ಮುಂಬೈ: ಮಹಾರಾಷ್ಟ್ರ ಸರ್ಕಾರ ಇಂದು ನಡೆದ ಸಂಪುಟ ಸಭೆಯಲ್ಲಿ ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಹೆಸರನ್ನು ಭಾರತ ರತ್ನ ಪ್ರಶಸ್ತಿಗೆ ಪ್ರಸ್ತಾಪಿಸಲು ನಿರ್ಧರಿಸಿದೆ. ಇಂದು ರಾಜ್ಯ ಸಚಿವ ಸಂಪುಟದಲ್ಲಿ ಟಾಟಾ ಅವರಿಗೆ ಸಂತಾಪ ಸೂಚಿಸುವ ಪ್ರಸ್ತಾವನೆಯನ್ನೂ ಅಂಗೀಕರಿಸಲಾಗಿದೆ. ರತನ್ ಟಾಟಾ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರಿಗೆ ಅಂತಿಮ ನಮನ ಸಲ್ಲಿಸಲು ಇರಿಸಲಾಗಿರುವ ಮುಂಬೈನ ಎನ್‌ಸಿಪಿಎ ಹುಲ್ಲುಹಾಸಿಗೆ ಎಲ್ಲ ಪಕ್ಷಗಳ ನಾಯಕರು ಆಗಮಿಸುತ್ತಿದ್ದಾರೆ.
ಸಂಪುಟ ಸಭೆಯಲ್ಲಿ ಸಂತಾಪ ಸೂಚಕ ನಿರ್ಣಯವನ್ನು ಅಂಗೀಕರಿಸಲಾಯಿತು ಎಂದು ಮುಖ್ಯಮಂತ್ರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ. ಕೈಗಾರಿಕೋದ್ಯಮಿ ದಿವಂಗತ ರತನ್ ಟಾಟಾಗೆ ಭಾರತ ರತ್ನ ನೀಡಬೇಕೆಂದು ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನೂ ಸಂಪುಟ ಅಂಗೀಕರಿಸಿತು. ಟಾಟಾ ಅವರಿಗೆ ದೇಶದ ಎರಡನೇ ಅತ್ಯುನ್ನತ ನಾಗರಿಕ ಗೌರವ ಪದ್ಮವಿಭೂಷಣ ಪ್ರಶಸ್ತಿಯನ್ನು ಈಗಾಗಲೇ ನೀಡಲಾಗಿದೆ.
ಇದನ್ನೂ ಓದಿ: Ratan Tata Funeral: ಪಾರ್ಸಿಯಲ್ಲ ಹಿಂದೂ ಸಂಪ್ರದಾಯದಂತೆ ರತನ್ ಟಾಟಾ ಅಂತ್ಯಸಂಸ್ಕಾರ ಏಕೆ?
ಸಮಾಜದ ಬೆಳವಣಿಗೆಗೆ ಉದ್ಯಮಶೀಲತೆ ಪರಿಣಾಮಕಾರಿ ಮಾರ್ಗವಾಗಿದೆ ಎಂದು ನಿರ್ಣಯವು ಹೇಳಿದೆ. ಹೊಸ ಉದ್ಯಮಗಳನ್ನು ಸ್ಥಾಪಿಸುವ ಮೂಲಕ ದೇಶವನ್ನು ಪ್ರಗತಿ ಮತ್ತು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ಯಬಹುದು. ಇದಕ್ಕೆ ದೇಶ ಪ್ರೇಮ ಮತ್ತು ಸಮಾಜದ ಉನ್ನತಿಗಾಗಿ ಪ್ರಾಮಾಣಿಕ ಭಾವನೆಗಳೂ ಬೇಕು ಎಂದು ಮಹಾರಾಷ್ಟ್ರ ಸರ್ಕಾರ ಹೇಳಿದೆ.
In today’s meeting, the Maharashtra Cabinet has decided to propose industrialist Ratan Tata’s name for the Bharat Ratna award. A condolence proposal was also passed by Maharashtra Cabinet today. pic.twitter.com/RVKFD4SIjq
— ANI (@ANI) October 10, 2024
ದೇಶ, ಸಮಾಜಕ್ಕಾಗಿ ಬದ್ಧತೆ ಹೊಂದಿದ್ದ ದೂರದೃಷ್ಟಿಯ ನಾಯಕನನ್ನು ಕಳೆದುಕೊಂಡಿದ್ದೇವೆ. ಕೈಗಾರಿಕಾ ವಲಯ ಮತ್ತು ಸಮಾಜದ ಉನ್ನತಿಯಲ್ಲಿ ಟಾಟಾ ಅವರ ಪಾತ್ರ ಅಪ್ರತಿಮವಾಗಿತ್ತು. ಅವರು ಉನ್ನತ ನೈತಿಕತೆ, ಪಾರದರ್ಶಕ ಮತ್ತು ಸ್ವಚ್ಛ ವ್ಯಾಪಾರದ ಆಡಳಿತವನ್ನು ಶಿಸ್ತಿನಿಂದ ಅನುಸರಿಸುವ ಮೂಲಕ ಎಲ್ಲಾ ಸವಾಲುಗಳನ್ನು ನಿಭಾಯಿಸಿದರು ಎಂದು ಸರ್ಕಾರದ ಪ್ರಕಟಣೆ ಹೇಳಿದೆ.
अलविदा रतन टाटाजी…
आपले मार्गदर्शन, आपणासोबत अनुभवलेले जिव्हाळ्याचे क्षण आणि आपला साधेपणा कायम स्मरणात राहिल…#Maharashtra #Mumbai #RatanTata pic.twitter.com/eNu7QzXRAC
— Devendra Fadnavis (@Dev_Fadnavis) October 10, 2024
ಇದನ್ನೂ ಓದಿ: TATA’s First Car: ರತನ್ ಟಾಟಾ ನೇತೃತ್ವದಲ್ಲಿ ಟಾಟಾ ಮೋಟಾರ್ಸ್ನ ಮೊದಲ ಭಾರತೀಯ ಕಾರು ಯಾವುದು ಗೊತ್ತೇ?
ಟಾಟಾ ಗ್ರೂಪ್‌ನ ಮಾಜಿ ಅಧ್ಯಕ್ಷ ರತನ್ ಟಾಟಾ ಅವರು ಬುಧವಾರ ರಾತ್ರಿ 11.30ಕ್ಕೆ ಮುಂಬೈ ಆಸ್ಪತ್ರೆಯಲ್ಲಿ ನಿಧನರಾದರು. ಅಪ್ರತಿಮ ಕೈಗಾರಿಕೋದ್ಯಮಿಯಾದ ಅವರಿಗೆ ಇಂದು ಸಂಜೆ ಸರ್ಕಾರಿ ಅಂತ್ಯಕ್ರಿಯೆ ನಡೆಯಲಿದೆ. ಎರಡು ದಶಕಗಳಿಗೂ ಹೆಚ್ಚು ಕಾಲ ಉಪ್ಪಿನಿಂದ ಹಿಡಿದು ಸಾಫ್ಟ್‌ವೇರ್ ಗ್ರೂಪ್‌ವರೆಗೆ ಅಧ್ಯಕ್ಷರಾಗಿದ್ದ ರತನ್ ಟಾಟಾ ಅವರು ದಕ್ಷಿಣ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿನ್ನೆ ಕೊನೆಯುಸಿರೆಳೆದರು. ಪದ್ಮವಿಭೂಷಣ ಪುರಸ್ಕೃತರಾದ ರತನ್ ಟಾಟಾ ಅವರು ಸೋಮವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾದಲ್ಲಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ