AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Baba Siddique Resigns: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಕಾಂಗ್ರೆಸ್​ಗೆ ರಾಜೀನಾಮೆ

ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿರುವಾಗಲೇ ಕಾಂಗ್ರೆಸ್​ಗೆ ದೊಡ್ಡ ಹೊಡೆತ ಬಿದ್ದಿದೆ. ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಕಾಂಗ್ರೆಸ್​ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮಾಜಿ ಶಾಸಕ ಬಾಬಾ ಸಿದ್ದಿಕಿ ಅವರು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣ ಸೇರಬಹುದು ಎಂಬ ಸುದ್ದಿಯೂ ಹೊರಬಿದ್ದಿದೆ.

Baba Siddique Resigns: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಕಾಂಗ್ರೆಸ್​ಗೆ ರಾಜೀನಾಮೆ
ಬಾಬಾ ಸಿದ್ದಿಕಿImage Credit source: India Today
ನಯನಾ ರಾಜೀವ್
|

Updated on:Feb 08, 2024 | 11:29 AM

Share

ಮಹಾರಾಷ್ಟ್ರ(Maharashtra) ದ ಮಾಜಿ ಸಚಿವ ಬಾಬಾ ಸಿದ್ದಿಕಿ(Baba Siddique) ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ್ದಾರೆ. 48 ವರ್ಷಗಳ ನಂತರ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಭಾರಿ ಹಿನ್ನಡೆಯಾಗಿದೆ. ಬಾಬಾ ಸಿದ್ದಿಕಿ ಅವರು ಗುರುವಾರ (8 ಫೆಬ್ರವರಿ) ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಬಾಬಾ ಸಿದ್ದಿಕಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದಾರೆ, ನಾನು ಹದಿಹರೆಯದವನಾಗಿದ್ದಾಗ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ ಮತ್ತು ಇದು 48 ವರ್ಷಗಳ ಸುದೀರ್ಘ ಪ್ರಯಾಣವಾಗಿದೆ. ಇಂದು ನಾನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (INC) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಬಾಬಾ ಜಿಯಾವುದ್ದೀನ್ ಸಿದ್ದಿಕಿ ಇಫ್ತಾರ್ ಪಾರ್ಟಿಗಳಿಗೆ ಪ್ರಸಿದ್ಧಿ ಬಾಬಾ ಜಿಯಾವುದ್ದೀನ್ ಸಿದ್ದಿಕಿ ವರ್ಷಕ್ಕೊಮ್ಮೆ ಇಫ್ತಾರ್ ಕೂಟವನ್ನು ಆಯೋಜಿಸುತ್ತಾರೆ, ವಿಶೇಷವಾಗಿ ಸಲ್ಮಾನ್ ಖಾನ್ ಮತ್ತು ಶಾರುಖ್ ಖಾನ್ ಸೇರಿದಂತೆ ಪ್ರಮುಖರು ಭಾಗವಹಿಸುವ ಈ ಇಫ್ತಾರ್​ ಕೂಟಗಳಿಂದಲೇ ಬಾಬಾ ಸಿದ್ದಿಕಿ ಪ್ರಸಿದ್ಧಿ ಪಡೆದಿದ್ದಾರೆ.

ಮತ್ತಷ್ಟು ಓದಿ: ಲೋಕಸಭಾ ಚುನಾವಣೆ: ಟಿಡಿಪಿ ಹಾಗೂ ಬಿಜೆಪಿ ಮತ್ತೆ ಒಂದಾಗಲಿದೆ ಎಂದ ವೈಎಸ್​ಆರ್​ಸಿಪಿ ಸಂಸದ

ಕಾಂಗ್ರೆಸ್​ಗೆ ದೊಡ್ಡ ಹೊಡೆತ ಮಿಲಿಂದ್ ದಿಯೋರಾ ನಂತರ, ಬಾಬಾ ಸಿದ್ದಿಕಿ ಅವರು ಪಕ್ಷವನ್ನು ತೊರೆದ ಎರಡನೇ ದೊಡ್ಡ ಕಾಂಗ್ರೆಸ್ ನಾಯಕರಾಗಿದ್ದಾರೆ. ಕೆಲವು ದಿನಗಳ ಹಿಂದೆ ಮುಂಬೈನ ಬಾಂದ್ರಾ ಪೂರ್ವದ ಮಾಜಿ ಶಾಸಕ ಬಾಬಾ ಸಿದ್ದಿಕಿ ಅವರು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣ ಸೇರಬಹುದು ಎಂಬ ಸುದ್ದಿಯೂ ಹೊರಬಿದ್ದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:18 am, Thu, 8 February 24