ಕೊರೊನಾ ಪ್ರಕರಣದಲ್ಲಿ ಇಳಿಕೆ ಹಿನ್ನೆಲೆ ಎಲ್ಲ ರೀತಿಯ ಕೊವಿಡ್ ನಿರ್ಬಂಧ ತೆರವುಗೊಳಿಸಿದ ಮಹಾರಾಷ್ಟ್ರ ಸರ್ಕಾರ

ಏಪ್ರಿಲ್ 2 ರಿಂದ ಮಹಾರಾಷ್ಟ್ರದಲ್ಲಿ ಕೊರೊನಾ ನಿರ್ಬಂಧ ತೆರವು ಜಾರಿಗೊಳಿಸಲಾಗುತ್ತದೆ. ಸಾಂಕ್ರಾಮಿಕ ರೋಗ ಕಾಯ್ದೆ, ವಿಪತ್ತು ನಿರ್ವಹಣಾ ಕಾಯ್ದೆ ಸ್ಥಗಿತಗೊಳಿಸಲಾಗುತ್ತೆ. ಎಲ್ಲ ಹಬ್ಬಗಳನ್ನು ಸಂಭ್ರಮದಿಂದ ಆಚರಿಸಲು ಅವಕಾಶ ನೀಡಲಾಗಿದೆ ಎಂದು ಸಿಎಂ ಉದ್ಧವ್ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ.

ಕೊರೊನಾ ಪ್ರಕರಣದಲ್ಲಿ ಇಳಿಕೆ ಹಿನ್ನೆಲೆ ಎಲ್ಲ ರೀತಿಯ ಕೊವಿಡ್ ನಿರ್ಬಂಧ ತೆರವುಗೊಳಿಸಿದ ಮಹಾರಾಷ್ಟ್ರ ಸರ್ಕಾರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Mar 31, 2022 | 7:16 PM

ಮುಂಬೈ: ಮಹಾಮಾರಿ ಕೊರೊನಾ(Coronavirus) ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದ ಹಿನ್ನೆಲೆ ಮಹಾರಾಷ್ಟ್ರ ಸರ್ಕಾರವು(Maharashtra Government) ರಾಜ್ಯದಲ್ಲಿ ಎಲ್ಲ ರೀತಿಯ ಕೊವಿಡ್ ನಿರ್ಬಂಧ ತೆರವುಗೊಳಿಸಿದೆ. ಮಹಾರಾಷ್ಟ್ರದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ. ಮಾಸ್ಕ್ ಧರಿಸುವುದು ಜನರಿಗೆ ಸಲಹೆ ಮಾತ್ರ ಎಂದು ತಿಳಿಸಿದೆ. ಮಹಾರಾಷ್ಟ್ರ ಸಚಿವ ಜಿತೇಂದ್ರ ಅವ್ಹಾದ್, ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಎಲ್ಲಾ ಕೊರೊನಾ ನಿರ್ಬಂಧಗಳನ್ನು ತೆಗೆದುಹಾಕಲು ರಾಜ್ಯ ಕ್ಯಾಬಿನೆಟ್ ನಿರ್ಧರಿಸಿದೆ ಎಂದು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಏಪ್ರಿಲ್ 2 ರಿಂದ ಮಹಾರಾಷ್ಟ್ರದಲ್ಲಿ ಕೊರೊನಾ ನಿರ್ಬಂಧ ತೆರವು ಜಾರಿಗೊಳಿಸಲಾಗುತ್ತದೆ. ಸಾಂಕ್ರಾಮಿಕ ರೋಗ ಕಾಯ್ದೆ, ವಿಪತ್ತು ನಿರ್ವಹಣಾ ಕಾಯ್ದೆ ಸ್ಥಗಿತಗೊಳಿಸಲಾಗುತ್ತೆ. ಎಲ್ಲ ಹಬ್ಬಗಳನ್ನು ಸಂಭ್ರಮದಿಂದ ಆಚರಿಸಲು ಅವಕಾಶ ನೀಡಲಾಗಿದೆ ಎಂದು ಸಿಎಂ ಉದ್ಧವ್ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಮಹಾರಾಷ್ಟ್ರದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ. ಮಾಸ್ಕ್ ಧರಿಸುವುದು ಜನರಿಗೆ ಸಲಹೆ ಮಾತ್ರ. ಮಾಸ್ಕ್ ಹಾಕಲು ಬಯಸುವವರು ಮಾಸ್ಕ್ ಬಳಸಬಹುದು. ಸಾರ್ವಜನಿಕ ಸಾರಿಗೆಯಲ್ಲಿ ಸಂಚಾರ, ಮಾಲ್, ಸಿನಿಮಾ ಹಾಲ್ ಪ್ರವೇಶಕ್ಕೆ ಸಂಪೂರ್ಣ ಲಸಿಕೆ ಕಡ್ಡಾಯವಲ್ಲ ಎಂದು ನಿರ್ಣಯ ತೆಗೆದುಕೊಳ್ಳಲಾಗಿದೆ. ಈ ಮೂಲಕ ಮಾಸ್ಕ್ ಕಡ್ಡಾಯವಲ್ಲ ಎಂದ ದೇಶದ ಮೊದಲ ರಾಜ್ಯ ಮಹಾರಾಷ್ಟ್ರವಾಗಿದೆ.

ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೋಪೆ ಮಾತನಾಡಿದ್ದು, ಹಲವು ದೇಶಗಳಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳವನ್ನು ನೋಡಿದರೆ, ಮಾಸ್ಕ್ ಬಳಸುವುದನ್ನು ನಿಲ್ಲಿಸುವುದು ಅಪಾಯ. ನಾವು ಮೂರನೇ ಅಲೆಯ ಪರಿಣಾಮವನ್ನು ನೋಡಿದ್ದೇವೆ, ನಾವು ಮಾಸ್ಕ್ ತೆಗೆದುಹಾಕುವ ಬಗ್ಗೆ ಯೋಚಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಸಂಸದ ಮುನಿಸ್ವಾಮಿ; ಕೋಲಾರದ ಕ್ಲಾಕ್ ಟವರ್ ತ್ರಿವರ್ಣ ಧ್ವಜ ಹಾರಿಸಿದ ವಿಚಾರ ಪ್ರಸ್ತಾಪ

Personal Loan: ಕೈದಿಗಳಿಗೆ ಶೇ 7ರ ಬಡ್ಡಿ ದರದಲ್ಲಿ ಪರ್ಸನಲ್ ಲೋನ್ ನೀಡುವ ಯೋಜನೆ ಆರಂಭಿಸಿದ ಮಹಾರಾಷ್ಟ್ರ ಸರ್ಕಾರ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್