ನಾಲ್ಕು ತಿಂಗಳ ಮಗನನ್ನು ನೀರಿನ ಡ್ರಮ್ನಲ್ಲಿ ಮುಳುಗಿಸಿ ಕೊಂದು,ಬಳಿಕ ಆತ್ಮಹತ್ಯೆಗೆ ಶರಣಾದ ತಂದೆ
ತಂದೆಯೊಬ್ಬ ನಾಲ್ಕು ತಿಂಗಳ ಮಗನನ್ನು ನೀರಿನ ಡ್ರಮ್ನಲ್ಲಿ ಮುಳುಗಿಸಿ ಹತ್ಯೆ(Murder) ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಅರ್ಧ ನೀರು ತುಂಬಿರುವ ಡ್ರಮ್ನಲ್ಲಿ ಮಗುವನ್ನು ಎಸೆಯಲಾಗಿತ್ತು. ಬೀಡ್ ಜಿಲ್ಲೆಯ ಜಿಯೋರೈ ತಾಲ್ಲೂಕಿನ ತಲ್ವಾಡಾ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ. ತಂದೆ ಅಮೋಲ್ ಸೋನಾವಾನೆ ತನ್ನ ಮಗನನ್ನು ಅರ್ಧ ನೀರು ತುಂಬಿದ ಡ್ರಮ್‌ಗೆ ಎಸೆದು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಗುಲಾಬಿ ಬಣ್ಣದ ಟಿ-ಶರ್ಟ್ ಧರಿಸಿ ಡೈಪರ್ ಧರಿಸಿದ್ದ ಮಗು ನೀರಿನಲ್ಲಿ ಮುಖ ಕೆಳಗಾಗಿ ಮಲಗಿತ್ತು,

ಮಹಾರಾಷ್ಟ್ರ, ಅಕ್ಟೋಬರ್ 05: ತಂದೆಯೊಬ್ಬ ನಾಲ್ಕು ತಿಂಗಳ ಮಗನನ್ನು ನೀರಿನ ಡ್ರಮ್ನಲ್ಲಿ ಮುಳುಗಿಸಿ ಹತ್ಯೆ(Murder) ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಅರ್ಧ ನೀರು ತುಂಬಿರುವ ಡ್ರಮ್ನಲ್ಲಿ ಮಗುವನ್ನು ಎಸೆಯಲಾಗಿತ್ತು. ಬೀಡ್ ಜಿಲ್ಲೆಯ ಜಿಯೋರೈ ತಾಲ್ಲೂಕಿನ ತಲ್ವಾಡಾ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ.
ತಂದೆ ಅಮೋಲ್ ಸೋನಾವಾನೆ ತನ್ನ ಮಗನನ್ನು ಅರ್ಧ ನೀರು ತುಂಬಿದ ಡ್ರಮ್‌ಗೆ ಎಸೆದು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಗುಲಾಬಿ ಬಣ್ಣದ ಟಿ-ಶರ್ಟ್ ಧರಿಸಿ ಡೈಪರ್ ಧರಿಸಿದ್ದ ಮಗು ನೀರಿನಲ್ಲಿ ಮುಖ ಕೆಳಗಾಗಿ ಮಲಗಿತ್ತು, ಪಕ್ಕದಲ್ಲಿ ಪ್ಲಾಸ್ಟಿಕ್ ಗುಲಾಬಿ ಮಗ್ ತೇಲುತ್ತಿರುವುದನ್ನು ಚಿತ್ರಗಳಲ್ಲಿ ಕಾಣಬಹುದು. ಆ ವ್ಯಕ್ತಿ ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದೆ, ಅಮೋಲ್ ಮತ್ತು ಆತನ ಪತ್ನಿ ಕೌಟುಂಬಿಕ ಕಲಹದ ನಂತರ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಸರಿಯಾದ ಸಮಯಕ್ಕೆ ಅವರನ್ನು ರಕ್ಷಿಸಲಾಗಿತ್ತು.ದಂಪತಿಯನ್ನು ಗುರುವಾರ ಸ್ಥಳೀಯ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. ಅಮೋಲ್ ಮತ್ತು ಅವರ ಮಗನ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ತಲ್ವಾರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಗಿದೆ.
ಮತ್ತಷ್ಟು ಓದಿ: Bidar: ಮನ್ನಾಖೇಳಿಯಲ್ಲಿ ಚಾಲಕನ ಬರ್ಬರ ಕೊಲೆ; ಕಾರಣ ನಿಗೂಢ
ಸರ್ಕಾರಿ ಕೆಲಸ ಉಳಿಸಿಕೊಳ್ಳಲು ಮಗುವನ್ನು ಕಾಡಿನಲ್ಲಿ ಎಸೆದ ಪೋಷಕರು ಸರ್ಕಾರಿ ಕೆಲಸವನ್ನು ಉಳಿಸಿಕೊಳ್ಳಲು ಪೋಷಕರು ತಮ್ಮ ಮಗುವನ್ನು ಕಾಡಿನಲ್ಲಿ ಎಸೆದು ಬಂದಿರುವ ಘಟನೆ ಛಿಂದ್ವಾರಾದಲ್ಲಿ ನಡೆದಿತ್ತು. ಮತ್ತೆ ಗರ್ಭಿಣಿಯಾಗಿದ್ದನ್ನು ಎಲ್ಲರಿಂದ ಮುಚ್ಚಿಟ್ಟಿದ್ದರು. ಮಧ್ಯಪ್ರದೇಶದಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದವವರು ಸರ್ಕಾರಿ ನೌಕರಿ ಕಳೆದುಕೊಳ್ಳುತ್ತಾರೆ. ಸರ್ಕಾರದ ಕೆಲವು ನಿಯಮಗಳಿವೆ.
ಈಗಾಗಲೇ ಮೂವರು ಮಕ್ಕಳಿದ್ದಾರೆ ಇನ್ನೊಂದಾದರೆ ಖಂಡಿತವಾಗಿಯೂ ತಾವು ಕೆಲಸವನ್ನು ಕಳೆದುಕೊಳ್ಳುತ್ತೇವೆ ಎಂಬ ಭಯದಲ್ಲಿ ಆಗ ತಾನೆ ಹುಟ್ಟಿದ್ದ, ಇನ್ನೂ ಕಣ್ಣು ತೆರೆಯದ ಕಂದಮ್ಮನನ್ನು ಕಾಡಿನಲ್ಲಿ ಬಿಟ್ಟು ಪೋಷಕರು ಪರಾರಿಯಾಗಿದ್ದರು.
72 ಗಂಟೆಗಳ ಕಾಲ ಹೇಗೋ ಉಸಿರು ಬಿಗಿ ಹಿಡಿದುಕೊಂಡು ಮಗು ಬದುಕುಳಿದಿತ್ತು, ಒಂದು ಕಡೆ ತಣ್ಣನೆಯ ವಾತಾವರಣ, ಕೀಟಗಳ ಕಾಟ, ಕಲ್ಲಿನಡಿ ಉಸಿರುಗಟ್ಟುವ ಸ್ಥಿತಿಯಲ್ಲಿದ್ದರೂ ಉಸಿರಿತ್ತು. ಗ್ರಾಮಸ್ಥರು ಮಗುವನ್ನು ಪತ್ತೆ ಮಾಡಿದ್ದರು. ಜನರು ಕಲ್ಲುಗಳ ನಡುವೆ ರಕ್ತಸಿಕ್ತವಾಗಿದ್ದ ಮಗುವನ್ನು ರಕ್ಷಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




