ಲಾಕ್​ಡೌನ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ದಾಖಲಾಗಿದ್ದ ಎಲ್ಲ ಕೇಸುಗಳನ್ನೂ ಹಿಂಪಡೆಯಲು ಮಹಾರಾಷ್ಟ್ರ ಸರ್ಕಾರ ನಿರ್ಧಾರ

ಕಟ್ಟುನಿಟ್ಟಾದ ಕರ್ಫ್ಯೂ ಸಮಯದಲ್ಲಿ ರಾತ್ರಿಯಲ್ಲಿ ತಿರುಗಾಡುವುದು, ನಿಷೇಧಾಜ್ಞೆಗಳನ್ನು ಉಲ್ಲಂಘಿಸಿ ಗುಂಪುಗಳಲ್ಲಿ ಕಾಣಿಸಿಕೊಳ್ಳುವುದು ಮುಂತಾದ ನಿಯಮಗಳನ್ನು ಉಲ್ಲಂಘಿಸಿದವರ ಮೇಲೆ ಕೇಸ್ ದಾಖಲಾಗಿತ್ತು.

ಲಾಕ್​ಡೌನ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ದಾಖಲಾಗಿದ್ದ ಎಲ್ಲ ಕೇಸುಗಳನ್ನೂ ಹಿಂಪಡೆಯಲು ಮಹಾರಾಷ್ಟ್ರ ಸರ್ಕಾರ ನಿರ್ಧಾರ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Mar 29, 2022 | 6:17 PM

ಮುಂಬೈ: ಕಳೆದ 2 ವರ್ಷಗಳಿಂದ ದೇಶದಲ್ಲಿ ಕೊವಿಡ್ -19 ಕೇಸುಗಳು (Covid-19 Cases) ಹೆಚ್ಚಾಗಿದ್ದುದರಿಂದ ಅನೇಕ ರಾಜ್ಯಗಳಲ್ಲಿ ಲಾಕ್​ಡೌನ್ (Lockdown Rules) ನಿಯಮಗಳನ್ನು ಜಾರಿಗೊಳಿಸಲಾಗಿತ್ತು. ಇದೀಗ ಕಳೆದ ಎರಡು ವರ್ಷಗಳಲ್ಲಿ ಲಾಕ್‌ಡೌನ್ ಆದೇಶಗಳನ್ನು ಉಲ್ಲಂಘಿಸಿದ್ದಕ್ಕಾಗಿ ವಿದ್ಯಾರ್ಥಿಗಳು ಮತ್ತು ಸಾಮಾನ್ಯ ನಾಗರಿಕರ ವಿರುದ್ಧ ದಾಖಲಿಸಲಾದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲು ಮಹಾರಾಷ್ಟ್ರ ಸರ್ಕಾರ (Maharashtra Government) ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇದರಿಂದ ಕೊರೊನಾ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ಕೇಸ್ ದಾಖಲಾಗಿದ್ದ ಎಲ್ಲ ನಾಗರಿಕರೂ ನಿಟ್ಟುಸಿರು ಬಿಡುವಂತಾಗಿದೆ. ಅನಗತ್ಯವಾಗಿ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದ ಸಾವಿರಾರು ಮಂದಿಗೆ ಮಹಾರಾಷ್ಟ್ರ ಸರ್ಕಾರದ ಈ ನಿರ್ಧಾರ ಸಮಾಧಾನ ತಂದಿದೆ.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 188ರ ಅಡಿಯಲ್ಲಿ ಪ್ರಕರಣಗಳನ್ನು ಹೆಚ್ಚಾಗಿ ದಾಖಲಿಸಲಾಗಿದೆ ಮತ್ತು ಪ್ರಸ್ತಾವನೆಯನ್ನು ಅನುಮೋದನೆಗಾಗಿ ರಾಜ್ಯ ಸಚಿವ ಸಂಪುಟದ ಮುಂದೆ ಇಡಲಾಗುವುದು ಎಂದು ಮಹಾರಾಷ್ಟ್ರದ ಗೃಹ ಸಚಿವ ದಿಲೀಪ್ ವಾಲ್ಸೆ-ಪಾಟೀಲ್ ಹೇಳಿದ್ದಾರೆ. ಸಚಿವ ಸಂಪುಟದ ಒಪ್ಪಿಗೆಯ ನಂತರ, ರಾಜ್ಯಾದ್ಯಂತ ದಾಖಲಾಗಿರುವ ಅಂತಹ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲಾಗುತ್ತದೆ ಎಂದು ವಾಲ್ಸೆ-ಪಾಟೀಲ ತಿಳಿಸಿದ್ದಾರೆ.

ಸಾಂಕ್ರಾಮಿಕ ಮತ್ತು ಲಾಕ್‌ಡೌನ್‌ಗಳ ಸಮಯದಲ್ಲಿ, ವಿಶೇಷವಾಗಿ 2020-2021ರ ಅವಧಿಯಲ್ಲಿ ಮೊದಲ ಮತ್ತು ಎರಡನೆಯ ಕೋವಿಡ್ -19 ಅಲೆಗಳ ಸಮಯದಲ್ಲಿ, ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ ಆರೋಪಕ್ಕಾಗಿ ಮಹಾರಾಷ್ಟ್ರದಲ್ಲಿ ವಿದ್ಯಾರ್ಥಿಗಳು, ಯುವಕರು ಮತ್ತು ಸಾಮಾನ್ಯ ನಾಗರಿಕರು, ಕೆಲವು ಕುಟುಂಬಗಳ ವಿರುದ್ಧ ಸಾವಿರಾರು ಪ್ರಕರಣಗಳನ್ನು ದಾಖಲಿಸಲಾಗಿದೆ.

ಕಟ್ಟುನಿಟ್ಟಾದ ಕರ್ಫ್ಯೂ ಸಮಯದಲ್ಲಿ ರಾತ್ರಿಯಲ್ಲಿ ತಿರುಗಾಡುವುದು, ನಿಷೇಧಾಜ್ಞೆಗಳನ್ನು ಉಲ್ಲಂಘಿಸಿ ಗುಂಪುಗಳಲ್ಲಿ ಕಾಣಿಸಿಕೊಳ್ಳುವುದು, ಲಾಕ್‌ಡೌನ್ ಸಮಯದಲ್ಲಿ ಪ್ರವೇಶ ನಿಷೇಧಿಸಲಾದ ಬೀಚ್‌ಗಳಂತಹ ಸಾರ್ವಜನಿಕ ಸ್ಥಳಗಳಿಗೆ ಜನರು ಹೋಗುವುದು, ನಿಯಮಗಳನ್ನು ಉಲ್ಲಂಘಿಸಿದ ಕುಟುಂಬಗಳ ಮೇಲೆ ಕೇಸ್ ದಾಖಲಾಗಿತ್ತು. ಅಂತಹ ಉಲ್ಲಂಘನೆಗಳ ನಿಖರವಾದ ಸಂಖ್ಯೆಯು ತಕ್ಷಣವೇ ಲಭ್ಯವಿಲ್ಲ ಮತ್ತು ವಿವಿಧ ಅಧಿಕಾರಿಗಳಿಂದ ಕಂಪೈಲ್ ಮಾಡಲಾಗುತ್ತಿದೆಯಾದರೂ, IPC ಸೆಕ್ಷನ್ 188ರ ಅಡಿಯಲ್ಲಿ ಹೆಚ್ಚಿನ ಪ್ರಕರಣಗಳನ್ನು ಹಿಂತೆಗೆದುಕೊಳ್ಳಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮುಂಬೈನಲ್ಲಿ​ ಪೊಲೀಸ್ ವಶಕ್ಕೆ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್​​ಗೆ ಮಾರ್ಚ್ 21ರವರೆಗೆ ನ್ಯಾಯಾಂಗ ಬಂಧನ

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?