‘ಮಹಾ’ಅಚ್ಚರಿ! CM ಆಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ
ಮುಂಬೈ: ಮಹಾರಾಷ್ಟ್ರದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಾಗಿದ್ದು, ಬಿಜೆಪಿ-ಎನ್‌ಸಿಪಿ ಸೇರಿ ಸರ್ಕಾರ ರಚನೆ ಮಾಡಿವೆ. ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಡಿಸಿಎಂ ಆಗಿ ಎನ್‌ಸಿಪಿ ಪಕ್ಷದ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಹಿಂದೆ 3 ಪಕ್ಷಗಳು ಸೇರಿ ಸರ್ಕಾರ ರಚನೆಗೆ ನಿರ್ಧರಿಸಿದ್ದವು. ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳು ಸರ್ಕಾರ ರಚನೆಗೆ ನಿರ್ಧರಿಸಿದ್ದವು. ಆದ್ರೆ ಅಚ್ಚರಿ ಬೆಳವಣಿಗೆಯಲ್ಲಿ ಬಿಜೆಪಿ, ಎನ್‌ಸಿಪಿ ಸರ್ಕಾರ ರಚನೆ ಮಾಡಿವೆ. ವಿಡಿಯೋ ನೋಡಿ: ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ […]
ಮುಂಬೈ: ಮಹಾರಾಷ್ಟ್ರದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಾಗಿದ್ದು, ಬಿಜೆಪಿ-ಎನ್‌ಸಿಪಿ ಸೇರಿ ಸರ್ಕಾರ ರಚನೆ ಮಾಡಿವೆ. ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಡಿಸಿಎಂ ಆಗಿ ಎನ್‌ಸಿಪಿ ಪಕ್ಷದ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಈ ಹಿಂದೆ 3 ಪಕ್ಷಗಳು ಸೇರಿ ಸರ್ಕಾರ ರಚನೆಗೆ ನಿರ್ಧರಿಸಿದ್ದವು. ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳು ಸರ್ಕಾರ ರಚನೆಗೆ ನಿರ್ಧರಿಸಿದ್ದವು. ಆದ್ರೆ ಅಚ್ಚರಿ ಬೆಳವಣಿಗೆಯಲ್ಲಿ ಬಿಜೆಪಿ, ಎನ್‌ಸಿಪಿ ಸರ್ಕಾರ ರಚನೆ ಮಾಡಿವೆ.
ವಿಡಿಯೋ ನೋಡಿ: ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕಾರ
ಶಿವಸೇನೆಗೆ ಮಾಸ್ಟರ್ ಸ್ಟ್ರೋಕ್ ಕೊಟ್ಟ ಬಿಜೆಪಿ! ಕಾಂಗ್ರೆಸ್, ಎನ್‌ಸಿಪಿ ಜೊತೆ ಮೈತ್ರಿಗೆ ಶಿವಸೇನೆ ಮುಂದಾಗಿತ್ತು. ಈ ಮೂರೂ ಪಕ್ಷಗಳ ನಾಯಕರು ನಿರಂತರವಾಗಿ ಮಾತುಕತೆ ನಡೆಸುತ್ತಿದ್ದರು. ಸಚಿವ ಸ್ಥಾನದ ಹಂಚಿಕೆ ಬಗ್ಗೆಯೂ ಮಾತುಕತೆ ನಡೆದಿತ್ತು. ಶಿವಸೇನೆಯ ಉದ್ಧವ್ ಠಾಕ್ರೆಗೆ ಈ ಎರಡೂ ಪಕ್ಷಗಳು ಸಿಎಂ ಸ್ಥಾನ ಬಿಟ್ಟುಕೊಟ್ಟಿತ್ತು.
ಸರ್ಕಾರ ರಚನೆಗೂ ಮುನ್ನವೇ ರಾಷ್ಟ್ರಪತಿ ಆಡಳಿತ ವಾಪಸ್! ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಎನ್‌ಸಿಪಿ ಸೇರಿ ಸರ್ಕಾರ ರಚನೆ ಮಾಡಿವೆ. ಆದ್ರೆ ಸರ್ಕಾರ ರಚನೆಗೂ ಮುನ್ನವೇ ರಾಷ್ಟ್ರಪತಿ ಆಡಳಿತವನ್ನು ಹಿಂಪಡೆಯಲಾಗಿದೆ. ಇಂದು ಮುಂಜಾನೆ 5.47ಕ್ಕೆ ರಾಷ್ಟ್ರಪತಿ ಆಡಳಿತವನ್ನು ವಾಪಸ್ ಪಡೆದಿದ್ದಾರೆ. ಮಹಾರಾಷ್ಟ್ರದಲ್ಲಿ ನವೆಂಬರ್ 12ರಿಂದ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿತ್ತು.
Published On - 8:23 am, Sat, 23 November 19