‘ಮಹಾ’ಅಚ್ಚರಿ! CM ಆಗಿ ದೇವೇಂದ್ರ ಫಡ್ನವಿಸ್‌ ಪ್ರಮಾಣ ವಚನ

ಮುಂಬೈ: ಮಹಾರಾಷ್ಟ್ರದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಾಗಿದ್ದು, ಬಿಜೆಪಿ-ಎನ್‌ಸಿಪಿ ಸೇರಿ ಸರ್ಕಾರ ರಚನೆ ಮಾಡಿವೆ. ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್‌ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಡಿಸಿಎಂ ಆಗಿ ಎನ್​ಸಿಪಿ ಪಕ್ಷದ ಅಜಿತ್ ಪವಾರ್‌ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಹಿಂದೆ 3 ಪಕ್ಷಗಳು ಸೇರಿ ಸರ್ಕಾರ ರಚನೆಗೆ ನಿರ್ಧರಿಸಿದ್ದವು. ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ಪಕ್ಷಗಳು ಸರ್ಕಾರ ರಚನೆಗೆ ನಿರ್ಧರಿಸಿದ್ದವು. ಆದ್ರೆ ಅಚ್ಚರಿ ಬೆಳವಣಿಗೆಯಲ್ಲಿ ಬಿಜೆಪಿ, ಎನ್‌ಸಿಪಿ ಸರ್ಕಾರ ರಚನೆ ಮಾಡಿವೆ. ವಿಡಿಯೋ ನೋಡಿ: ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್‌ ಪ್ರಮಾಣ ವಚನ […]

‘ಮಹಾ’ಅಚ್ಚರಿ! CM ಆಗಿ ದೇವೇಂದ್ರ ಫಡ್ನವಿಸ್‌ ಪ್ರಮಾಣ ವಚನ
ಸಾಧು ಶ್ರೀನಾಥ್​

Updated on: Nov 23, 2019 | 2:23 PM

ಮುಂಬೈ: ಮಹಾರಾಷ್ಟ್ರದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಾಗಿದ್ದು, ಬಿಜೆಪಿ-ಎನ್‌ಸಿಪಿ ಸೇರಿ ಸರ್ಕಾರ ರಚನೆ ಮಾಡಿವೆ. ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್‌ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಡಿಸಿಎಂ ಆಗಿ ಎನ್​ಸಿಪಿ ಪಕ್ಷದ ಅಜಿತ್ ಪವಾರ್‌ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಈ ಹಿಂದೆ 3 ಪಕ್ಷಗಳು ಸೇರಿ ಸರ್ಕಾರ ರಚನೆಗೆ ನಿರ್ಧರಿಸಿದ್ದವು. ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ಪಕ್ಷಗಳು ಸರ್ಕಾರ ರಚನೆಗೆ ನಿರ್ಧರಿಸಿದ್ದವು. ಆದ್ರೆ ಅಚ್ಚರಿ ಬೆಳವಣಿಗೆಯಲ್ಲಿ ಬಿಜೆಪಿ, ಎನ್‌ಸಿಪಿ ಸರ್ಕಾರ ರಚನೆ ಮಾಡಿವೆ.

ವಿಡಿಯೋ ನೋಡಿ: ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್‌ ಪ್ರಮಾಣ ವಚನ ಸ್ವೀಕಾರ

ಶಿವಸೇನೆಗೆ ಮಾಸ್ಟರ್ ಸ್ಟ್ರೋಕ್ ಕೊಟ್ಟ ಬಿಜೆಪಿ!
ಕಾಂಗ್ರೆಸ್, ಎನ್​ಸಿಪಿ ಜೊತೆ ಮೈತ್ರಿಗೆ ಶಿವಸೇನೆ ಮುಂದಾಗಿತ್ತು. ಈ ಮೂರೂ ಪಕ್ಷಗಳ ನಾಯಕರು ನಿರಂತರವಾಗಿ ಮಾತುಕತೆ ನಡೆಸುತ್ತಿದ್ದರು. ಸಚಿವ ಸ್ಥಾನದ ಹಂಚಿಕೆ ಬಗ್ಗೆಯೂ ಮಾತುಕತೆ ನಡೆದಿತ್ತು. ಶಿವಸೇನೆಯ ಉದ್ಧವ್ ಠಾಕ್ರೆಗೆ ಈ ಎರಡೂ ಪಕ್ಷಗಳು ಸಿಎಂ ಸ್ಥಾನ ಬಿಟ್ಟುಕೊಟ್ಟಿತ್ತು.

ಸರ್ಕಾರ ರಚನೆಗೂ ಮುನ್ನವೇ ರಾಷ್ಟ್ರಪತಿ ಆಡಳಿತ ವಾಪಸ್!
ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಎನ್‌ಸಿಪಿ ಸೇರಿ ಸರ್ಕಾರ ರಚನೆ ಮಾಡಿವೆ. ಆದ್ರೆ ಸರ್ಕಾರ ರಚನೆಗೂ ಮುನ್ನವೇ ರಾಷ್ಟ್ರಪತಿ ಆಡಳಿತವನ್ನು ಹಿಂಪಡೆಯಲಾಗಿದೆ. ಇಂದು ಮುಂಜಾನೆ 5.47ಕ್ಕೆ ರಾಷ್ಟ್ರಪತಿ ಆಡಳಿತವನ್ನು ವಾಪಸ್ ಪಡೆದಿದ್ದಾರೆ. ಮಹಾರಾಷ್ಟ್ರದಲ್ಲಿ ನವೆಂಬರ್ 12ರಿಂದ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿತ್ತು.

Published On - 8:23 am, Sat, 23 November 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us