ಮಹಾರಾಷ್ಟ್ರದಲ್ಲಿ ಜೂನ್ 7ರಿಂದ ಲಾಕ್‌ಡೌನ್ ಸಡಿಲಿಕೆ; ಸೋಂಕಿತರ ಸಂಖ್ಯೆ ಮತ್ತು ಆಕ್ಸಿಜನ್ ಬೆಡ್ ಲಭ್ಯತೆ ಮೇರೆಗೆ ನಿರ್ಧಾರ

ಲಾಕ್‌ಡೌನ್ ಸಡಿಲಿಕೆ ಬಗ್ಗೆ ಮಹಾರಾಷ್ಟ್ರ ಸರ್ಕಾರ ಮಾಹಿತಿ ನೀಡಿದ್ದು, ಮಹಾರಾಷ್ಟ್ರದಲ್ಲಿ ಕೊವಿಡ್ ಪಾಸಿಟಿವಿಟಿ ದರ ಮತ್ತು ಆಕ್ಸಿಜನ್ ಬೆಡ್ ಲಭ್ಯತೆ ಮೇರೆಗೆ ಲಾಕ್‌ಡೌನ್ ಸಡಿಲಿಕೆ ಮಾಡಲಾಗುವುದು ಎಂದು ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಜೂನ್ 7ರಿಂದ ಲಾಕ್‌ಡೌನ್ ಸಡಿಲಿಕೆ; ಸೋಂಕಿತರ ಸಂಖ್ಯೆ ಮತ್ತು ಆಕ್ಸಿಜನ್ ಬೆಡ್ ಲಭ್ಯತೆ ಮೇರೆಗೆ ನಿರ್ಧಾರ
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on:Jun 05, 2021 | 8:38 AM

ಮುಂಬೈ: ಕೊರೊನಾ ಎರಡನೇ ಅಲೆಯ ತೀವ್ರತೆ ಹೆಚ್ಚಾಗಿದ್ದು, ಇಡೀ ದೇಶವೆ ಆತಂಕಕ್ಕೆ ಗುರಿಯಾಗಿತ್ತು. ಅದರಲ್ಲೂ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚಾಗಿತ್ತು. ಹೀಗಾಗಿ ಹಲವು ಕಠಿಣ ನಿರ್ಬಂಧಗಳೊಂದಿಗೆ ಮಹಾರಾಷ್ಟ್ರದಲ್ಲಿ ಏಪ್ರಿಲ್ 14 ರಿಂದ ಲಾಕ್​ಡೌನ್ ಜಾರಿಗೆ ತರಲಾಗಿತ್ತು ಮತ್ತು ಆ ಮೂಲಕ ರಾಜ್ಯದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ‘ಬ್ರೇಕ್​ ದ ಚೈನ್ ಅಭಿಯಾನ’ ಅರಂಭವಾಗಲಿದೆ ಎಂದು ಘೋಷಿಸಿದರು. ಆದರೆ ಈಗ ಪರಿಸ್ಥಿತಿ ಸುಧಾರಿಸಿದೆ. ಮಹಾರಾಷ್ಟ್ರದಲ್ಲಿ ಸೋಂಕು ಮತ್ತು ಸಾವಿನ ಪ್ರಮಾಣ ಇಳಿಮುಖಗೊಂಡು ಚೇತರಿಸಿಕೊಳ್ಳುತ್ತಿರುವವರ ಸಂಖ್ಯೆ ಪ್ರತಿದಿನ ಹೆಚ್ಚುತ್ತಿದೆ. ಹೀಗಾಗಿ ಮಹಾರಾಷ್ಟ್ರ ಸರ್ಕಾರ ಜೂನ್ 7ರಿಂದ ಲಾಕ್​ಡೌನ್ ಸಡಿಲಿಸಲು ನಿರ್ಧಾರ ತೆಗೆದುಕೊಂಡಿದೆ.

ಲಾಕ್‌ಡೌನ್ ಸಡಿಲಿಕೆ ಬಗ್ಗೆ ಮಹಾರಾಷ್ಟ್ರ ಸರ್ಕಾರ ಮಾಹಿತಿ ನೀಡಿದ್ದು, ಮಹಾರಾಷ್ಟ್ರದಲ್ಲಿ ಕೊವಿಡ್ ಪಾಸಿಟಿವಿಟಿ ದರ ಮತ್ತು ಆಕ್ಸಿಜನ್ ಬೆಡ್ ಲಭ್ಯತೆ ಮೇರೆಗೆ ಲಾಕ್‌ಡೌನ್ ಸಡಿಲಿಕೆ ಮಾಡಲಾಗುವುದು ಎಂದು ತಿಳಿಸಿದೆ.

ಏಪ್ರಿಲ್ ಮಧ್ಯಭಾಗದಿಂದ ಆರಂಭವಾದ ಲಾಕ್​ಡೌನ್​ ಅನ್ನು ಸಡಿಲಿಸುವ ಗೋಜಿಗೆ ಠಾಕ್ರೆ ಸರ್ಕಾರ ಹೋಗದೆ ಅದನ್ನು ಜೂನ್ 15ರವರೆಗೆ ವಿಸ್ತರಿಸಿತ್ತು. ಸದ್ಯ ಪ್ರಕರಣಗಳು ಹೆಚ್ಚಿರುವ ಕಡೆಗಳಲ್ಲಿ ಮತ್ತಷ್ಟು ಬಿಗಿಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಮತ್ತು ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿರುವ ಪ್ರದೇಶಗಳಲ್ಲಿ ಹಂತ ಹಂತವಾಗಿ ಲಾಕ್​ಡೌನ್ ಸಡಿಲಿಸಲಾಗವುದು ಎಂದು ಸರ್ಕಾರ ಹೊರಡಿಸಿರುವ ಪ್ರಕಟಣೆ ಹೇಳುತ್ತದೆ.

ಏಪ್ರಿಲ್ 14 ರಿಂದ ಆರಂಭವಾದ ಲಾಕ್​ಡೌನ್ ಏಪ್ರಿಲ್ 14 ರಿಂದ 15 ದಿನಗಳವರೆಗೆ ಸಿಆರ್​ಪಿಸಿ 144ರ ಕಲಂ ಅನ್ವಯ ಜನರ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗುವುದು. ಅನಗತ್ಯವಾಗಿ ಯಾರೂ ಸಹ ಮನೆಯಿಂದ ಹೊರಬರುವಂತಿಲ್ಲ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇತರೆಲ್ಲ ಸೇವೆಗಳು ಬಂದ್ ಆಗಲಿವೆ. ಮಹಾರಾಷ್ಟ್ರದಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ ಜಾರಿಯಾಗಲಿದೆ. ಸಾರಿಗೆ ಸೇವೆಗಳು ಎಂದಿನಂತೆ ಇರಲಿವೆ. ಇ ಕಾಮರ್ಸ್ ಸೇವೆ, ಪೆಟ್ರೋಲ್‌ ಬಂಕ್‌ಗಳು ತೆರೆದಿರುತ್ತವೆ’ ಎಂದು ಉದ್ಧವ್ ಠಾಕ್ರೆ ತಿಳಿಸಿದ್ದರು.

‘ಹೋಟೆಲ್, ರೆಸ್ಟೋರೆಂಟ್​ಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ. ಹೋಟೆಲ್, ರೆಸ್ಟೋರೆಂಟ್​ಗಳಲ್ಲಿ ಪಾರ್ಸೆಲ್​ಗೆ ಮಾತ್ರ ಅವಕಾಶ ಇರಲಿದೆ. ಮಹಾರಾಷ್ಟ್ರದಲ್ಲಿ ಪಡಿತರ ಚೀಟಿ ಇರುವವರಿಗೆ ಉಚಿತ ರೇಷನ್ ನೀಡಲು ಸರ್ಕಾರ ನಿರ್ಧರಿಸಲಿದೆ. ಮುಂದಿನ 3 ತಿಂಗಳವರೆಗೆ ಉಚಿತ ರೇಷನ್ ನೀಡುತ್ತೇವೆ. ಆದಿವಾಸಿಗಳಿಗೆ ₹ 2 ಸಾವಿರ, ಕಾರ್ಮಿಕರಿಗೆ ₹ 1500 ಧನಸಹಾಯ ನೀಡಲಾಗುವುದು’ ಎಂದು ಹೇಳಿದ್ದರು.

ಆದರೆ ಲಾಕ್​ಡೌನ್ ಜಾರಿಯಿಂದಾಗಿ ಈಗ ಸೋಂಕಿತರ ಸಂಖ್ಯೆಯಲ್ಲಿ ನಿಧಾನಗತಿಯ ಇಳಿಕೆ ಕಂಡು ಬಂದಿದ್ದು, ಸಡಿಲಿಕೆ ಬಗ್ಗೆ ಮಹಾರಾಷ್ಟ್ರ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ.

ಇದನ್ನೂ ಓದಿ:

ಅಹಮದ್​ನಗರದ 8,000 ಮಕ್ಕಳಲ್ಲಿ ಕೊವಿಡ್-19 ಸೋಂಕು, ಮಹಾರಾಷ್ಟ್ರಕ್ಕೆ ಈಗಲೇ ಕೊರನಾ ಸೋಂಕಿನ 3ನೇ ಅಲೆ ಅಪ್ಪಳಿಸಿದೆಯೇ?

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ತೀವ್ರ; ಕಠಿಣ ನಿರ್ಬಂಧ ಘೋಷಿಸಿದ ಸಿಎಂ ಉದ್ಧವ್ ಠಾಕ್ರೆ

Published On - 8:34 am, Sat, 5 June 21