ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಂಬರನಾಥ್ ನಗರದ ರಾಸಾಯನಿಕ ಕಾರ್ಖಾನೆಯಲ್ಲಿ ಮಂಗಳವಾರ ವಿಷಕಾರಿ ಅನಿಲ ಸೋರಿಕೆಯಾಗಿದೆ. ಗ್ಯಾಸ್ ಸೋರಿಕೆಯಿಂದ 34ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಅಂಬರ್‌ನಾಥ್ ಪಟ್ಟಣದ ಎಂಐಡಿಸಿ ಪ್ರದೇಶದ ರಾಸಾಯನಿಕ ಕಾರ್ಖಾನೆಯಿಂದ ಅನಿಲ ಸೋರಿಕೆ ವರದಿಯಾದ ನಂತರ 34ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಸಿರಾಟದ ತೊಂದರೆ, ಕಣ್ಣು, ಮೂಗು ಉರಿಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ಅಂಬರನಾಥ್ ಪಶ್ಚಿಮದಲ್ಲಿರುವ ಆರ್.ಕೆ ಕೆಮಿಕಲ್ ಪ್ಲಾಂಟ್‌ನಿಂದ ಸಲ್ಫ್ಯೂರಿಕ್ ಅನಿಲ ಸೋರಿಕೆಯಾಗಿದೆ. ಕಂಪನಿಯ ಸಿಬ್ಬಂದಿ ಮತ್ತು ಸುತ್ತಮುತ್ತಲಿನ ಜನರು ಸೇರಿದಂತೆ 34 ಜನರು ತೊಂದರೆಗೀಡಾಗಿದ್ದಾರೆ. ಅಗ್ನಿಶಾಮಕ ದಳ ಮತ್ತು ಮಹಾರಾಷ್ಟ್ರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸೋರಿಕೆಯಾದ ಬಗ್ಗೆ ಮಾಹಿತಿ ಪಡೆದ ನಂತರ ಸ್ಥಳಕ್ಕೆ ಧಾವಿಸಿದರು.
ಉಸಿರಾಟದ ತೊಂದರೆ ಮತ್ತು ಇತರೆ ಆರೋಗ್ಯ ಸಮಸ್ಯೆಗಳ ಬಗ್ಗೆ ದೂರು ನೀಡಿದ 34 ಜನರನ್ನು ಉಲ್ಲಾಸ್ ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚೆಗೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಎಲ್ಜಿ ಪಾಲಿಮರ್ಸ್ ರಾಸಾಯನಿಕ ಸ್ಥಾವರದಿಂದ ರಾತ್ರಿಯಿಡೀ ಗ್ಯಾಸ್ ಸೋರಿಕೆಯಾಗಿತ್ತು. ಇದರಿಂದ ಮಗು ಮತ್ತು 8 ಜನರು ಮೃತಪಟ್ಟಿದ್ದರು, 1000ಕ್ಕೂ ಹೆಚ್ಚು ಜನರು ಅನಾರೋಗ್ಯಕ್ಕೆ ಒಳಗಾಗಿದ್ದರು.
ಇದನ್ನೂ ಓದಿ: Maharashtra Bandh: ಲಖಿಂಪುರ ಖೇರಿಯ ರೈತರ ಹತ್ಯೆ ವಿರೋಧಿಸಿ ಇಂದು ಮಹಾರಾಷ್ಟ್ರ ಬಂದ್