ಮಹಾರಾಷ್ಟ್ರದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಆಗಸ್ಟ್ 15 ರಿಂದ ರೋಗಿಗಳಿಗೆ ಚಿಕಿತ್ಸೆ ಉಚಿತ
ಆಗಸ್ಟ್ 15 ರಿಂದ ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ. ಆಸ್ಪತ್ರೆಗಳು ರೋಗಿಗಳಿಂದ ಯಾವುದೇ ಹೆಚ್ಚುವರಿ ಶುಲ್ಕವನ್ನು ವಿಧಿಸುವುದಿಲ್ಲ. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಉಚಿತವಾಗಿದ್ದು, ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ರಾಜ್ಯ ಆರೋಗ್ಯ ಸಚಿವ ತಾನಾಜಿ ಸಾವಂತ್ ತಿಳಿಸಿದ್ದರು.

ಆಗಸ್ಟ್ 15 ರಿಂದ ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ. ಆಸ್ಪತ್ರೆಗಳು ರೋಗಿಗಳಿಂದ ಯಾವುದೇ ಹೆಚ್ಚುವರಿ ಶುಲ್ಕವನ್ನು ವಿಧಿಸುವುದಿಲ್ಲ. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಉಚಿತವಾಗಿದ್ದು, ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ರಾಜ್ಯ ಆರೋಗ್ಯ ಸಚಿವ ತಾನಾಜಿ ಸಾವಂತ್ ತಿಳಿಸಿದ್ದರು. ಆರೋಗ್ಯದ ಹಕ್ಕು (ಆರ್ಟಿಕಲ್ 21) ಅಡಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಗ್ರಾಮೀಣ ಆಸ್ಪತ್ರೆಗಳು, ಮಹಿಳಾ ಆಸ್ಪತ್ರೆಗಳು, ಜಿಲ್ಲಾ ಜನರಲ್ ಆಸ್ಪತ್ರೆಗಳು, ಉಪ ಜಿಲ್ಲಾ ಆಸ್ಪತ್ರೆಗಳು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಮತ್ತು ಕ್ಯಾನ್ಸರ್ ಆಸ್ಪತ್ರೆಗಳಲ್ಲಿ ಚಿಕಿತ್ಸೆಯು ಉಚಿತವಾಗಿರುತ್ತದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ತಾನಾಜಿ ಸಾವಂತ್ ಹೇಳಿದ್ದಾರೆ. ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ನಾಸಿಕ್ಮತ್ತು ಅಮರಾವತಿಯ ಕ್ಯಾನ್ಸರ್ ಆಸ್ಪತ್ರೆಗಳೂ ಉಚಿತ ಚಿಕಿತ್ಸೆ ನೀಡಲಿವೆ. ರಾಜ್ಯ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಒಟ್ಟು 2418 ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳಲ್ಲಿ ಈ ಸೌಲಭ್ಯ ಲಭ್ಯವಿರುತ್ತದೆ. ಈ ಯೋಜನೆಯಿಂದ ರಾಜ್ಯಾದ್ಯಂತ ಸುಮಾರು 2.5 ಕೋಟಿ ಜನರು ಆರೋಗ್ಯ ಸೌಲಭ್ಯಗಳ ಪ್ರಯೋಜನ ಪಡೆಯಲು ಸಾಧ್ಯವಾಗುತ್ತದೆ.
ಆದಾಗ್ಯೂ, ಈ ಯೋಜನೆಯು ವೈದ್ಯಕೀಯ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಆಸ್ಪತ್ರೆಗಳು ಅಥವಾ ವೈದ್ಯಕೀಯ ಕಾಲೇಜುಗಳಿಗೆ ಅನ್ವಯಿಸುವುದಿಲ್ಲ.
ಮತ್ತಷ್ಟು ಓದಿ:ಖಾಸಗಿ ವೈದ್ಯರ ನಿರ್ಲಕ್ಷ್ಯದಿಂದ ರೋಗಿ ಸಾವು ಆರೋಪ: ಆಸ್ಪತ್ರೆಯ ಕಿಟಕಿ ಗಾಜು ಒಡೆದು ಕುಟುಂಬಸ್ಥರ ಆಕ್ರೋಶ
ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ, 2020 ರಲ್ಲಿ, ಮಹಾರಾಷ್ಟ್ರವು ರಾಜ್ಯದ ಜನರಿಗೆ ಉಚಿತ ಆರೋಗ್ಯ ವಿಮಾ ಯೋಜನೆಯನ್ನು ಘೋಷಿಸಿತು. ಇದರ ನಂತರ, ಮಹಾರಾಷ್ಟ್ರವು ಉಚಿತ ವಿಮಾ ರಕ್ಷಣೆಯನ್ನು ಒದಗಿಸಿದ ದೇಶದ ಮೊದಲ ರಾಜ್ಯ ಎಂಬ ಖ್ಯಾತಿಗೆ ಪಾತ್ರವಾಯಿತು.
ರಾಜ್ಯ ಸರ್ಕಾರದ ಆರೋಗ್ಯ ಯೋಜನೆ ಮಹಾತ್ಮಾ ಜ್ಯೋತಿಬಾ ಫುಲೆ ಜನ ಆರೋಗ್ಯ ಯೋಜನೆ (MJPJAY) ಅಡಿಯಲ್ಲಿ ಎಲ್ಲಾ ನಾಗರಿಕರಿಗೆ ಸೌಲಭ್ಯಗಳನ್ನು ಒದಗಿಸಲಾಗುವುದು. ಯೋಜನೆಯಡಿ ಅರ್ಜಿ ಸಲ್ಲಿಸಲು ನಾಗರಿಕರು ತಮ್ಮ ಪಡಿತರ ಚೀಟಿ ಮತ್ತು ನಿವಾಸ ಪ್ರಮಾಣಪತ್ರವನ್ನು ಹೊಂದಿರಬೇಕು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




