ಕೊವಿಡ್ ನಿರ್ಬಂಧಗಳನ್ನು ಪರಿಷ್ಕರಿಸಿದ ಮಹಾರಾಷ್ಟ್ರ; ಶೇ 50 ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿವೆ ಬ್ಯೂಟಿ ಸಲೂನ್‌, ಜಿಮ್‌ಗಳು

ಈಜುಕೊಳಗಳು, ಸ್ಪಾಗಳು, ಜಿಮ್‌ಗಳು, ಬ್ಯೂಟಿ ಸಲೂನ್‌ಗಳು ಮತ್ತು ವೆಲ್ ನೆಸ್ ಕೇಂದ್ರಗಳನ್ನು ಮುಂದಿನ ಆದೇಶದವರೆಗೆ ಮುಚ್ಚಲಾಗುವುದು ಎಂದು ಆದೇಶದಲ್ಲಿ ಆರಂಭದಲ್ಲಿ ತಿಳಿಸಲಾಗಿತ್ತು. ಆದಾಗ್ಯೂ, ಈಗ, ಜಿಮ್‌ಗಳು ಮತ್ತು ಕೂದಲು ಕತ್ತರಿಸುವ ಸಲೂನ್‌ಗಳು ಶೇಕಡಾ 50 ರಷ್ಟು ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ.

ಕೊವಿಡ್ ನಿರ್ಬಂಧಗಳನ್ನು ಪರಿಷ್ಕರಿಸಿದ ಮಹಾರಾಷ್ಟ್ರ; ಶೇ 50 ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿವೆ ಬ್ಯೂಟಿ ಸಲೂನ್‌, ಜಿಮ್‌ಗಳು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jan 09, 2022 | 4:18 PM

ಮಹಾರಾಷ್ಟ್ರ: ಜನವರಿ 10 ಸೋಮವಾರದಿಂದ ರಾಜ್ಯದಲ್ಲಿ ವಿಧಿಸಲಾಗುವ ನಿರ್ಬಂಧಗಳ ಹಿಂದಿನ ಆದೇಶವನ್ನು ಮಹಾರಾಷ್ಟ್ರ (maharashtra)  ಸರ್ಕಾರ ಭಾನುವಾರ ಪರಿಷ್ಕರಿಸಿದೆ. ಇದರ ಪ್ರಕಾರ ಬ್ಯೂಟಿ ಸಲೂನ್‌ಗಳು ಮತ್ತು ಜಿಮ್‌ಗಳು ಶೇ 50 ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಟ್ಟಿದೆ. ಶನಿವಾರದ ಆದೇಶದಲ್ಲಿ ಎಲ್ಲಾ ಬ್ಯೂಟಿ ಸಲೂನ್‌ಗಳು, ಸ್ಪಾಗಳು, ಜಿಮ್‌ಗಳನ್ನು ಮುಚ್ಚುವಂತೆ ಸರ್ಕಾರ ಆದೇಶಿಸಿದೆ. ಕೂದಲು ಕತ್ತರಿಸುವ ಸಲೂನ್‌ಗಳಿಗೆ ಮಾತ್ರ ಅರ್ಧ ಸಾಮರ್ಥ್ಯದಲ್ಲಿ ವ್ಯಾಪಾರ ನಡೆಸಲು ಅನುಮತಿ ನೀಡಲಾಯಿತು. ಒಂದು ದಿನದ ನಂತರ ಸರ್ಕಾರವು ಆದೇಶವನ್ನು ಪರಿಷ್ಕರಿಸಿದ್ದ ನಿರ್ಬಂಧಿತ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲು ಅನುಮತಿಸಲಾದ ಸಂಸ್ಥೆಗಳ ವರ್ಗದ ಅಡಿಯಲ್ಲಿ ಬ್ಯೂಟಿ ಸಲೂನ್‌ಗಳು ಮತ್ತು ಜಿಮ್‌ಗಳನ್ನು ಸೇರಿಸಿದೆ. ಜಿಮ್‌ಗಳು ಮತ್ತು ಬ್ಯೂಟಿ ಸಲೂನ್‌ಗಳ ಒಳಗೆ ಸಂಪೂರ್ಣವಾಗಿ ಲಸಿಕೆ ಹಾಕಿದವರಿಗೆ ಮಾತ್ರ ಅಮತಿಸಲಾಗುವುದು ಎಂದು ಪರಿಷ್ಕೃತ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.  ಶನಿವಾರ ಸರ್ಕಾರವು ಹೊಸ ಮಾರ್ಗಸೂಚಿಗಳೊಂದಿಗೆ ಪ್ರಕಟಿಸಿದ್ದು, ಜನರ ಸಂಚಾರವನ್ನು ನಿರ್ಬಂಧಿಸಿತ್ತು .ಅದೇ ವೇಳೆ ಕೊವಿಡ್-ಸೂಕ್ತ ನಡವಳಿಕೆಯನ್ನು ಉಲ್ಲಂಘಿಸಿದ್ದಕ್ಕಾಗಿ ದಂಡವನ್ನು ಘೋಷಿಸಿತು. ಹೊಸ ಆದೇಶದ ಪ್ರಕಾರ  ಬೆಳಿಗ್ಗೆ 5 ರಿಂದ ರಾತ್ರಿ 11 ರವರೆಗೆ ಐದು ಅಥವಾ ಅದಕ್ಕಿಂತ ಹೆಚ್ಚಿನ ಗುಂಪುಗಳಲ್ಲಿ ಜನರ ಚಲನೆಯನ್ನು ಅನುಮತಿಸಲಾಗುವುದಿಲ್ಲ. ಅಲ್ಲದೆ, ಅಗತ್ಯ ಉದ್ದೇಶಗಳನ್ನು ಹೊರತುಪಡಿಸಿ ರಾತ್ರಿ 11 ರಿಂದ ಸಂಜೆ 5 ರವರೆಗೆ ಜನರ ಸಂಚಾರಕ್ಕೆ ಅವಕಾಶವಿರುವುದಿಲ್ಲ.

ಈಜುಕೊಳಗಳು, ಸ್ಪಾಗಳು, ಜಿಮ್‌ಗಳು, ಬ್ಯೂಟಿ ಸಲೂನ್‌ಗಳು ಮತ್ತು ವೆಲ್ ನೆಸ್ ಕೇಂದ್ರಗಳನ್ನು ಮುಂದಿನ ಆದೇಶದವರೆಗೆ ಮುಚ್ಚಲಾಗುವುದು ಎಂದು ಆದೇಶದಲ್ಲಿ ಆರಂಭದಲ್ಲಿ ತಿಳಿಸಲಾಗಿತ್ತು. ಆದಾಗ್ಯೂ, ಈಗ, ಜಿಮ್‌ಗಳು ಮತ್ತು ಕೂದಲು ಕತ್ತರಿಸುವ ಸಲೂನ್‌ಗಳು ಶೇಕಡಾ 50 ರಷ್ಟು ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ.

ಮನರಂಜನಾ ಉದ್ಯಾನವನಗಳು, ಮೃಗಾಲಯಗಳು, ವಸ್ತುಸಂಗ್ರಹಾಲಯಗಳು ಮುಚ್ಚಲ್ಪಡುತ್ತವೆ. ಶಾಪಿಂಗ್ ಮಾಲ್‌ಗಳು ಮತ್ತು ಮಾರುಕಟ್ಟೆ ಸಂಕೀರ್ಣಗಳು ಕೊವಿಡ್ ಪ್ರೋಟೋಕಾಲ್‌ಗಳ ಅನುಸರಣೆಯೊಂದಿಗೆ ಶೇಕಡಾ 50 ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುತ್ತವೆ. ಲಸಿಕೆ ಹಾಕಿದ ವ್ಯಕ್ತಿಗಳಿಗೆ ಮಾತ್ರ ಪ್ರವೇಶ  ಅನುಮತಿಸಲಾಗುವುದು.

ಸಿನಿಮಾ ಹಾಲ್‌ಗಳು, ಥಿಯೇಟರ್‌ಗಳು, ರೆಸ್ಟೋರೆಂಟ್‌ಗಳು ಶೇಕಡಾ 50 ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಸುದೀರ್ಘ ಸಭೆಗಳ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಹೊಸ ಆದೇಶವನ್ನು ಅನುಮೋದಿಸಿದ್ದಾರೆ.

ಮದುವೆಗಳಲ್ಲಿ ಗರಿಷ್ಠ 50, ಅಂತ್ಯಕ್ರಿಯೆ ಮತ್ತು ಅಂತಿಮ ಸಂಸ್ಕಾರದಲ್ಲಿ 20, ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಸಭೆಗಳಲ್ಲಿ 50 ಜನರಿಗೆ ಪಾಲ್ಗೊಳ್ಳುವ  ಅವಕಾಶವಿದೆ. ಸಾರ್ವಜನಿಕ ಸಾರಿಗೆಯಲ್ಲಿ ಸಂಪೂರ್ಣ ಲಸಿಕೆ ಹಾಕಿದ ವ್ಯಕ್ತಿಗಳನ್ನು ಮಾತ್ರ ಅನುಮತಿಸಲಾಗುವುದು ಎಂದು ಮಾರ್ಗಸೂಚಿಗಳು ತಿಳಿಸಿವೆ.

ದೇಶೀಯ ಪ್ರಯಾಣಿಕರಿಗೆ, ಎರಡು ಬಾರಿ ವ್ಯಾಕ್ಸಿನೇಷನ್ ಅಥವಾ ಕಡ್ಡಾಯ ಋಣಾತ್ಮಕ ಆರ್ ಟಿಪಿಸಿಆರ್ ಪರೀಕ್ಷಾ ವರದಿಯ ಅಗತ್ಯವಿದೆ.

ಈಗಿನಂತೆಸ್ಥಳೀಯ ರೈಲುಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ ಮತ್ತು ಎಲ್ಲಾ ಸಾರ್ವಜನಿಕ ಸಾರಿಗೆಯು ಎಂದಿನಂತೆ ಕಾರ್ಯನಿರ್ವಹಿಸುತ್ತದೆ ಆದರೆ ಸಂಪೂರ್ಣವಾಗಿ ಲಸಿಕೆ ಪಡೆದ ಜನರಿಗೆ ಮಾತ್ರ ಅನುಮತಿಸಲಾಗುತ್ತದೆ.

ಏತನ್ಮಧ್ಯೆ, ಕೊವಿಡ್-19 ಪ್ರಕರಣಗಳ ಉಲ್ಬಣದ ಮಧ್ಯೆ, ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್ ಅವರು ನಗರದಲ್ಲಿ ವಾರಾಂತ್ಯದ ಲಾಕ್‌ಡೌನ್ ಅನ್ನು ಸದ್ಯಕ್ಕೆ ವಿಧಿಸಲಾಗುವುದಿಲ್ಲ ಆದರೆ ಕಟ್ಟುನಿಟ್ಟಾದ ನಿರ್ಬಂಧಗಳು, ಜನರು ಕೊವಿಡ್ ಸೂಕ್ತ ನಡವಳಿಕೆಯನ್ನು ಅನುಸರಿಸದಿದ್ದರೆ  ಎಸ್​​ಒಪಿಗಳನ್ನು ತರಬಹುದು ಎಂದು ಹೇಳಿದರು.

ಇದನ್ನೂ ಓದಿ:  ದೆಹಲಿಯಲ್ಲಿ ಲಾಕ್​​ಡೌನ್ ಇಲ್ಲ, ಆದರೆ ಎಚ್ಚರಿಕೆ ವಹಿಸಿ: ಅರವಿಂದ ಕೇಜ್ರಿವಾಲ್

Published On - 4:14 pm, Sun, 9 January 22

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ