ಭಾರತ ರತ್ನ ಪ್ರಶಸ್ತಿಗೆ ಕೈಗಾರಿಕೋದ್ಯಮಿ ರತನ್ ಟಾಟಾ ಹೆಸರು ಪ್ರಸ್ತಾಪಿಸಿದ ಮಹಾರಾಷ್ಟ್ರ ಸರ್ಕಾರ

ಭಾರತದ ಹಿರಿಯ ಕೈಗಾರಿಕೋದ್ಯಮಿ ರತನ್ ಎನ್ ಟಾಟಾ ಬುಧವಾರ ರಾತ್ರಿ ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ಇಂದು ಸಾರ್ವಜನಿಕರಿಗೆ ಅಂತಿಮ ನಮನ ಸಲ್ಲಿಸಲು ಮುಂಬೈನ ಎನ್‌ಸಿಪಿಎ ಹುಲ್ಲುಹಾಸಿನಲ್ಲಿ ಇರಿಸಲಾಗಿದೆ. ರತನ್ ಟಾಟಾ ನಿಧನಕ್ಕೆ ದೇಶಾದ್ಯಂತ ಕೋಟ್ಯಂತರ ಜನರು ಕಂಬನಿ ಮಿಡಿದಿದ್ದಾರೆ. ಈ ನಡುವೆ ರತನ್ ಟಾಟಾ ಅವರಿಗೆ ಮರಣೋತ್ತರ ಭಾರತರತ್ನ ಪ್ರಶಸ್ತಿ ನೀಡಬೇಕೆಂಬ ಒತ್ತಾಯ ಕೇಳಿಬರುತ್ತಿದೆ.

ಭಾರತ ರತ್ನ ಪ್ರಶಸ್ತಿಗೆ ಕೈಗಾರಿಕೋದ್ಯಮಿ ರತನ್ ಟಾಟಾ ಹೆಸರು ಪ್ರಸ್ತಾಪಿಸಿದ ಮಹಾರಾಷ್ಟ್ರ ಸರ್ಕಾರ
ರತನ್ ಟಾಟಾ
Follow us
ಸುಷ್ಮಾ ಚಕ್ರೆ
|

Updated on: Oct 10, 2024 | 2:57 PM

ಮುಂಬೈ: ಮಹಾರಾಷ್ಟ್ರ ಸರ್ಕಾರ ಇಂದು ನಡೆದ ಸಂಪುಟ ಸಭೆಯಲ್ಲಿ ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಹೆಸರನ್ನು ಭಾರತ ರತ್ನ ಪ್ರಶಸ್ತಿಗೆ ಪ್ರಸ್ತಾಪಿಸಲು ನಿರ್ಧರಿಸಿದೆ. ಇಂದು ರಾಜ್ಯ ಸಚಿವ ಸಂಪುಟದಲ್ಲಿ ಟಾಟಾ ಅವರಿಗೆ ಸಂತಾಪ ಸೂಚಿಸುವ ಪ್ರಸ್ತಾವನೆಯನ್ನೂ ಅಂಗೀಕರಿಸಲಾಗಿದೆ. ರತನ್ ಟಾಟಾ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರಿಗೆ ಅಂತಿಮ ನಮನ ಸಲ್ಲಿಸಲು ಇರಿಸಲಾಗಿರುವ ಮುಂಬೈನ ಎನ್‌ಸಿಪಿಎ ಹುಲ್ಲುಹಾಸಿಗೆ ಎಲ್ಲ ಪಕ್ಷಗಳ ನಾಯಕರು ಆಗಮಿಸುತ್ತಿದ್ದಾರೆ.

ಸಂಪುಟ ಸಭೆಯಲ್ಲಿ ಸಂತಾಪ ಸೂಚಕ ನಿರ್ಣಯವನ್ನು ಅಂಗೀಕರಿಸಲಾಯಿತು ಎಂದು ಮುಖ್ಯಮಂತ್ರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ. ಕೈಗಾರಿಕೋದ್ಯಮಿ ದಿವಂಗತ ರತನ್ ಟಾಟಾಗೆ ಭಾರತ ರತ್ನ ನೀಡಬೇಕೆಂದು ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನೂ ಸಂಪುಟ ಅಂಗೀಕರಿಸಿತು. ಟಾಟಾ ಅವರಿಗೆ ದೇಶದ ಎರಡನೇ ಅತ್ಯುನ್ನತ ನಾಗರಿಕ ಗೌರವ ಪದ್ಮವಿಭೂಷಣ ಪ್ರಶಸ್ತಿಯನ್ನು ಈಗಾಗಲೇ ನೀಡಲಾಗಿದೆ.

ಇದನ್ನೂ ಓದಿ: Ratan Tata Funeral: ಪಾರ್ಸಿಯಲ್ಲ ಹಿಂದೂ ಸಂಪ್ರದಾಯದಂತೆ ರತನ್ ಟಾಟಾ ಅಂತ್ಯಸಂಸ್ಕಾರ ಏಕೆ?

ಸಮಾಜದ ಬೆಳವಣಿಗೆಗೆ ಉದ್ಯಮಶೀಲತೆ ಪರಿಣಾಮಕಾರಿ ಮಾರ್ಗವಾಗಿದೆ ಎಂದು ನಿರ್ಣಯವು ಹೇಳಿದೆ. ಹೊಸ ಉದ್ಯಮಗಳನ್ನು ಸ್ಥಾಪಿಸುವ ಮೂಲಕ ದೇಶವನ್ನು ಪ್ರಗತಿ ಮತ್ತು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ಯಬಹುದು. ಇದಕ್ಕೆ ದೇಶ ಪ್ರೇಮ ಮತ್ತು ಸಮಾಜದ ಉನ್ನತಿಗಾಗಿ ಪ್ರಾಮಾಣಿಕ ಭಾವನೆಗಳೂ ಬೇಕು ಎಂದು ಮಹಾರಾಷ್ಟ್ರ ಸರ್ಕಾರ ಹೇಳಿದೆ.

ದೇಶ, ಸಮಾಜಕ್ಕಾಗಿ ಬದ್ಧತೆ ಹೊಂದಿದ್ದ ದೂರದೃಷ್ಟಿಯ ನಾಯಕನನ್ನು ಕಳೆದುಕೊಂಡಿದ್ದೇವೆ. ಕೈಗಾರಿಕಾ ವಲಯ ಮತ್ತು ಸಮಾಜದ ಉನ್ನತಿಯಲ್ಲಿ ಟಾಟಾ ಅವರ ಪಾತ್ರ ಅಪ್ರತಿಮವಾಗಿತ್ತು. ಅವರು ಉನ್ನತ ನೈತಿಕತೆ, ಪಾರದರ್ಶಕ ಮತ್ತು ಸ್ವಚ್ಛ ವ್ಯಾಪಾರದ ಆಡಳಿತವನ್ನು ಶಿಸ್ತಿನಿಂದ ಅನುಸರಿಸುವ ಮೂಲಕ ಎಲ್ಲಾ ಸವಾಲುಗಳನ್ನು ನಿಭಾಯಿಸಿದರು ಎಂದು ಸರ್ಕಾರದ ಪ್ರಕಟಣೆ ಹೇಳಿದೆ.

ಇದನ್ನೂ ಓದಿ: TATA’s First Car: ರತನ್ ಟಾಟಾ ನೇತೃತ್ವದಲ್ಲಿ ಟಾಟಾ ಮೋಟಾರ್ಸ್​ನ ಮೊದಲ ಭಾರತೀಯ ಕಾರು ಯಾವುದು ಗೊತ್ತೇ?

ಟಾಟಾ ಗ್ರೂಪ್‌ನ ಮಾಜಿ ಅಧ್ಯಕ್ಷ ರತನ್ ಟಾಟಾ ಅವರು ಬುಧವಾರ ರಾತ್ರಿ 11.30ಕ್ಕೆ ಮುಂಬೈ ಆಸ್ಪತ್ರೆಯಲ್ಲಿ ನಿಧನರಾದರು. ಅಪ್ರತಿಮ ಕೈಗಾರಿಕೋದ್ಯಮಿಯಾದ ಅವರಿಗೆ ಇಂದು ಸಂಜೆ ಸರ್ಕಾರಿ ಅಂತ್ಯಕ್ರಿಯೆ ನಡೆಯಲಿದೆ. ಎರಡು ದಶಕಗಳಿಗೂ ಹೆಚ್ಚು ಕಾಲ ಉಪ್ಪಿನಿಂದ ಹಿಡಿದು ಸಾಫ್ಟ್‌ವೇರ್ ಗ್ರೂಪ್‌ವರೆಗೆ ಅಧ್ಯಕ್ಷರಾಗಿದ್ದ ರತನ್ ಟಾಟಾ ಅವರು ದಕ್ಷಿಣ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿನ್ನೆ ಕೊನೆಯುಸಿರೆಳೆದರು. ಪದ್ಮವಿಭೂಷಣ ಪುರಸ್ಕೃತರಾದ ರತನ್ ಟಾಟಾ ಅವರು ಸೋಮವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾದಲ್ಲಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಕರಣ ಈಗ ಹಕ್ಕು ಭಾಧ್ಯತಾ ಸಮಿತಿ ಮುಂದಿದೆ: ಸತೀಶ್ ಜಾರಕಿಹೊಳಿ
ಪ್ರಕರಣ ಈಗ ಹಕ್ಕು ಭಾಧ್ಯತಾ ಸಮಿತಿ ಮುಂದಿದೆ: ಸತೀಶ್ ಜಾರಕಿಹೊಳಿ
ಅಶ್ಲೀಲ ಪದಬಳಕೆ ಕಂಡುಬಂದರೆ ಅದನ್ನು ಎಥಿಕ್ಸ್ ಕಮಿಟಿಗೆ ರವಾನೆ: ಹೊರಟ್ಟಿ
ಅಶ್ಲೀಲ ಪದಬಳಕೆ ಕಂಡುಬಂದರೆ ಅದನ್ನು ಎಥಿಕ್ಸ್ ಕಮಿಟಿಗೆ ರವಾನೆ: ಹೊರಟ್ಟಿ
ಪ್ರಧಾನಿ ಮೋದಿಯನ್ನ ಭೇಟಿಯಾದ 101 ವರ್ಷದ ಐಎಫ್‌ಎಸ್ ಅಧಿಕಾರಿ
ಪ್ರಧಾನಿ ಮೋದಿಯನ್ನ ಭೇಟಿಯಾದ 101 ವರ್ಷದ ಐಎಫ್‌ಎಸ್ ಅಧಿಕಾರಿ
ವಕ್ಫ್ ಬೋರ್ಡ್ ಭೂಕಬಳಿಕೆ ಸಮರ್ಥವಾಗಿ ಸದನದಲ್ಲಿ ಮಂಡಿಸಿದ್ದೇವೆ: ಅಶೋಕ
ವಕ್ಫ್ ಬೋರ್ಡ್ ಭೂಕಬಳಿಕೆ ಸಮರ್ಥವಾಗಿ ಸದನದಲ್ಲಿ ಮಂಡಿಸಿದ್ದೇವೆ: ಅಶೋಕ
ಡಿವೈಡರ್​ಗೆ ಗುದ್ದಿ ಕಾರಿನ ಮೇಲೆ ಕಂಟೇನರ್​ ಬೀಳುತ್ತಿರುವ ಭಯಾನಕ ದೃಶ್ಯ!
ಡಿವೈಡರ್​ಗೆ ಗುದ್ದಿ ಕಾರಿನ ಮೇಲೆ ಕಂಟೇನರ್​ ಬೀಳುತ್ತಿರುವ ಭಯಾನಕ ದೃಶ್ಯ!
ಕಾನೂನು ಕೈಗೆತ್ತಿಕೊಳ್ಳಬಾರದು ಅಂತ ಸಹಿಸಿಕೊಂಡೆ: ಮೃಣಾಲ್ ಹೆಬ್ಬಾಳ್ಕರ್
ಕಾನೂನು ಕೈಗೆತ್ತಿಕೊಳ್ಳಬಾರದು ಅಂತ ಸಹಿಸಿಕೊಂಡೆ: ಮೃಣಾಲ್ ಹೆಬ್ಬಾಳ್ಕರ್
ಆರೋಪ ಮಾಡಲು ವಿಷಯಗಳಿಲ್ಲ, ಹಾಗಾಗೇ ಕೊಲೆಗಡುಕ ಅಂತಾರೆ: ಪಲ್ಲವಿ
ಆರೋಪ ಮಾಡಲು ವಿಷಯಗಳಿಲ್ಲ, ಹಾಗಾಗೇ ಕೊಲೆಗಡುಕ ಅಂತಾರೆ: ಪಲ್ಲವಿ
ಫಾರಂ ಹೌಸ್​ನಲ್ಲಿ ದರ್ಶನ್, ಹಲವು ಎಚ್ಚರಿಕಾ ಕ್ರಮ
ಫಾರಂ ಹೌಸ್​ನಲ್ಲಿ ದರ್ಶನ್, ಹಲವು ಎಚ್ಚರಿಕಾ ಕ್ರಮ
ಧ್ಯಾನವೆಂಬುದು ಮಾನಸಿಕ ನೈರ್ಮಲ್ಯ, ಏಕಾಗ್ರತೆಯ ಮೆಟ್ಟಿಲು: ರವಿಶಂಕರ್ ಗುರೂಜಿ
ಧ್ಯಾನವೆಂಬುದು ಮಾನಸಿಕ ನೈರ್ಮಲ್ಯ, ಏಕಾಗ್ರತೆಯ ಮೆಟ್ಟಿಲು: ರವಿಶಂಕರ್ ಗುರೂಜಿ
ಚೈತ್ರಾಗೆ ಕಿಚ್ಚ ಸುದೀಪ್ ಮಂಗಳಾರತಿ; ಮತ್ತೆ ಕಣ್ಣೀರು ಫಿಕ್ಸ್​
ಚೈತ್ರಾಗೆ ಕಿಚ್ಚ ಸುದೀಪ್ ಮಂಗಳಾರತಿ; ಮತ್ತೆ ಕಣ್ಣೀರು ಫಿಕ್ಸ್​