್ನೇ  ಹೇಳಿದ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ.

ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶ್​ಮುಖ್​​ರನ್ನು ಅರೆಸ್ಟ್ ಮಾಡಿದ ಇ ಡಿ ಅಧಿಕಾರಿಗಳು; ಪರಮ್​ ಬೀರ್​ ಸಿಂಗ್​ ಎಲ್ಲಿ?
ಅನಿಲ್​ ದೇಶ್​ಮುಖ್​
Follow us
TV9 Web
| Updated By: Digi Tech Desk

Updated on:Nov 02, 2021 | 10:49 AM

ಮುಂಬೈ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶ್​ಮುಖ್(Anil Deshmukh)​​ರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಜಾರಿ ನಿರ್ದೇಶನಾಲಯ (ED) ಬಂಧಿಸಿದೆ. ಸುಮಾರು 12 ತಾಸುಗಳ ಕಾಲ ತಮ್ಮ ಕಚೇರಿಯಲ್ಲಿ ಅನಿಲ್​ ದೇಶ್​ಮುಖರ್​​ನ್ನು ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳು ಕೊನೆಯಲ್ಲಿ ಅವರನ್ನು ಬಂಧಿಸಿ ಕರೆದುಕೊಂಡು ಹೋಗಿವೆ.  ಇಡಿ ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಅನಿಲ್​ ದೇಶ್​ಮುಖ್​ ಸರಿಯಾಗಿ ಉತ್ತರಿಸಲಿಲ್ಲ..ಅವರಿಗೆ ಸಹಕಾರ ನೀಡಲು ಹಿಂದೇಟು ಹಾಕಿದ್ದೇ ಬಂಧನಕ್ಕೆ ಕಾರಣ ಎನ್ನಲಾಗಿದೆ. ಅನಿಲ್​ ದೇಶ್​ಮುಖ್​ ವಿರುದ್ಧ ಲಂಚ ಪಡೆದ ಆರೋಪ ಇದೆ. ಇದೇ ಕಾರಣಕ್ಕೆ ಈ ವರ್ಷದ ಪ್ರಾರಂಭದಲ್ಲಿ ಅವರು ತಮ್ಮ ಸಚಿವ ಸ್ಥಾನದಿಂದ ಕೆಳಗೆ ಇಳಿದಿದ್ದರು. ಇಡಿ ತಮಗೆ ನೀಡಿರುವ ಸಮನ್ಸ್​​ನ್ನು ರದ್ದುಗೊಳಿಸಬೇಕು ಎಂದು ಅನಿಲ್​ ದೇಶ್​ಮುಖ್​​ ಬಾಂಬೆ ಹೈಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಆದರೆ ಆ ಅರ್ಜಿಯನ್ನು ಕೋರ್ಟ್​​ ಪುರಸ್ಕರಿಸಲಿಲ್ಲ.  ಈ ಅನಿಲ್​ ದೇಶ್​​ಮುಖ್​ ವಿರುದ್ಧ ಮುಂಬೈನ ಮಾಜಿ ಪೊಲೀಸ್​ ಉನ್ನತಾಧಿಕಾರಿ ಪರಮ್​ ಬೀರ್​ ಸಿಂಗ್​ ಭ್ರಷ್ಟಾಚಾರ ಮತ್ತು ಸುಲಿಗೆ ಆರೋಪ ಮಾಡಿದ್ದರು. ಸಿಎಂ ಉದ್ಧವ್​ ಠಾಕ್ರೆಗೆ ಪತ್ರ ಬರೆದಿದದ ಅವರು, ಗೃಹ ಸಚಿವರಾಗಿರುವ ಅನಿಲ್​ ದೇಶ್​ಮುಖ್​​ ಪೊಲೀಸ್​ ಇಲಾಖೆಯಲ್ಲಿ ತುಂಬ ಹಸ್ತಕ್ಷೇಪ ಮಾಡುತ್ತಾರೆ. ಪೊಲೀಸರನ್ನು ಬಳಸಿಕಂಡು ಪ್ರತಿ ತಿಂಗಳೂ ಬಾರ್​ ಆ್ಯಂಡ್ ರೆಸ್ಟೋರೆಂಟ್ ಸೇರಿ ವಿವಿಧ ಮೂಲಗಳಿಂದ 100 ಕೋಟಿ ರೂಪಾಯಿ ಸುಲಿಗೆ ಮಾಡುತ್ತಿದ್ದಾರೆ ಎಂದು ಉಲ್ಲೇಖಿಸಿದ್ದರು. ಅಂದಹಾಗೆ ಮುಕೇಶ್ ಅಂಬಾನಿ ಮನೆಯ ಎದುರು ಬಾಂಬ್​ ಸಿಕ್ಕ ಪ್ರಕರಣದಲ್ಲಿ ಈ ಪರಮ್​ ಬೀರ್ ಸಿಂಗ್​ ತಮ್ಮ ಸ್ಥಾನ ಕಳೆದುಕೊಂಡಿದ್ದರು. ಅದಾದ ಬಳಿಕ ಅವರು ಅನಿಲ್​ ದೇಶ್​ಮುಖ್​ ವಿರುದ್ಧ ಆರೋಪ ಹೊರೆಸಿದ್ದರು.

ತಮ್ಮ ವಿರುದ್ಧದ ಆರೋಪಗಳೆಲ್ಲ ಸುಳ್ಳು ಎಂದು ಅನಿಲ್​ ದೇಶ್​ಮುಖ್​ ಹೇಳುತ್ತಲೇ ಬಂದಿದ್ದಾರೆ. ನಿನ್ನೆ ಕೂಡ ಇದನ್ನೇ  ಹೇಳಿದ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ಪರಮ್​ಬೀರ್​ ಸಿಂಗ್​ ವಿರುದ್ಧವೂ ಕೂಡ ಭ್ರಷ್ಟಾಚಾರ ಆರೋಪ ಇದೆ. ಅವರಿಗೆ ಲುಕ್​ಔಟ್​ ನೋಟಿಸ್​ ಕೂಡ ಜಾರಿ ಮಾಡಲಾಗಿದ್ದರೂ ಅವರ ಪತ್ತೆಯಿಲ್ಲ. ಈ ಬಗ್ಗೆ ನಿನ್ನೆ ಪ್ರಶ್ನೆ ಎತ್ತಿರುವ ಅನಿಲ್​ ದೇಶ್​ಮುಖ್​, ಪರಮ್​ ಬೀರ್​ ಸಿಂಗ್ ಎಲ್ಲಿ ಹೋಗಿದ್ದಾರೆ? ನನ್ನ ವಿರುದ್ಧ ಆರೋಪ ಮಾಡಿದವರೇ ಕಾಣುತ್ತಿಲ್ಲ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ‘ಅಭಿಮಾನಿಗಳಿಗೆ ಖಂಡಿತಾ ಅಪ್ಪು ಸಮಾಧಿ ದರ್ಶನಕ್ಕೆ ಅವಕಾಶ ಕೊಡ್ತೀವಿ, ಆದರೆ 2 ದಿನ ಕಾಯಿರಿ’: ಶಿವಣ್ಣ

Coriander leaves: ಅಡುಗೆಯಲ್ಲಿ ರುಚಿ ಹೆಚ್ಚಿಸಲು ಮಾತ್ರವಲ್ಲ ಕೊತ್ತಂಬರಿ ಸೊಪ್ಪು ಆರೋಗ್ಯಕ್ಕೂ ಉತ್ತಮ

Published On - 10:20 am, Tue, 2 November 21

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ